Menu

ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಗೆ ಎಬೋಲಾ ಸೋಂಕು?

ಉಗಾಂಡಾದಿಂದ ಬೆಂಗಳೂರಿಗೆ ಬಂದಿರುವ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡು ಆಕೆಯನ್ನು ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾ ತೆಗೆದುಕೊಂಡಿದೆ. ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದಿವೆ, ಸೋಂಕು ದೃಢೀಕರಣಕ್ಕಾಗಿ ರಕ್ತದ ಮಾದರಿಗಳನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಸೋಂಕು ದೃಢಪಟ್ಟಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ.ವರದಿ ಬರುವವರೆಗೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿ ಮಹಿಳೆಯ

ಜೊತೆಯಲ್ಲಿದ್ದ ಅಂಧ ಮಹಿಳೆಯ ಚಿನ್ನ, ನಗದು ದೋಚಿದ್ದ ದಂಪತಿ ಸೆರೆ

ಎಂಟು ವರ್ಷಗಳಿಂದ ಜೊತೆಯಲ್ಲೇ ವಾಸವಿದ್ದು ಅಂಧ ಮಹಿಳೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.  ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ ಮತ್ತು ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ ಬಂಧಿತರು. ಅಂಧ ಸಂತ್ರಸ್ತೆ ಕಳೆದ ಎಂಟು

ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್‌ಗೆ ಅಧಿಕಾರ?

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಜಟಾಪಟಿ ಕೊನೆಯ ಹಂತಕ್ಕೆ ಬಂದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಗುರುವಾರ) ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ, ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ಪತ್ರ ರವಾನಿಸಿದ್ದಾರೆ.

ಪ್ರತ್ಯೇಕ ಧಾರವಾಡ ಪಾಲಿಕೆ ರಚನೆಗೆ ರಾಜ್ಯಪಾಲರು ಅಸ್ತು

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಕೊನೆಗೂ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಂಕಿತ ಹಾಕಿದ್ದಾರೆ.  ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಯದಾಗಿ ಅದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. ಆದರೆ ರಾಜ್ಯಪಾಲರು ಅದಕ್ಕೆ ಅಂಕಿತ ಹಾಕದೇ ತಮ್ಮ ಬಳಿ

ಬೆಂಗಳೂರಿನಲ್ಲಿ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದ ರೇಡಿಯೊ ಜಾಕಿ ಸುಸೈಡ್‌

ರೇಡಿಯೋ ಜಾಕಿಯಾಗಿದ್ದ ಮುಂಬೈನ ಮಹಿಳೆ ಮನಿಷಾ ಎಂಬವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ ಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರಾಕಾರ ಮಳೆಗೆ ಮೇಲ್ಛಾವಣಿಯ ಕಲ್ಲು ಬಿದ್ದು ಬಾಲಕಿ ಸಾವು

ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆ ಸುರಿದ ರಭಸಕ್ಕೆ ಮನೆಯ ಮೇಲ್ಛಾವಣಿ ಮೇಲಿಟ್ಟಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಮೂರು ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್

ಕರ್ನಾಟಕದಲ್ಲಿ ಬಿಜೆಪಿಗೆ ದಳ ಅನಿವಾರ್ಯವೇ?

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿ ಅಧಿಕಾರ ನಡೆಸಿದ್ದುಂಟು. ಆದರೆ ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ೧೩೬ ಸೀಟು ಗಳಿಸಿ ಅಧಿಕಾರ ನಡೆಸುವ ಅಚಲ ವಿಶ್ವಾಸವನ್ನು ಹೊಂದಿದೆಯೇ ಎಂಬುದು ಗಂಭೀರ ಪ್ರಶ್ನೆ. ರಾಜ್ಯದಲ್ಲಿ ಬಿಜೆಪಿಗೆ ಜೆಡಿಎಸ್ ಸಖ್ಯ ಅನಿವಾರ್ಯವೇ

ಮೇಕೆದಾಟು ಡಿಪಿಆರ್‌ ತಿರಸ್ಕರಿಸಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್‌ ಆಗ್ರಹ

ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯ ಭೂಮಿ ಪೂಜೆಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿ, ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಅಲ್ಲಿನ ಸಿಎಂ ವಿಜಯ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಈ ಯೋಜನೆಯಿಂದ ಜೀವನೋಪಾಯಕ್ಕಾಗಿ

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಡೆ

ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯವು ತಡೆ ನೀಡಿದೆ. ಈಗಿರುವ ಕಾನೂನು ವ್ಯವಸ್ಥೆ ಸಮರ್ಪಕವಾಗಿದೆ. ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಧನ್ಯವಾದ ಎಂದ ಡಿಕೆ ಶಿವಕುಮಾರ್‌

ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.