ಆಯುರ್ವೇದ ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಕೆ ಶಿವಕುಮಾರ್
ಆಯುರ್ವೇದ ಚಿಕಿತ್ಸಾ ಪದ್ಧತಿ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ಇದು ನಮ್ಮ ಮೂಲ. ಆಯುರ್ವೇದ ನಮ್ಮ ಆಸ್ತಿಯಾಗಿದ್ದು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾ ವಿಶ್ವವಿದ್ಯಾಲಯದ ಪುರುಷ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಶಿವಕುಮಾರ್ ಉದ್ಘಾಟಿಸಿ ಮಾತನಾಡಿದರು. “ಬೀಜ ಬಿತ್ತಿದಾಗ ಬೆಳೆ ಬರುತ್ತದೆ. ಜ್ಞಾನ ಬಿತ್ತಿದರೆ ಉತ್ತಮವಾದ ಪ್ರಜೆಗಳಾಗುತ್ತಾರೆ. ಆರೋಗ್ಯ ಉಳಿಸಿಕೊಳ್ಳಲು ಸುಮಾರು 5 ಸಾವಿರ ವರ್ಷಗಳ ಹಿಂದೆ
ಸೋಲಿನ ದವಡೆಯಿಂದ ಗೆಲುವು ಕಸಿದ ಅಶುತೋಷ್: 209 ರನ್ ಪೇರಿಸಿ ಸೋತ ಲಕ್ನೋ
ವಿಶಾಖಪಟ್ಟಣ: ಬಾಲಂಗೋಚಿ ಬ್ಯಾಟ್ಸ್ ಮನ್ ಗಳು ತೋರಿದ ಅಭೂತಪೂರ್ವ ಹೋರಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿನ ದವಡೆಯಿಂದ ಗೆಲುವು ಕಸಿದುಕೊಂಡು ಬೀಗಿದರೆ, ಗೆದ್ದೇ ಬಿಟ್ಟೆವು ಎಂದು ಬೀಗುತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ 1 ವಿಕೆಟ್ ನಿಂದ ಸೋಲುಂಡಿದೆ. ವಿಶಾಖಪಟ್ಟಣದಲ್ಲಿ ಸೋಮವಾರ ನಡೆದ
ರಾಜ್ಯ ಇತಿಹಾಸದಲ್ಲೇ 18 ಸಾವಿರ ಮೆ.ವ್ಯಾ. ದಾಖಲೆ ಪ್ರಮಾಣದ ವಿದ್ಯುತ್ ಬೇಡಿಕೆ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ. ಸೋಮವಾರ ಜಂಟಿ
ಸುಪ್ರೀಂ ಮೆಟ್ಟಿಲೇರಿದ ಹನಿಟ್ರ್ಯಾಪ್: ವಿಚಾರಣೆಗೆ ಅಂಗೀಕಾರ
ನವದೆಹಲಿ: ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಮಧುಬಲೆ ಪ್ರಕರಣವು ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದೆ. ಕರ್ನಾಟಕದಲ್ಲಿನ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ. ಸಂಜೀವ್
ಹಾಲು ಮಾರಾಟ ದರ ಹೆಚ್ಚಳ: ಕೆಎಂಎಫ್ ಮನವಿ ಸಿಎಂ ತಿರಸ್ಕಾರ
ಬೆಂಗಳೂರು: ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಪ್ರತಿ ಲೀಟರ್ ಹಾಲು, ಮಾರಾಟ
ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯ ಹೆಚ್ಚಳ
ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯಗಳು ಗಣನೀಯವಾಗಿ ಹೆಚ್ಚಾಗಿದ್ದು, 2025 ರ ಮೊದಲ ಎರಡು ತಿಂಗಳಲ್ಲಿ ಪ್ರತಿದಿನ ಸರಾಸರಿ 10 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಕಳೆದ 2024 ರಲ್ಲಿ, ಮಕ್ಕಳ ವಿರುದ್ಧದ 8,233 ಅಪರಾಧ ಪ್ರಕರಣಗಳು ದಾಖಲಾಗಿದ್ದವು 2023ರಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ
ಜಿಎಸ್ ಎಂಎ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ನೇಮಕ
ಸುನಿಲ್ ಭಾರ್ತಿ ಮಿತ್ತಲ್ ನಂತರ ಪ್ರತಿಷ್ಠಿತ ಟೆಲಿಕಾಂ ಉದ್ಯಮ ಸಂಸ್ಥೆಯ ಅಧ್ಯಕ್ಷತೆ ವಹಿಸಲಿರುವ 2ನೇ ಭಾರತೀಯ ಗೋಪಾಲ್ ವಿಠ್ಠಲ್ ಜಾಗತಿಕ ಟೆಲಿಕಾಂ ಉದ್ಯಮದಲ್ಲಿ ಏರ್ಟೆಲ್ನ ನಿರ್ಣಾಯಕ ಪಾತ್ರವನ್ನು ಈ ನೇಮಕಾತಿಯು ಎತ್ತಿ ತೋರಿಸುತ್ತದೆ. ಬೆಂಗಳೂರು, ಮಾರ್ಚ್ 24: GSMA ನಿರ್ದೇಶಕರ ಮಂಡಳಿಯು
ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು
ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವಗಾಡಿ ವಿತರಣೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು
ಮಂತ್ರಾಲಯಕ್ಕೆ 3.39 ಕೋಟಿ ನಗದು 1.280 ಕೆಜಿ ಬೆಳ್ಳಿ ಕಾಣಿಕೆ: ಭಕ್ತರಿಂದ ಎಣಿಕೆ ಫೋಟೊ ವೈರಲ್!
ರಾಯಚೂರು: ಭಕ್ತರ ಕಲ್ಪವೃಕ್ಷ ಮಂತ್ರಾಲಯದ ತುಂಗಾತೀರದಲ್ಲಿ ನೆಲೆಸಿರುವ ಶ್ರೀ ರಾಘವೇಂದ್ರ ಸ್ವಾಮಿಯ ಮಠಕ್ಕೆ ಕೋಟ್ಯಂತರ ರೂ ಕಾಣಿಕೆ ಹರಿದು ಬಂದಿದೆ. ಈ ತಿಂಗಳಲ್ಲಿ ರಾಯರ ಉತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಕಾಣಿಕೆಯಾಗಿ ಕೋಟಿಗಟ್ಟಲೆ ಹಣ ಮತ್ತು




