ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಬಸ್ ಗೆ ಡಿಕ್ಕಿ: 10 ಭಕ್ತರ ದುರ್ಮರಣ
ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ೧೯ ಮಂದಿ ಗಾಯಗೊಂಡಿದ್ದಾರೆ. ಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ
ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್ ಮೂಲಕ
ದಾಖಲೆ ಮೊತ್ತದ ರನ್ ಚೇಸ್ ಮಾಡಿ ಶುಭಾರಂಭ ಮಾಡಿದ ಆರ್ ಸಿಬಿ
ಮಧ್ಯಮ ಕ್ರಮಾಂಕದಲ್ಲಿ ರೀಚಾ ಘೋಷ್ ಮತ್ತು ಎಲ್ಸಿ ಪೆರ್ರಿ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳಿಂದ ರಾಜಸ್ಥಾನ್ ಜೈಂಟ್ಸ್ ವಿರುದ್ಧ ಐತಿಹಾಸಿಕ ಗೆಲುವಿನೊಂದಿಗೆ ಡಬ್ಲ್ಯೂಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ವಡೋದರಾದಲ್ಲಿ ಶುಕ್ರವಾರ
ಮಾರ್ಚ್ 19ಕ್ಕೆ ಸುನೀತಾ ವಿಲಿಯಮ್ಸ್ ಭೂಮಿಗೆ ವಾಪಸ್!
ಬಾಹ್ಯಕಾಶದಲ್ಲಿ ಕೆಲವು ತಿಂಗಳಿಂದ ಸಿಲುಕಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮಾರ್ಚ್ 19ರಂದು ಭೂಮಿಗೆ ಮರಳಲಿದ್ದಾರೆ. ಅಮೆರಿಕ ಬಾಹ್ಯಕಾಶ ಸಂಸ್ಥೆ ನಾಸಾ ಮಾರ್ಚ್ 10 ಮತ್ತು 11ರಂದು ಕ್ರ್ಯೂ-10 ಕಾರ್ಯಾಚರಣೆ ಆರಂಭಿಸಲಿದ್ದು, 8 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ಇರುವ ಗಗನಯಾತ್ರಿಗಳಾದ ಸುನೀತಾ
ಇನ್ವೆಸ್ಟ್ ಕರ್ನಾಟಕ ಯಶಸ್ಸು: ಹರಿದುಬಂದ 10.27 ಲಕ್ಷ ಕೋಟಿ ಬಂಡವಾಳ!
ರಾಜಧಾನಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು, ರಾಜ್ಯದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ
ನೂತನ ಮುಖ್ಯ ಚುನಾವಣಾ ಆಯುಕ್ತರ ನೇಮಕ ಮುಂದಿನ ವಾರ ಪ್ರಧಾನಿ ಸಭೆ
ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಮುಂದಿನ ವಾರದ ಆರಂಭದಲ್ಲಿ ಸಭೆ ಸೇರಲಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಇದೇ ಫೆಬ್ರವರಿ 18 ರಂದು
ತುಂಬಿದ ಕೊಡ ತುಳಿಕೀತಾಳೆ ಪರಾಕ್: ಮೈಲಾರಲಿಂಗೇಶ್ವರ ಕಾರ್ಣಿಕ
`ತುಂಬಿದ ಕೊಡ ತುಳುಕಿತಲೇ ಪರಾಕ್’ ಎಂದು ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿಯುವ ಮೂಲಕ ರೈತರಲ್ಲಿ ಹರ್ಷ ಮೂಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ರಾಮಣ್ಣ ಗೊರವಯ್ಯ ತುಂಬಿದ ಕೊಡ ತುಳುಕಿತಲೇ ಪಾರಕ್ ಎಂದು ಹೇಳಿದ್ದಾರೆ.
ಹೊಸ ಕೈಗಾರಿಕಾ ನೀತಿಯಿಂದ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ
ಮಕ್ಕಳ ಶಾಲಾ ದಾಖಲಾತಿ ವಯೋಮಿತಿಯಿಂದ ಅನ್ಯಾಯ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು
ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಸುಧೀನ್ ಕುಮಟಾ, ಮೇಘನಾ, ಶೀತಲ್ ಶೆಟ್ಟಿ ಮತ್ತಿತರರ ನಿಯೋಗ
40,000 ಜನರಿಂದ 1000 ಕೋಟಿ ರೂ. ವಂಚಿಸಿದ 26 ವರ್ಷದ ಯುವಕ!
ಅರ್ಧ ಬೆಲೆಗೆ ಸ್ಕೂಟರ್.. ಲ್ಯಾಪ್ ಟಾಪ್, ಗೃಹಪಯೋಗಿ ವಸ್ತುಗಳು ಸಿಗುತ್ತವೆ ಎಂದರೆ ಯಾರು ಬೇಡ ಅಂತಾರೆ. ಆದರೆ ಇದನ್ನೇ ಅಸ್ತ್ರವಾಗಿಟ್ಟುಕೊಂಡು 26 ವರ್ಷದ ಯುವಕನೊಬ್ಬ 40,000 ಜನರಿಗೆ ವಂಚಿಸಿದ್ದಾರೆ. ಹೌದು, ಕೇರಳ ಇತಿಹಾಸದಲ್ಲೇ ಅತೀ ದೊಡ್ಡ ವಂಚನೆ ಪ್ರಕರಣ ಎಂದು ಹೇಳಲಾಗಿದ್ದು,




