Menu

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅಸ್ತು

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಇದರಿಂದ ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಭಕ್ತರಿಗೆ ಅನುಕೂಲ ಆಗಲಿದೆ ಎಂದಿದ್ದಾರೆ. ಇದೇ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದ್ದು,

ಸೋಷಿಯಲ್‌ ಮೀಡಿಯಾದಲ್ಲಿ ಹಳೆ ವೀಡಿಯೊ ಶೇರ್‌: ಬೆಂಗಳೂರಿನ ಯುವತಿಯ ಬಂಧನ

ಸಾಮಾಜಿಕ ಜಾಲತಾಣ ಖಾತೆಯಲ್ಲಿ ಯಾವುದೇ ಸತ್ಯಾಸತ್ಯತೆ ಪರಿಶೀಲಿಸದೆ ಹಳೆಯ ವೀಡಿಯೊವನ್ನು ಶೇರ್‌ ಮಾಡಿದ್ದ ಯುವತಿಯನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ನಿವಾಸಿ ಶಹಾ ಜಹಾನ್ (36) ಬಂಧಿತ ಯುವತಿ. ಆಕೆಗೆ ಎಚ್ಚರಿಕೆ ನೀಡಿ ಜಾಮೀನಿನಡಿ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಗುಲಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಆರ್‌. ಅಶೋಕ ಕಿಡಿ

ಸಿಎಂ ಸಿದ್ದರಾಮಯ್ಯ ಅವರು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ

ಸುಡಾನ್‌ನಲ್ಲಿ ಮಸೀದಿ ಮೇಲೆ ದಾಳಿ: 70ಕ್ಕೂ ಹೆಚ್ಚು ಮಂದಿ ಬಲಿ

ಸುಡಾನ್‌ನ ಉತ್ತರ ಡಾರ್ಫುರ್ ರಾಜಧಾನಿ ಎಲ್-ಫಾಶರ್‌ನ ಅಲ್-ಸಫಿಯಾ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆಯಲ್ಲಿ ತೊಡಗಿದ್ದ ಭಕ್ತರ ಮೇಲೆ ಬಾಂಬ್‌ ದಾಳಿ ನಡೆದಿದ್ದು, 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅರೆಸೈನಿಕ ಪಡೆಗಳಾದ ರ್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ನಡೆಸಿದ ದಾಳಿ ಇದಾಗಿದೆ ಎಂದು ತಿಳಿದು

ಕಾಡುವ ಮಳೆಗೆ ರಸ್ತೆ ಹಾಳಾದರೆ ಯಾರು ಹೊಣೆ?

ಸಿಲಿಕಾನ್ ಸಿಟಿ, ಐಟಿ-ಬಿಟಿ ನಗರಿ, ಉದ್ಯಾನವನ ನಗರಿ, ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿರುವ ನಗರ… ಹೀಗೆ ನಾನಾ ಬಿರುದುಗಳನ್ನು ಪಡೆದಿರುವ ಬೆಂಗಳೂರಿಗೆ ಈಗ ಗುಂಡಿ ನಗರ ಎಂಬ ಕುಖ್ಯಾತಿ ಅಂಟಿಸುವ ಪ್ರಯತ್ನಗಳು ನಡೆದಿವೆ. ಹೌದು, ಬೆಂಗಳೂರು ಗುಂಡಿಗಳ ನಗರಿ, ಪಾಟ್ ಹೋಲ್ ಸಿಟಿ

ಹೆಚ್‌-1ಬಿ ವೀಸಾ ವಾರ್ಷಿಕ ಶುಲ್ಕ ದುಬಾರಿ: ಭಾರತೀಯ ಉದ್ಯೋಗಿಗಳಿಗೆ ಸಂಕಷ್ಟವೊಡ್ಡಿದ ಟ್ರಂಪ್‌

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಚ್‌-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ ಏರಿಕೆ ಮಾಡುವ ಮೂಲಕ ಭಾರತೀಯ ಉದ್ಯೋಗಿಗಳ ಮೇಲೆ ಬರೆ ಎಳೆದಿದ್ದಾರೆ. ವಿದೇಶಿ ಉದ್ಯೋಗಿಗಳಿಗೆ ವಾರ್ಷಿಕ 1,00,000 ಡಾಲರ್ ವೀಸಾ ಶುಲ್ಕವನ್ನು ವಿಧಿಸುವ ಘೋಷಣೆಗೆ ಟ್ರಂಪ್‌ ಸಹಿ

ಬೆಂಗಳೂರು ಕೋ-ಲಿವಿಂಗ್ ಪಿಜಿ: ಸೆಕ್ಸ್‌ಗೆ ಒಪ್ಪದ ಯುವತಿಗೆ ಚಾಕು ಇರಿದ ಯುವಕ

ಬೆಂಗಳೂರಿನ ವೈಟ್‌‌ಫೀಲ್ಡ್‌ನಲ್ಲಿರುವ  ಕೋ-ಲಿವಿಂಗ್ ಪಿಜಿಯಲ್ಲಿ ಲೈಂಗಿಕ ಕ್ರಿಯೆಗೆ ಒಪ್ಪದ ಒಬ್ಬ ಯುವತಿಯನ್ನು ಅದೇ ಪಿಜಿಯಲ್ಲಿ ವಾಸವಿರುವ ಯುವಕ ಚಾಕುವಿನಿಂದ ಇರಿದು ಗಾಯಗೊಳಿಸಿದ್ದು, ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಕೋ-ಲಿವಿಂಗ್ ಪಿಜಿಯಲ್ಲಿರುವ ಬಾಬು ಎಂಬ ಟೆಕ್ಕಿ ಆರೋಪಿ. ಆತನಿಗೆ ಮದುವೆಯಾಗಿ ಮಗುವಿದ್ದರೂ ಪಿಜಿಯಲ್ಲಿ

ನಾವು 7ಸಾವಿರ ಗುಂಡಿ ಮುಚ್ಚಿದ್ದು, ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ: ಡಿಸಿಎಂ

“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ.  ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ಆದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಪ್ರಶ್ನಿಸಿದ್ದು,  ರಾಜಕೀಯ ಮಾಡುವವರು ಮಾಡಲಿ” ಎಂದು ಹೇಳಿದ್ದಾರೆ. ಸದಾಶಿವನಗರದ

ಕೊಪ್ಪಳದಲ್ಲಿ ಅನ್ನಭಾಗ್ಯದ 35 ಟನ್‌ ಅಕ್ಕಿ ಕಳ್ಳ ಸಾಗಣೆ

ಕೊಪ್ಪಳದ ಮುನಿರಾಬಾದ್‌ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ತಡೆದು ಲಾರಿಯಲ್ಲಿದ್ದ ೩೫ ಟನ್‌ ಅಕ್ಕಿಯನ್ನು ಸೀಝ್‌ ಮಾಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಭ್ರಷ್ಟರ ಪಾಲಾಗುವುದನ್ನು ತಡೆಯುವ

ಶ್ರೀರಂಗಪಟ್ಟಣದ ಟಿಪ್ಪು ವಕ್ಫ್ ಎಸ್ಟೇಟ್‌ನಲ್ಲಿ ಭ್ರಷ್ಟಾಚಾರ ಆರೋಪ

ಮಂಡ್ಯದ ಶ್ರೀರಂಗಪಟ್ಟಣದ ಷಹೀದ್ ಟಿಪ್ಪು ವಕ್ಫ್ ಎಸ್ಟೇಟ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.  ಮೈಸೂರಿನ‌ ಶಾಸಕ ಹಾಗೂ ಟಿಪ್ಪು ವಕ್ಫ್ ಕಮಿಟಿ ಅಧ್ಯಕ್ಷ ತನ್ವೀರ್ ಸೇಠ್ ಹಾಗೂ ಕಾರ್ಯದರ್ಶಿ ಇರ್ಫಾನ್ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ