Menu

ಗಂಟೆಗೆ ಸಾವಿರ ಕಿಮಿ ವೇಗದಲ್ಲಿ ಸಂಚರಿಸುವ ಲೂಪ್

ಚೆನ್ನೈ: ಗಂಟೆಗೆ ಸಾವಿರ ಕಿಮಿ ವೇಗದಲ್ಲಿ ಸಂಚರಿಸುವ ಹೈಪರ್‌ಲೋಪ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಕೆಲಸವನ್ನು ಐಐಟಿ ಮದ್ರಾಸ್ ಮಾಡುತ್ತಿದೆ. ಹೈಪರ್ಲೂಪ್‌ನ ವಾಣಿಜ್ಯ ಕಾರ್ಯಾಚರಣೆ ಒಪ್ಪಂದಕ್ಕೆ ಸಹಿ ಹಾಕಲು ಯೋಜಿಸಲಾಗಿದೆ ಎಂದು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವೀಜಿನಾಥನ್ ಕಾಮಕೋಟಿ ಹೇಳಿದ್ದಾರೆ. ಎರಡು ವರ್ಷಗಳ ಹಿಂದೆ ಭಾರತೀಯ ರೈಲ್ವೇಯ ಧನಸಹಾಯದೊಂದಿಗೆ ಪ್ರಾರಂಭವಾದ ಹೈಪರ್ಲೂಪ್ ತಂತ್ರಜ್ಞಾನ ಸಂಶೋಧನೆ ಈಗ ಒಂದು ಹಂತಕ್ಕೆ ಬಂದಿದೆ ಎಂದು ಅವರು ಹೇಳಿದರು. ಅಷ್ಟೇ ಅಲ್ಲ ಪ್ರಗತಿಯ ಕುರಿತು ವಿವರಗಳನ್ನು ಸಹ ಹಂಚಿಕೊಂಡಿದ್ದಾರೆ.

ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ  ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ

ಬೆಳಗಾವಿಯಲ್ಲಿ ಬಸ್‌ ಕಳ್ಳಿಯರ ಗ್ಯಾಂಗ್‌ ಸೆರೆ, ಚಿನ್ನಾಭರಣ ವಶ

ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ಬಳಿಕ  ಸರ್ಕಾರಿ ಬಸ್ಸುಗಳು  ಮಹಿಳೆಯರಿಂದ ತುಂಬಿ ತುಳುಕುತ್ತಿರುವುದನ್ನೇ  ದಾಳ ಮಾಡಿಕೊಂಡು ಬಸ್‌ ಗಳಲ್ಲಿ   ಕಳ್ಳತನ ಮಾಡುತ್ತಿದ್ದ ಕಳ್ಳಿಯರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ಅನಿತಾ ಚೌಗಲೆ, ನಿಶಾ ಲೊಂಡೆ, ಗಿಡ್ಡಿ

ಹಾಸನದಲ್ಲಿ ಹಾವನ್ನು ಕೊಂದು ಮಾಲೀಕನ ಜೀವವುಳಿಸಿ ಪ್ರಾಣ ತೆತ್ತ ನಾಯಿ

ಹಾಸನ ತಾಲೂಕಿನ ಕಟ್ಟಾಯ ಗ್ರಾಮದಲ್ಲಿ ಸಾಕು ನಾಯಿಯೊಂದು ಮನೆ ಮಾಲೀಕರು ಹಾಗೂ ಕೆಲಸಗಾರರ ಜೀವ ಉಳಿಸಲು ಪ್ರಾಣವನ್ನೇ ಪಣಕಿಟ್ಟು ಅಸು ನೀಗಿದೆ. ಸರ್ಪದ ಜತೆ ಕಾದಾಡಿದ ಪಿಟ್‌ಬುಲ್ ನಾಯಿಯ ಮುಖಕ್ಕೆ ಸರ್ಪ ಕಚ್ಚಿದ್ದರಿಂದ ಪ್ರಾಣ ಕಳೆದುಕೊಂಡಿದೆ. ಶಮಂತ್ ಎಂಬವರು ತೋಟದಲ್ಲಿ ಪಿಟ್‌ಬುಲ್

ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ

ಬೆಂಗಳೂರು ನಗರದ ಸ್ಯಾಂಕಿ ಟ್ಯಾಂಕ್​ನ ಬಫರ್ ಝೋನ್​ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಕಾವೇರಿ ಆರತಿ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ

ಅತ್ತಿಬೆಲೆಯಲ್ಲಿ ವಿವಾಹೇತರ ಸಂಬಂಧ ಶಂಕೆಯಿಂದ ಪತ್ನಿಯ ಕೊಲೆ

ಆನೇಕಲ್‌ನ ಅತ್ತಿಬೆಲೆ ಠಾಣಾ ವ್ಯಾಪ್ತಿಯ ರಾಚಾಮಾನಹಳ್ಳಿಯಲ್ಲಿ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಹಿಟ್ಟಿನ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಅನಿತಾ(27) ಕೊಲೆಯಾದ ಮಹಿಳೆ. ರಾಚಮಾನಹಳ್ಳಿಯ ವಾಸಿ ಬಾಬು(32) ಕೊಲೆ ಆರೋಪಿ. ಆರೋಪಿಗೆ ಇಬ್ಬರು ಪತ್ನಿಯರು, ನಾಲ್ಕು ಜನ ಮಕ್ಕಳಿದ್ದಾರೆ.

ಠಾಣೆಯಲ್ಲೇ ಜೂಜಾಡಿದ ಕಲಬುರಗಿಯ ಐವರು ಪೊಲೀಸರ ಅಮಾನತು

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಪೊಲೀಸ್‌ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್ ಮಿಯಾ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್

ಸುನೀತಾ ವಿಲಿಯಮ್ಸ್‌ ಸೇರಿ ಫ್ಲೋರಿಡಾ ಸಾಗರದಲ್ಲಿ ಇಂದು ಲ್ಯಾಂಡ್‌ ಆದ ನಾಲ್ವರು ಗಗನಯಾತ್ರಿಗಳು

ಒಂಬತ್ತು ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್‌ ಅವರನ್ನು ಇಂದು ನಸುಕಿನಲ್ಲಿ 3.27ಕ್ಕೆ ಸುರಕ್ಷಿತವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್‌ ಕ್ರೂ ಡ್ರ್ಯಾಗನ್

ದಿನಕ್ಕೆ 5 ಸಾವಿರ ರೂ.ಬೇಡಿಕೆ, ನಿತ್ಯ ಕಿರುಕುಳವೆಂದು ಪತ್ನಿ ವಿರುದ್ಧ ಬೆಂಗಳೂರು ಟೆಕ್ಕಿ ದೂರು

ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ನೀಡುವಂತೆ ಬೇಡಿಕೆ ಜೊತೆಗೆ ಮಕ್ಕಳು ಬೇಡ ಎಂದು ಪತ್ನಿ ತನಗೆ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಿ ಪತಿ ಶ್ರೀಕಾಂತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಟೆಕ್ಕಿ ಶ್ರೀಕಾಂತ್ ಹಾಗೂ ಮಹಿಳೆ 2022 ರಲ್ಲಿ ಮದುವೆ ಆಗಿದ್ದಾರೆ.

ಪೆನ್ನಾರ್ ನದಿ ನೀರು ವಿವಾದ ಸಭೆ ಮುಂದೂಡಿಕೆ

ಸೋಮವಾರ (ಮಾ.17) ಮಧ್ಯರಾತ್ರಿ ಹೊತ್ತಿಗೆ ತಮಿಳುನಾಡಿನವರು ಪೆನ್ನಾರ್ ಸಭೆಯನ್ನು ಬಹಿಷ್ಕರಿಸಿ ಪ್ರತ್ಯೇಕ ದಿನಾಂಕ ನೀಡಿ ಎಂದು ಕೇಳಿದ ಕಾರಣಕ್ಕೆ ಸಭೆಯನ್ನು ಮುಂಡೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಯಾರ ಬಳಿ ಮಾತನಾಡಬೇಕೊ ಅವರ ಬಳಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮುಂದಿನ ಸಭೆ ದಿನಾಂಕ ತಿಳಿಸಲಾಗುವುದು. ಇವತ್ತಿನ