ಹಿರಿಯೂರಲ್ಲಿ ಗಂಡನ ಕೊಲೆಗೈದು ಪ್ರಿಯಕರನೊಂದಿಗೆ ಸೇರಿ ಮಣ್ಣಲ್ಲಿ ಹೂತಿಟ್ಟ ಪತ್ನಿ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮದ್ದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಪತ್ನಿ ಮಣ್ಣಿನಲ್ಲಿ ಹೂತಿಟ್ಟ ಪ್ರಕರಣ ಬಯಲಾಗಿದೆ. ಗಂಡನ ತಲೆಗೆ ರಾಡ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿಸಿ ಮಣ್ಣಲ್ಲಿ ಹೂತಿಟ್ಟು ನಾಪತ್ತೆ ಪ್ರಕರಣ ದಾಖಲಿಸಿದ್ದಳು. ನಾಪತ್ತೆ ಪ್ರಕರಣದ ತನಿಖೆ ಆರಂಭಿಸಿದ ಅಬ್ಬಿನಹೊಳೆ ಪೊಲೀಸರಿಗೆ ಆಕೆಯ ಬಗ್ಗೆ ಅನುಮಾನ ಉಂಟಾಗಿತ್ತು. ವಿಚಾರಣೆ ನಡೆಸಿದಾಗ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದು ತಿಳಿದು ಬಂದಿದೆ. ಬಾಲಣ್ಣ
ರೈತ ದಸರಾಗೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಚಾಲನೆ
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ ರೈತ ದಸರಾ ೨೦೨೫ ಕಾರ್ಯಕ್ರಮಕ್ಕೆ ನಂದಿ ಪೂಜೆಯೊಂದಿಗೆ ನಗಾರಿ ಬಾರಿಸುವ ಮೂಲಕ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಇದೇ ವೇಳೆ ಹಳ್ಳಿಕಾರ್ ಎತ್ತಿಗೆ ಪೂಜೆ ಸಲ್ಲಿಸಿದರು. ರೈತ ದಸರಾ
ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಸಮೀಕ್ಷೆ ಕಾರ್ಯ ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ
NW KRTC ಅಧ್ಯಕ್ಷ ಸ್ಥಾನದಿಂದ ರಾಜು ಕಾಗೆ ವಜಾ ಇಲ್ಲ, ಪ್ರಿಂಟ್ ಮಿಸ್ಟೇಕ್ ಎಂದ ಸಿಎಂ
ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿಯಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಐಸಿಸಿ ಅರುಣ್ ಪಾಟೀಲ್ ಹೆಸರು ಉಲ್ಲೇಖಿಸಿರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಮ್ಮನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ
ಸರಕಾರಿ ಗೌರವಗಳೊಂದಿಗೆ ಎಸ್.ಎಲ್ ಭೈರಪ್ಪ ಅಂತ್ಯ ಸಂಸ್ಕಾರ
ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಅಂತ್ಯ ಸಂಸ್ಕಾರ ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿತು. ಅವರ ಪುತ್ರರಾದ ರವಿಶಂಕರ್, ಉದಯಶಂಕರ್ ಅಂತ್ಯ ಸಂಸ್ಕಾರದ ವಿಧಿ ವಿಧಾನ ಪೂರೈಸಿದರು. ಜೊತೆಗೆ ಸಹನಾ
ನಿಷ್ಕ್ರಿಯ ಅಬಕಾರಿ ಲೈಸೆನ್ಸ್ ಹರಾಜಿಗೆ ಸರ್ಕಾರ ಕ್ರಮ
ನಿಷ್ಕ್ರಿಯವಾಗಿರುವ ಅಬಕಾರಿ ಲೈಸೆನ್ಸ್‌ಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ 500 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ರ ಬಜೆಟ್‌ನಲ್ಲಿ ಈ ಹರಾಜು ಯೋಜನೆ ಘೋಷಿಸಿದ್ದು, ಎಲೆಕ್ಟ್ರಾನಿಕ್ ಹರಾಜಿನ
ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಅಮಾನುಷ ಥಳಿತ: ಅಂಗಡಿ ಮಾಲೀಕ ಅರೆಸ್ಟ್
ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಉಮೇದ್ ರಾಮ್ ಬಂಧಿತ, ಈತನ ವಿರುದ್ಧ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಥಳಿಸುತ್ತಿದ್ದ ವೀಡಿಯೊ ಸೋಶಿಯಲ್
ಔಷಧ ಆಮದು: 100% ಸುಂಕ ಘೋಷಿಸಿದ ಟ್ರಂಪ್, ಭಾರತದ ಆರ್ಥಿಕತೆ ಮೇಲೂ ಪರಿಣಾಮ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔಷಧಗಳ ಆಮದಿನ ಮೇಲೆ ಶೇ.100 ಸುಂಕ ಘೋಷಿಸಿದ್ದು, ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಅಡುಗೆ ಮನೆ ಪಿಠೋಪಕರಣಗಳ ಮೇಲೆ 50% ಹಾಗೂ ಸ್ನಾನಗೃಹ ಪಿಠೋಪಕರಣ ಆಮದುಗಳ ಮೇಲೆ 30% ಸುಂಕ ಹಾಗೂ ಹೆವಿ ಟ್ರಕ್‌ಗಳ ಮೇಲೆ 25%
ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲೇ ಸಮರ್ಪಕ ವಿದ್ಯುತ್ ಪೂರೈಸಲು ಕುಸುಮ್ ಸಿ’ಯೋಜನೆಗೆ ಭೂಮಿ ನೀಡಿ ಸಹಕರಿಸಿ
ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ‘ಕುಸುಮ್ ಸಿ’ಯೋಜನೆಗೆ ಭೂಮಿ ಗುತ್ತಿಗೆ ನೀಡುವ ಮೂಲಕ ರೈತರು ಬೆಂಬಲ ನೀಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್ ಶಿವಶಂಕರ್ ಮನವಿ ಮಾಡಿದ್ದಾರೆ. ಸೇವಾ ಪರ್ವ ಆಚರಣೆ ಕಾರ್ಯಕ್ರಮದ
NW KRTC ಅಧ್ಯಕ್ಷ ರಾಜು ಕಾಗೆ ಸ್ಥಾನಕ್ಕೆ ಕೊಕ್ ನೀಡಿದ “ಕೈ” ಕಮಾಂಡ್
ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್ ಹೈ ಕಮಾಂಡ್ ವಜಾಗೊಳಿಸಿದೆ. ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ




