ಏಪ್ರಿಲ್ 1ರಿಂದ ಹಾಲು, ಮೊಸರು ದರ ಏರಿಕೆ ಜಾರಿ: ಸಚಿವ ಕೆ.ವೆಂಕಟೇಶ್
ರಾಜ್ಯದಲ್ಲಿ ಏಪ್ರಿಲ್ 1ರಿಂದ ಹಾಲು, ಮೊಸರು ಸೇರಿದಂತೆ ಎಲ್ಲಾ ನಂದಿನಿ ಉತ್ಪನ್ನಗಳ ದರ ಏರಿಕೆ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಅನುಮೋದನೆ ದೊರೆತ ನಂತರ ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದಿನಿಯ ಎಲ್ಲಾ ಉತ್ಪನ್ನಗಳ ಬೆಲೆ ಲೀಟರ್ ಗೆ 4 ರೂ. ಏರಿಕೆ ಜಾರಿಗೆ ಬರಲಿದೆ ಎಂದರು. ಜೂನ್ 26, 2024ರಂದು ಹಾಲಿನ ದರ
ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಆದೇಶ
ಬೆಂಗಳೂರು: ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು
ಒಳಮೀಸಲಾತಿ : ನ್ಯಾ. ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಸಚಿವ ಸಂಪುಟ
ಶೀಘ್ರದಲ್ಲೇ ಕ್ಯಾನ್ಸರ್, ಸಕ್ಕರೆ ಕಾಯಿಲೆ ಔಷಧಗಳು ದುಬಾರಿ!
ನವದೆಹಲಿ: ಕೇಂದ್ರ ಸರ್ಕಾರದ ಬೆಲೆ ನಿಯಂತ್ರಣದಲ್ಲಿರುವ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಸಮಸ್ಯೆ ಮುಂತಾದ ಔಷಧಗಳು ಶೀಘ್ರದಲ್ಲೇ ದುಬಾರಿಯಾಗಲಿವೆ. ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಔಷಧಗಳ ಬೆಲೆಯಲ್ಲಿ ಶೇ.1.7ರಷ್ಟು ಏರಿಕೆಯಾಗಲಿವೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ. ಔಷಧಗಳ ತಯಾರಿಕೆಗೆ ಬೇಕಾದ
ವಿದೇಶಿ ವಾಹನಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಟ್ರಂಪ್!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದೇಶೀ ವಾಹನಗಳ ಆಮದು ಮೇಲೆ ಶೇ.25ರಷ್ಟು ಸುಂಕ ಹೇರುವುದಾಗಿ ಘೋಷಿಸಿದ್ದಾರೆ. ವಿದೇಶಗಳಲ್ಲಿ ಉತ್ಪಾದನೆ ಆಗುವ ಎಲ್ಲಾ ಮಾದರಿಯ ವಾಹನಗಳ ಆಮದು ಮೇಲೆ ಶೇ.25ರಷ್ಟು ಸುಂಕ ವಿಧಿಸಲಾಗಿದೆ. ಒಂದು ವೇಳೆ ಅಮೆರಿಕದಲ್ಲಿ ಉತ್ಪಾದಿಸಿದರೆ ಸುಂಕ ವಿಧಿಸುವುದಿಲ್ಲ ಎಂದು
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರದಿಂದ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಈ ವಿಚಾರವಾಗಿ ಮಾಧ್ಯಮಗಳನ್ನು ಉದ್ದೇಶಿಸಿಗುರುವಾರ ಮಾತನಾಡಿದ ಅವರು, ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ
ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಪ್ರತಿ ಲೀ.ಗೆ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ
ಬೆಂಗಳೂರು: ನಂದಿನಿ ಹಾಲಿನ ದರ ಪ್ರತೀ ಲೀಟರ್ ಗೆ 4 ರೂ. ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರದಲ್ಲಿ ಪ್ರತೀ ಲೀಟರ್ ಗೆ
ಚನ್ನಪಟ್ಟಣದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಅಸು ನೀಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ
ಶಾಸಕ ಯತ್ನಾಳ್ ಉಚ್ಚಾಟನೆ ಖಂಡಿಸಿ ರಾಜೀನಾಮೆ ನೀಡಿದ್ದ ಬೆಂಬಲಿಗ ಅಪಘಾತದಲ್ಲಿ ಸಾವು
ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಹುದ್ದೆಗೆ ರಾಜೀನಾಮೆ ನೀಡಿದ್ದ ಬೆಂಬಲಿಗ ಸಂತೋಷ್ ತಟಗಾರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿ ಬುಧವಾರ ಆದೇಶ
ಒಳ ಮೀಸಲು: ಮುಖ್ಯಮಂತ್ರಿಗೆ ಮಧ್ಯಂತರ ವರದಿ ಸಲ್ಲಿಸಿದ ನಿವೃತ್ತ ನ್ಯಾಮೂ ನಾಗಮೋಹನ್ ದಾಸ್
ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿಯನ್ನು ಸಲ್ಲಿಸಿ ಮಾತನಾಡಿದರು. ಎರಡು ತಿಂಗಳಿ




