Menu

ಚಿತ್ರದುರ್ಗದಲ್ಲಿ ಕಾರು ಟೈರ್‌ ಸ್ಫೋಟಗೊಂಡು ಐವರ ಸಾವು

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್‌ ಮೃತಪಟ್ಟವರು. ಇವರೆಲ್ಲ ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಬರುತ್ತಿದ್ದಾಗ ಅತಿ ವೇಗದಿಂದ ಕಾರಿನ ಟೈಯರ್‌ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ‌ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಗುರುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ವಿಶೇಷ ವಿವೇಚನಾಧಿಕಾರ

ಅಹಿಂದ ಕೈಗೆ ನಿಜವಾದ ಅಧಿಕಾರ ಮುನ್ನವೇ ನಾಯಕನ ನಿರ್ಗಮನ

ರಾಜ್ಯದಲ್ಲಿ ಅಹಿಂದ ವರ್ಗಕ್ಕೆ ನಿಜವಾದ ಅಧಿಕಾರ ಸಿಗಬೇಕೆಂದು ಕಳೆದ ೫೦ ವರ್ಷಗಳಿಂದ ರಾಜಕೀಯ ಹೋರಾಟ ನಡೆಸುತ್ತ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿಯನ್ನು ತ್ಯಜಿಸಿ ರಾಜ್ಯ ರಾಜಕಾರಣದಲ್ಲೇ ಸಕ್ರಿಯವಾಗಿ ಇರುವುದಾಗಿ ಪ್ರಕಟಿಸಿದ್ದಾರೆ. ಇದು ಹಿಂದುಳಿದ ವರ್ಗಗಳಿಗೆ ತಂದ ಬೇಸರದ ಸಂಗತಿ ಎಂಬುದರಲ್ಲಿ ಎರಡು

ರಾಜೀನಾಮೆಗೂ ಮೊದಲು ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಮಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದಕ್ಕೆ ಮೊದಲೇ ಅವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ

ರೋಗಿಯೊಂದಿಗೆ ಅಕ್ರಮ ಸಂಬಂಧ: ಇಂಗ್ಲೆಂಡ್‌ನಲ್ಲಿ ಡಾ. ಚಿರಾಗ್ ಪಟೇಲ್ ಲೈಸೆನ್ಸ್‌ ರದ್ದು

ಇಂಗ್ಲೆಂಡ್​​ನ ವೈದ್ಯ ಡಾ. ಚಿರಾಗ್ ಪಟೇಲ್ ತಮ್ಮ ರೋಗಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಗೆ ಅಫೀಮು ಆಧರಿತ ಮಾದಕ ದ್ರವ್ಯ ನೀಡಿದ್ದ ಕಾರಣಕ್ಕೆ ವೈದ್ಯಕೀಯ ಲೈಸೆನ್ಸ್ ರದ್ದುಗೊಳಿಸಲಾಗಿದೆ. ಅಲ್ಲಿನ ವೈದ್ಯಕೀಯ ವೃತ್ತಿಯ ನೀತಿ ಸಂಹಿತೆಯ ಪ್ರಕಾರ, ವೈದ್ಯರು ತಮ್ಮ ರೋಗಿಗಳೊಂದಿಗೆ

ಸಿಗಂದೂರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶಿವಮೊಗ್ಗದ ಸಾಗರದಲ್ಲಿರುವ ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನದಿ ಸೇತುವೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉಮೇಶ್ (35) ಮುಳುಗಿ ಮೃತಪಟ್ಟವರು. ಆಂಧ್ರದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕು ಗಲಗಲಿ ಗ್ರಾಮದ ಉಮೇಶ್ ಕುಟುಂಬಸ್ಥರು

ರಾಜೀನಾಮೆ ನೀಡಿದ್ದೇನೆ, ರಾಜ್ಯಕ್ಕೆ ಶೀಘ್ರ ಹೊಸ ಸಿಎಂ ಬರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿದಾಯದ ಮಾತುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,  ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವೆ, ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದ ಬಳಿಕ  ಪತ್ರಿಕಾಗೋಷ್ಠಿಯಲ್ಲಿ  ವಿದಾಯದ ಮಾತುಗಳನ್ನು ಆಡಿದ್ದಾರೆ.  ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು

18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್‌ ರಾಜ್ಯ ರಾಜಕಾರಣದ ಪಯಣ

18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್‌ ರಾಜ್ಯ ರಾಜಕಾರಣದ ಪಯಣ ಸಾಗಿ ಬಂದ ಪ್ರಮುಖ ಹಂತಗಳ ಮೇಲೆ ಬೆಳಕು ಚೆಲ್ಲುವ  ಮಾಹಿತಿಗಳು ಇಲ್ಲಿವೆ,  ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ

ರಾಜ್ಯಪಾಲರ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರ ಹಸ್ತಾಂತರ ಚರ್ಚೆಗೆ ಅಂತ್ಯ ಹಾಡಿದ್ದಾರೆ. ರಾಜ್ಯಪಾಲರು ರಾಜಭವನದಲ್ಲಿ ಇಲ್ಲದ ಕಾರಣ ಸಿಎಂ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಸಲ್ಲಿಕೆಗೂ ಮೊದಲು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ: ಎಂಜಿನಿಯರ್‌ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರಿನಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಂಬಿ.ನಾಗರಾಜ್ ಅವರ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ರಜೆ