Wednesday, August 19, 2026
Menu

ಶಾಸಕರು ಲೋಕಾಯುಕ್ತಕ್ಕೆ ಜೂ.30ರೊಳಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಶಾಸಕರು ಹಾಗೂ ಅವರ  ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂನ್ 30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ. 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಲೋಕಾಯುಕ್ತರಿಗೆ ಆಸ್ತಿವಿವರವನ್ನು ಶಾಸಕರು ನೇರವಾಗಿ ಸಲ್ಲಿಸಿ ಅದರ ಮಾಹಿತಿಯನ್ನು ಸಚಿವಾಲಯಕ್ಕೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಈ ಸಂಬಂಧ ಲೋಕಾಯುಕ್ತ ನಿಬಂಧಕರು ವಿಧಾನಸಭೆ

ಸತ್ಯವಂತರಿಗೆ ಕಾಲವಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಂಗಳೂರು:ಸತ್ಯವಂತರಿಗಿದು ಕಾಲವಲ್ಲ ಎಂದು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತಿಕ್ರಿಯಿಸಿದ್ದಾರೆ. ನಾನು ಪಕ್ಷದ‌ ಒಳಗಿನ ಸರ್ವಾಧಿಕಾರತ್ವ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ, ಏಕವ್ಯಕ್ತಿ ಆಡಳಿತವನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು

ಅಕ್ರಮ ಮರ ಕಡಿತರೆ ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಮಾ.26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ

ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲ

ಬೆಂಗಳೂರು: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವಿಭಜನೆ ಮಾಡುವ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್‌ ಕಳುಹಿಸಿದ್ದಾರೆ. ಇದರಿಂದ ಮುಖ್ಯಮಂತ್ರಿ ನೇತೃತ್ವದ ಸರ್ಕಾರವು ಮುಖಭಂಗ ಅನುಭವಿದೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ

ಹಾರ್ಲೆ ಬೈಕ್, ವಿಸ್ಕಿ ಆಮದು ಸುಂಕ ಕಡಿತಕ್ಕೆ ಭಾರತ ಚಿಂತನೆ

ತೆರಿಗೆ ಸಮರ ಆರಂಭವಾದ ಹಿನ್ನೆಲೆಯಲ್ಲಿ ಅಮೆರಿಕದ ಹಾರ್ಲೆ ಡೆವಿಡ್ಸನ್ ಬೈಕ್ ಮತ್ತು ಬೌರ್ನ್ ಬಾನ್ ವಿಸ್ಕಿ ಮೇಲಿನ ಆಮದು ಸುಂಕ ಕಡಿತಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅಮೆರಿಕ ಮತ್ತು ಭಾರತ ಆಮದು ಮತ್ತು ರಫ್ತು ಸುಂಕ ಹೇರಿಕೆ ಕುರಿತು ಮಾತುಕತೆ ನಡೆಸಲಿದ್ದು,

ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು

ಹಾಸನ ವರ್ತುಲ ರಸ್ತೆ ಯೋಜನೆ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಕೋರಿಕೆ

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,ರಾಜ್ಯಸಭೆ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ?

ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ

64 ಗಂಟೆಗಳಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ, ಮೌಂಟ್ ರೂಫಿಂಗ್ ವಿಶ್ವದಾಖಲೆ!

ಬೆಂಗಳೂರು: ತ್ವರಿತ ಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64 ಗಂಟೆಗಳಲ್ಲಿ 1.2 ಲಕ್ಷ ಚದರ ಅಡಿ ವಿಸ್ತಾರದ ಪ್ರೀ-ಎಂಜಿನಿಯರ್ಡ್ ಕಟ್ಟಡ ನಿರ್ಮಿಸುವ ಮೂಲಕ

ಸಿಎಂಗೆ ಹನಿಟ್ರ್ಯಾಪ್ ಭಯವಿದೆಯೇ ಎಂಬ ಅನುಮಾನ: ಛಲವಾದಿ ನಾರಾಯಣಸ್ವಾಮಿ

ಹನಿಟ್ರ್ಯಾಪ್ ವಿಚಾರದಲ್ಲಿ  ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ  ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿ ನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು  ಕಾಣುತ್ತಿ ದ್ದೇವೆ.