Menu

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂ. ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಜಲಾನಯನ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ನಡೆದ ಕೃಷಿ ಉತ್ಪಾದಕ ಸಂಸ್ಥೆಗಳ ಮೇಳ ಉದ್ಘಾಟಿಸಿ ಸಚಿವರು ಮಾತನಾಡಿದರು. ಸರ್ಕಾರವು ಪ್ರತಿ

ತಪ್ಪು ಮುಚ್ಚಿಕೊಳ್ಳಲು ಸಿಎಂ ಕ್ಷೇತ್ರ ಮರುವಿಂಗಡಣೆ ಕುರಿತು ಅಪಸ್ವರ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು

ಮಾ.15 ನಂತರ ನೂತನ ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕ!

ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಮಾರ್ಚ್ 15ರ ನಂತರ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ಮಾಡಲು ಚಿಂತನೆ ನಡೆದಿದೆ. ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ

ಅನುದಾನ ಬಿಡುಗಡೆಗೆ ಸಿಎಂಗೆ ಬೆಂಗಳೂರಿನ ಬಿಜೆಪಿ ಶಾಸಕರು, ಸಂಸದರಿಂದ ಮನವಿ

ಈ ಬಾರಿಯ ಬಜೆಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಲಾ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ

ಕುಟುಂಬದ ಜೊತೆ ಕಟೀಲು ದುರ್ಗೆಯ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ

ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ

ದರ್ಶನ್‌ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್‌

ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್‌ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ

ಕೇಂದ್ರದ ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪ ವಿರುದ್ಧ ತಿರುಗಿಬಿದ್ದ ದಕ್ಷಿಣ ಭಾರತ ರಾಜ್ಯಗಳು!

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿಸಿದ ಕ್ಷೇತ್ರ ಪುನರ್ ವಿಂಗಡಣೆ ವಿಷಯ ಇದೀಗ ವಿವಾದಕ್ಕೆ ತಿರುಗಿದ್ದು, ಪ್ರತಪಕ್ಷಗಳನ್ನು ಹಣಿಯಲು ಮಾಡಿರುವ ತಂತ್ರ ಎಂದು ದಕ್ಷಿಣ ಭಾರತ ರಾಜ್ಯ ಸರ್ಕಾರಗಳು ತಿರುಗಿಬಿದ್ದಿವೆ. ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪಕ್ಕೆ ಕರ್ನಾಟಕ, ತಮಿಳುನಾಡು ಹಾಗೂ

ಹಲವು ದೇಶಗಳಲ್ಲಿ ಇಂದು ಕಂಪಿಸಿದ ಭೂಮಿ

ಪಾಕಿಸ್ತಾನ ಸೇರಿದಂತೆ ಶುಕ್ರವಾರ ಬೆಳಗ್ಗೆಯೇ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದೆ. ನೇಪಾಳದಲ್ಲಿ ಭೂಕಂಪನ ದಾಖಲಾದ ಕೆಲವೇ ಗಂಟೆಗಳಲ್ಲಿ ಪಾಕ್ ನಲ್ಲೂ ಭೂಕಂಪನ ಆಗಿದೆ. ಪಾಕಿಸ್ತಾನದಲ್ಲಿ ಬೆಳಗಿನ ಜಾವ 5.14ಕ್ಕೆ 4.5 ತೀವ್ರತೆಯ ಭೂಕಂಪ ದಾಖಲಾಗಿದೆ. ಭೂಕಂಪದ ಆಳ 10 ಕಿ.ಮೀ ದಾಖಲಾಗಿದೆ.

ಮೈಸೂರು ಒಡೆಯರ್‌ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.