ಮರಳು ಮಾಫಿಯಾದ ದುಷ್ಕರ್ಮಿಗಳಿಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ
ಮರಳು ಮಾಫಿಯಾದ ದುಷ್ಕರ್ಮಿಗಳಿಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ಚೀಕಲಪರ್ವಿ ಗ್ರಾಮದ ಬಳಿ ನಡೆದ ಘಟನೆಯಲ್ಲಿ ಮಾನ್ವಿ ಪೊಲೀಸ್ಠಾಣೆಯ ಕಾನ್ಸ್ ಟೇಬಲ್ ಹೆಚ್. ಲಕ್ಷ್ಮಣ ಗಾಯಗೊಂಡಿದ್ದಾರೆ. ಚಿಕಲಪರ್ವಿ ಬಳಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಜಾಗಕ್ಕೆ ತಪಾಸಣೆ ನಡೆಸಲು ಹೋಂಗಾರ್ಡ್ ಸಿಬ್ಬಂದಿ ಜೊತೆ ತೆರಳಿದ್ದ ಕಾನ್ಸ್ ಟೇಬಲ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಹಣಕ್ಕಾಗಿ ತಂದೆಯನ್ನೇ ಕೊಂದ ಮಗ; ಮೊಮ್ಮಗನ ಕೃತ್ಯ ಬಾಯಿಬಿಟ್ಟ ಅಜ್ಜಿ
ಹಣಕ್ಕಾಗಿ ಹೆತ್ತ ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಮಾರ್ಚ್ 8ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿರದಳ್ಳಿ ತಾಂಡದ ನಿವಾಸಿ ಚೆನ್ನಾರೆಡ್ಡಿ ರಾಠೋಡ
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ) ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು. ಮೈಸೂರು ಮಹಾನಗರ ಪಾಲಿಕೆಯನ್ನು
ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್: 14 ದಿನ ನ್ಯಾಯಾಂಗ ಬಂಧನ
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್
ನಾನು, ಕೊಹ್ಲಿ ನಿವೃತ್ತಿ ಆಗುತ್ತಿಲ್ಲ: ರೋಹಿತ್ ಶರ್ಮ ಸ್ಪಷ್ಟನೆ
ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಎಕ್ಸ್ ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ರೋಹಿತ್ ಶರ್ಮ, ನಾನು ಮತ್ತು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ
ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಉದ್ಯಮಿ ಪುತ್ರ ಅರೆಸ್ಟ್
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಉದ್ಯಮಿ ಪುತ್ರನನ್ನು ಬಂಧಿಸಿದ್ದಾರೆ. ರನ್ಯಾ ರಾವ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ ನ ಮಾಲೀಕನ ತಮ್ಮ ಹಾಗೂ ಉದ್ಯಮಿ ಅವರ
ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನಟಿ ರನ್ಯಾ ಸ್ಮಗ್ಲಿಂಗ್ ಪ್ರಕರಣ
ಚಿನ್ನ ಕಳ್ಳಸಾಗಾಣೆ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಕುತೂಹಲದ ಚರ್ಚೆಗೆ ಕಾರಣವಾಯಿತು. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ರನ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಹವಾಲಾ, ಮಾಫಿಯಾ
ನಟಿ ಶಬಾನಾ ಆಜ್ಮಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ
ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್
ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ
ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್ ಮಾರಾಟ ನಿಷೇಧ
ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು




