ರಾಯಚೂರು: 11 ವರ್ಷದ ಬಾಲಕಿ ಮೇಲೆ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರ!
ಚಾಕೋಲೇಟ್ ಕೊಡಿಸುವುದಾಗಿ ನಂಬಿಸಿ 43 ವರ್ಷದ ವ್ಯಕ್ತಿ 11 ವರ್ಷದ ಬಾಲಕೀಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಆರೋಪಿ ಚಂದ್ರಶೇಖರ್ ಯಲ್ಲಪ್ಪ (43) ನನ್ನು ಪೊಲೀಸರು ಬಂಧಿಸಿದ್ದಾರೆ. 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಮೇಲೆ ಸೋಮವಾರ ಮಧ್ಯಾಹ್ನ ಊಟದ ವಿರಾಮ ಬಿಟ್ಟ ಸಮಯದಲ್ಲಿ ಶಾಲೆಯ ಹೊರಗಡೆ ಇರುವ ಅಂಗಡಿಯಲ್ಲಿ ತಿಂಡಿ, ತಿನಿಸು
ಅಯೋಧ್ಯೆ ರಾಮಮಂದಿರ ದರ್ಶನ ಸಮಯದಲ್ಲಿ ಬದಲಾವಣೆ!
ಮಹಾಕುಂಭ ಮೇಳಕ್ಕೆ ಜನರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮಮಂದಿರ ದರ್ಶನದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಕುಂಭಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿಂದ 140 ಕಿ.ಮೀ. ದೂರದಲ್ಲಿರುವ ಅಯೋಧ್ಯೆಯ ರಾಮಮಂದಿರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಒತ್ತಡ
ದೆಹಲಿ ಕೈತಪ್ಪಿದ ಬೆನ್ನಲ್ಲೇ ಪಂಜಾಬ್ ಉಳಿಸಿಕೊಳ್ಳಲು ಮುಂದಾದ ಆಪ್!
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. ಸುಮಾರು 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ
ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸುವಂತೆ ಮೇಲ್ಮನವಿ ಸಲ್ಲಿಸುವುದಿಲ್ಲ: ಸ್ನೇಹಮಯಿ ಕೃಷ್ಣ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ಹಂಚಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ
ಧರ್ಮದ ಅವಹೇಳನೆಯ ಪೋಸ್ಟ್: ಮೈಸೂರಿನಲ್ಲಿ ಘರ್ಷಣೆ
ಮೈಸೂರು: ರಾಜಕೀಯ ನಾಯಕರ ಅರೆ ಬೆತ್ತಲೆ ಚಿತ್ರದ ಮೇಲೆ ಒಂದು ಧರ್ಮದ ಕುರಿತು ಅವಹೇಳನಕಾರಿ ಪದಗಳ ಬಳಸಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಉದಯಗಿರಿಯಲ್ಲಿ ಘರ್ಷಣೆ ನಡೆದಿರುವ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ವ್ಯಕ್ತಿಯೊಬ್ಬರೂ ರಾಷ್ಟ್ರೀಯ ರಾಜಕೀಯ ನಾಯಕರ
ರಾಜ್ಯಪಾಲರ ಅಂಗಳದಲ್ಲಿ ಮತ್ತೆ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ
ಮೈಕ್ರೊ ಫೈನಾನ್ಸ್ ಹಾವಳಿ ತಡೆಯಲು ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೆಲವು ಸ್ಪಷ್ಟೀಕರಣ ಕೇಳಿ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ ರಾಜ್ಯಪಾಲರು ಕೇಳಿದ ಎಲ್ಲಾ ಅನುಮಾನಗಳಿಗೆ ಸೂಕ್ತ
ದೆಹಲಿಗೆ ಹೊಸ ಮಹಿಳಾ ಸಿಎಂ?
ದೆಹಲಿಯಲ್ಲಿ ಭರ್ಜರಿ ಗೆಲುವಿನೊಂದಿಗೆ 2 ದಶಕದ ನಂತರ ಅಧಿಕಾರ ಹಿಡಿದಿರುವ ಬಿಜೆಪಿ ಮಹಿಳಾ ಸಿಎಂ ನೇಮಕ ಮಾಡಲು ಚಿಂತನೆ ನಡೆಸಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48ರಲ್ಲಿ ಗೆಲುವು ಸಾಧಿಸಿದ ಬಿಜೆಪಿ 27 ವರ್ಷದ ನಂತರ ಅಧಿಕಾರದ ಗದ್ದುಗೆ
ಬೆಂಗಳೂರಿನಲ್ಲಿ ಮೊದಲ ಬಾರಿ ರಷ್ಯಾ- ಅಮೆರಿಕ ಯುದ್ಧ ವಿಮಾನಗಳ ಮುಖಾಮುಖಿ
ಅಮೆರಿಕ ಮತ್ತು ರಷ್ಯಾದ ಸ್ಲೇಥ್ (ಅತ್ಯಾಧುನಿಕ ಯುದ್ಧ ವಿಮಾನ) ಮೊದಲ ಬಾರಿ ಮುಖಾಮುಖಿ ಆಗುವ ಮೂಲಕ ಬೆಂಗಳೂರಿನಲ್ಲಿ ಸೋಮವಾರ ಆರಂಭಗೊಂಡ ಅತೀ ದೊಡ್ಡ ಏರ್ ಶೋನಲ್ಲಿ ಪ್ರಮುಖ ಆಕರ್ಷಣೆ ಪಡೆದವು. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಸೋಮವಾರ 15ನೇ ಆವೃತ್ತಿಯ ಏರ್ ಶೋ
ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ
ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ
ಸ್ಟೀಲ್, ಅಲ್ಯೂಮಿನಿಯಂ ಆಮದು ಮೇಲೆ ಶೇ.25ರಷ್ಟು ತೆರಿಗೆ ವಿಧಿಸಿದ ಡೊನಾಲ್ಡ್ ಟ್ರಂಪ್!
ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಒಂದರ ಮೇಲೋಂದರಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ ಸ್ಟೀಲ್ ಮತ್ತು ಅಲ್ಯೂಮಿನಿಯಂ ಆಮದು ಮೇಲೆ ಹೆಚ್ಚುವರಿ ಶೇ.25ರಷ್ಟು ತೆರಿಗೆ ಹೇರಲು ಮುಂದಾಗಿದ್ದಾರೆ. ಭಾನುವಾರ ಏರ್ ಫೋರ್ಸ್ ನಲ್ಲಿ ಮಾಧ್ಯಮಗಳ ಜೊತೆ




