Menu

ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

ಚೆನ್ನೈ: “ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ ರಾಜ್ಯಗಳು ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡುತ್ತಿವೆ. ಶೈಕ್ಷಣಿಕ ಗುಣಮಟ್ಟದಲ್ಲಿ, ಆರ್ಥಿಕ ಬೆಳವಣಿಗೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸಾಕಷ್ಟು ಮುಂದಿದ್ದೇವೆ, ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದೇವೆ ಎಂದು ಹೇಳಿದರು.

18ನೇ ಐಪಿಎಲ್‌ಗೆ ಇಂದು ಚಾಲನೆ: ಹೊಸ ಕುದುರೆ ಏರಿ ಹಳೇ ಬೇಟೆಗೆ ಹೊರಟ ಆರ್‌ಸಿಬಿ

ಕೋಲ್ಕತಾ: ರಾಯಲ್ ಚಾಲೆಂಜರ್ಸ್ (ಆರ್‌ಸಿ) ಫ್ರಾಂಚೈಸಿ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕಿರೀಟಕ್ಕಾಗಿ ತನ್ನ 18ನೇ ಪ್ರಯತ್ನವನ್ನು ಪ್ರಾರಂಭಿಸುತ್ತಿದ್ದಂತೆ ಶಿಬಿರದಲ್ಲಿ ಉತ್ಸಾಹದ ಅಲೆ ಇದೆ. ಇನ್ನೂ ಐಪಿಎಲ್ ಗೆಲ್ಲದ ಮೂರು ತಂಡಗಳಲ್ಲಿ ಒಂದಾದ ಆರ್‌ಸಿ, ಐಪಿಎಲ್ 2025 ಗಾಗಿ ರಜತ್

ಜಿಲ್ಲಾ ಕೇಂದ್ರಿತ ನಾಯಕತ್ವಕ್ಕೆ ಕಾಂಗ್ರಸ್ ಒಲವು: ದಶಕಗಳ ಹಿಂದಿನ ಇಂದಿರಾ ಪ್ಲಾನ್‌ಗೆ ರಾಹುಲ್ ಒತ್ತಾಸೆ

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅವರ ಒತ್ತಾಸೆಯ ಮೇರೆಗೆ ಕಾಂಗ್ರೆಸ್ ಪಕ್ಷವು ಜಿಲ್ಲಾ ಕೇಂದ್ರತಿ ನಾಯಕತ್ವದ ವಿಧಾನಕ್ಕೆ ಬದಲಾಗುವ ಸಾಧ್ಯತೆಗಳು ಗೋಚರಿಸಿವೆ. 1970 ರ ದಶಕದ ಇಂದಿರಾ ಗಾಂಧಿ ಯುಗದಿಂದ ಸ್ಫೂರ್ತಿ ಪಡೆದು, ಜಿಲ್ಲಾ ಕಾಂಗ್ರೆಸ್

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಬಹುತೇಕ ಕಡೆ ಸಹಜ ಜೀವನ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ

18 ತಿಂಗಳಲ್ಲಿ 38 ವಿದೇಶ ಸುತ್ತಿದ ಪ್ರಧಾನಿ ಮೋದಿ: 258 ಕೋಟಿ ರೂ. ಖರ್ಚು!

ಪ್ರಧಾನಮಂತ್ರಿ ನರೇಂದ್ರ ಮೋದಿ 2022ರ ಮೇ ತಿಂಗಳಿನಿಂದ 2024ರ ಡಿಸೆಂಬರ್‌ವರೆಗೆ 38 ವಿದೇಶಿ ಪ್ರವಾಸಗಳನ್ನು ಕೈಗೊಂಡಿದ್ದು, ಇದಕ್ಕಾಗಿ ಸುಮಾರು 258 ಕೋಟಿ ರೂ. ಖರ್ಚಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟಾ, ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ

IP 2025 ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದು ಅನುಮನ!

ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನವಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆಯಲಿರುವ ಪಂದ್ಯ ಉದ್ಘಾಟನಾ ಸಮಾರಂಭದ ನಂತರ ನಡೆಯಲಿದೆ.

ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಿ: ಆರ್.ಅಶೋಕ ಆಗ್ರಹ

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ

ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ?: ಡಿಕೆ ಶಿವಕುಮಾರ್‌

ಬೆಂಗಳೂರು/ ಭಾಗಮಂಡಲ: ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು

ಕಾವೇರಿ ನದಿ ಮಲೀನತೆ, ಒತ್ತುವರಿ ತಡೆಯಲು ತಂಡ ರಚನೆ: ಡಿಕೆ ಶಿವಕುಮಾರ್

ಕೊಡಗು (ಭಾಗಮಂಡಲ): ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ

ನ್ಯಾಯಾಧೀಶರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ!

ನವದೆಹಲಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನ್ಯಾಯಮೂರ್ತಿಗಳ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹೋದಾಗ ಭಾರೀ