ಚಾಮರಾಜನಗರದಲ್ಲಿ ಭೀಕರ ಅಪಘಾತ: ಮಾದಪ್ಪನ 5 ಭಕ್ತರ ದುರ್ಮರಣ
ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಉರುಳಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಐವರೂ ಸಹ ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಮಾದಪ್ಪನ ಭಕ್ತರು ಕೊಳ್ಳೇಗಾಲ ಕಡೆಯಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋರಟಿದ್ದರು
ರಾಜ್ಯದ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮ ಸೇರ್ಪಡೆ: ಡಿಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕ ವಿವಿಧ ಆಯಾಮಗಳನ್ನು ಹೊಂದಿರುವ ರಾಜ್ಯ. ಕರ್ನಾಟಕ ಇಡೀ ಭಾರತದಲ್ಲಿಯೇ ವೈವಿಧ್ಯಮಯ ಪ್ರವಾಸೋದ್ಯಮಕ್ಕೆ ತಕ್ಕನಾಗಿದೆ. ಈ ಕಾರಣಕ್ಕೆ ನಮ್ಮ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮವನ್ನು ಪ್ರಮುಖವಾಗಿ ಸೇರ್ಪಡೆ ಮಾಡಿದ್ದೇವೆ. ಸಾಕಷ್ಟು ಪ್ರೋತ್ಸಾಹ ನೀಡುತ್ತಾ ಇದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಮಾರ್ಚ್ 4 ಬೆಂಗಳೂರಿನಲ್ಲಿ ವೀರಶೈವ, ಲಿಂಗಾಯಿತ ಮುಖಂಡರ ಸಭೆ: ರೇಣುಕಾಚಾರ್ಯ
ತುಮಕೂರು: ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ಖಾತೆ ತೆರೆಯುವಂತಾಗಲು ಹಗಲಿರುಳು ಪಕ್ಷಕ್ಕಾಗಿ ದುಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ಅವರನ್ನು ಕೆಲ ಬಿಜೆಪಿ ಮುಖಂಡರು ಬಹಳ ಹೀನಾಯವಾಗಿ ಮಾತನಾಡುತಿದ್ದು, ಅವರಿಗೆ ಬಿ.ಎಸ್.ಯಡಿಯೂರಪ್ಪನವರ ಬಲ ಏನು ಎಂಬುದನ್ನು ತೋರಿಸುವ ಸಲುವಾಗಿ ಮಾರ್ಚ್
ರಾಜ್ಯಗಳ ತೆರಿಗೆ ಪಾಲು ಶೇ.40ಕ್ಕೆ ಕಡಿತ: ಸಿಎಂ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ
ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ. ರಾಜ್ಯದ ತೆರಿಗೆ ಪಾಲನ್ನು ಶೇ. 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ
ಟ್ಯಾಟೊದಿಂದ ಎಚ್ ಐವಿ, ಚರ್ಮರೋಗ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಮತ್ತು ಟ್ಯಾಟೊ ಹಾಕಿಸಿಕೊಳ್ಳುವುದರಿಂದ ಎಚ್ ಐವಿ, ಚರ್ಮರೋಗ ಮುಂತಾದ ಮಾರಕ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ
ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಡಿಕೆ ಶಿವಕುಮಾರ್ ಕಿವಿಮಾತು
ಬೆಂಗಳೂರು: ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ
ಉತ್ತರಾಖಂಡದಲ್ಲಿ ಹಿಮಪಾತ: 42 ಕಾರ್ಮಿಕರು ಸಿಲುಕಿರುವ ಶಂಕೆ
ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, 42 ಕಾರ್ಮಿಕರು ಸಿಲುಕಿರುವ ಭೀತಿ ಇದೆ. ಭಾರತ-ಟಿಬೆಟ್ ಗಡಿ ಭಾಗದಲ್ಲಿರುವ ಮಾನಾ ಗ್ರಾಮದ ಸೇನಾ ಶಿಬಿರದ ಬಳಿ ಹಿಮಪಾತ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯ ನಡೆಸಿ 15 ಮಂದಿಯನ್ನು ರಕ್ಷಿಸಲಾಗಿದೆ. ಬದರೀನಾಥ
ಮಾ.22ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ
ಮಹಿಳಾ ದಿನಾಚರಣೆಯಂದು ವಂಡರ್ ಲಾದಿಂದ ವಿಶೇಷ ಕೊಡುಗೆ ಘೋಷಣೆ
ವಂಡರ್ಲಾ ಹಾಲಿಡೇಸ್ ಲಿಮಿಟೆಡ್: ಮಹಿಳಾ ದಿನಾಚರಣೆಯಂದು ತನ್ನೆಲ್ಲ ಪಾರ್ಕ್ಗಳಲ್ಲಿ ವಿಶೇಷ 1 ಕೊಂಡರೆ 1 ಉಚಿತ, ಕೊಡುಗೆಯನ್ನು ಪ್ರಾರಂಭಿಸಿದೆ. ಈ ಅವಕಾಶ ಮಹಿಳೆಯರಿಗೆ ಮಾತ್ರ. ಮಹಿಳಾ ದಿನದಂದು 10 ವರ್ಷಕ್ಕಿಂತ ಮೇಲ್ಪಟ್ಟ ಪುರುಷರಿಗೆ ಪಾರ್ಕ್ ಒಳಗೆ ಪ್ರವೇಶವಿಲ್ಲ. ರಾಷ್ಟ್ರೀಯ, 28, 2025:




