ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು 40 ಕೋಟಿ ದಂಡ
ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಅಕ್ರಮ ಮರಳು ಸಾಗಾಟ ಮಾಡಿದವರ ವಿರುದ್ಧ 23,572 ಪ್ರಕರಣಗಳನ್ನ ಪತ್ತೆ ಹಚ್ಚಿ 7629 ಎಫ್ಐಆರ್
ನೀವು ಹೊಗಳೋ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ನೀವು ಮೋದಿ ಮೋದಿ ಅಂತ ಹೊಗಳ್ತಿರಲ್ಲ, ನಿಮ್ಮ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ಗುರುವಾರ ನಡೆದ ಚರ್ಚೆಯಲ್ಲಿ ಬಜೆಟ್ ಸಾಲದ ಕುರಿತು ಪ್ರಶ್ನಿಸಿದ ಬಿಜೆಪಿ ಸದಸ್ಯರಿಗೆ
ರನ್ಯಾ ಮನೆ ಮೇಲೆ ಇಡಿ ದಾಳಿ, ಪತಿ ಮನೆ ಮೇಲೆ ಡಿಆರ್ ಐ ದಾಳಿ!
ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ನಾಳೆ ಪ್ರಕಟವಾಗಲಿದ್ದು, ಈಗಾಗಲೇ ಡಿಆರ್ ಐ ಅಲ್ಲದೇ ಸಿಬಿಐ
ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69
ಒತ್ತೆಯಾಳುಗಳನ್ನೇ ಗುರಾಣಿಯಂತೆ ಬಳಕೆ: ಪಾಕಿಸ್ತಾನ ರೈಲು ಹೈಜಾಕ್ ನ 30 ಗಂಟೆಯ ರೋಚಕ ಕಾರ್ಯಾಚರಣೆ
ಪಾಕಿಸ್ತಾನಿ ಸೇನೆ 30 ಗಂಟೆಗಳ ರೋಚಕ ಕಾರ್ಯಾಚರಣೆ ನಡೆಸುವ ಮೂಲಕ ಬಂಡುಕೋರರು ಹೈಜಾಕ್ ಮಾಡಿದ್ದ ರೈಲು ಬಿಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆಯ ರೋಚಕ ಮಾಹಿತಿ ಒಂದೊಂದಾಗಿ ಹೊರಗೆ ಬರುತ್ತಿದೆ. ಬಲೂಚಿಸ್ತಾನ್ ಲಿಬರಲ್ ಆರ್ಮಿ 30 ಪಾಕ್ ಸೈನಿಕರನ್ನು ಕೊಂದು ಜಾಫರ್ ರೈಲನ್ನು ಹೈಜಾಕ್
ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ
ಬೆಂಗಳೂರು ಪೋತ್ಲಪ್ಪ ಗಾರ್ಡನ್‌ನ ಮನೆಯಲ್ಲಿ ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ (26) ಆತ್ಮಹತ್ಯೆ ಮಾಡಿಕೊಂಡ ಬಾಸ್ಕೆಟ್ ಬಾಲ್ ಕೋಚ್. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಸಾವಿನ ಬಗ್ಗೆ
ಪಕ್ಕದ ಮನೆಯ ಸ್ನೇಹಿತೆಯನ್ನೇ ಕೊಲೆಗೈದು ಚಿನ್ನ ಎಗರಿಸಿದ ಮಹಿಳೆ
ಮೈಸೂರಿನ ಕೆಸಿ.ಬಡಾವಣೆಯಲ್ಲಿ ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮಾ.5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆಯ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ
ಮಹದೇವಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಆರು ಮಂದಿಗೆ ಗಾಯ
ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಗುರುವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡು ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ. ನೀರು ಕಾಯಿಸಲು ಸಿಲಿಂಡರ್
ಚಾಮರಾಜಪೇಟೆಯಲ್ಲಿ ವಿದ್ಯುತ್ ತಗುಲಿ ಮಹಿಳೆ ಸಾವು, ಸ್ಥಳೀಯರ ಪ್ರತಿಭಟನೆ
ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಆನಂದಪುರದಲ್ಲಿ ನೀರು ಹಿಡಿಯುವಾಗ ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತಪಟ್ಟಿದ್ದಾರೆ. ಸೆಲ್ವಿ ಮೃತ ಮಹಿಳೆ. ಕೆ.ಆರ್. ಮಾರ್ಕೆಟ್ ರಸ್ತೆಯ ಈ ಪ್ರದೇಶದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟಾರ್ ಸಂಪರ್ಕ ನೀಡಲಾಗಿದೆ.
ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ




