ತಿರುಪತಿ ಲಡ್ಡು ಕಲಬೆರಕೆ: ತಪ್ಪೊಪ್ಪಿಕೊಂಡ ಡೈರಿ ಮಾಲೀಕ
ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಮಾಡಿದ ತುಪ್ಪದಲ್ಲಿ ಕಲಬೆರಕೆ ಮಾಡಿರುವುದನ್ನು 5ನೇ ಆರೋಪಿ ಅಪೂರ್ವ ಚಾವ್ಡಾ ವಿಶೇಷ ತನಿಖಾ ತಂಡದ ತನಿಖೆ ವೇಳೆ ಒಪ್ಪಿಕೊಂಡಿದ್ದಾರೆಂದು ವರದಿಯಾಗಿದೆ. ತಾನು ಕೆಮಿಕಲ್ ಇಂಜಿನಿಯರಿಂಗ್ ಓದಿದ್ದು, ತುಪ್ಪದಲ್ಲಿ ರಾಸಾಯನಿಕ ಬೆರೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾ ಗಿದೆ. ರಾಸಾಯನಿಕಗಳನ್ನು ಎಲ್ಲಿಂದ ಸಂಗ್ರಹಿಸಲಾಗಿದೆ, ಎಷ್ಟು ಪ್ರಮಾಣದಲ್ಲಿ ಬಳಸಲಾಗಿದೆ ಮತ್ತು ಯಾರ ಪಾತ್ರವಿದೆ ಎಂಬುದರ ಕುರಿತು ಹೆಚ್ಚಿನ ತನಿಖೆಗೆ ಎಸ್ಐಟಿ ಮುಂದಾಗಿದೆ. ಅದಕ್ಕಾಗಿ ಅಪೂರ್ವ ಚಾವ್ಡಾ ಅವರನ್ನು
ಚಾಂಪಿಯನ್ಸ್ ಟ್ರೋಫಿ: ಇಂಗ್ಲೆಂಡ್ ಎದುರು ಗೆದ್ದು ಬೀಗಿದ ಅಫ್ಘಾನಿಸ್ತಾನ
ಲಾಹೋರ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ತಂಡ 8 ರನ್ ಗಳಿಂದ ಪ್ರಬಲ ಇಂಗ್ಲೆಂಡ್ ತಂಡವನ್ನು ಸೋಲಿಸಿ ಇತಿಹಾಸ ಬರೆದಿದೆ. ಆರಂಭಿಕ ಇಬ್ರಾಹಿಂ ಜರ್ದಾರ್ ದಾಖಲೆಯ ಶತಕ ಹಾಗೂ ಅಜಮತ್ತುಲ್ಲಾ ಓಮರಾಜಿ ಅವರ ಮಾರಕ ದಾಳಿ ನೆರವಿನಿಂದ ಆಫ್ಘಾನಿಸ್ತಾನ
ಕೆಲಸದ ವೇಳೆ ನಿದ್ದೆ ಮಾಡಿದ್ದಕ್ಕೆ ಅಮಾನತು: ಆದೇಶ ರದ್ದುಗೊಳಿಸಿದ ಹೈಕೋರ್ಟ್
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳದ ಕುಕನೂರು ಡಿಪೋದಲ್ಲಿ ಕೆಎಸ್‌ಟಿ ಕಾನ್ಸ್‌ಟೆಬಲ್ ಚಂದ್ರಶೇಖರ್ ಎಂಬವರನ್ನು ಕೆಲಸದ ವೇಳೆ ನಿದ್ರೆ ಮಾಡುತ್ತಿದ್ದರೆಂಬ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿದ್ದ ನಿಗಮದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಿದ್ರೆ ಮನುಷ್ಯನಿಗೆ ಅತ್ಯಗತ್ಯ. ನಿದ್ರೆ ಮತ್ತು ಕೆಲಸದ ನಡುವೆ ಸಮತೋಲನ
ಕಾಂಗ್ರೆಸ್ ಕಡು ದಲಿತ ವಿರೋಧಿ ಅಂದ್ರು ಆರ್. ಅಶೋಕ್
ಕಾಂಗ್ರೆಸ್ ಕಡು ದಲಿತ ವಿರೋಧಿ ಎಂಬುದನ್ನು ಕರ್ನಾಟಕ ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಜಿಲ್ಲೆಯ ಪರಿಶಿಷ್ಟ ಜಾತಿ ಶಾಸಕರಾದ ಕಾಂಗ್ರೆಸ್‌ನ ಎಸ್.ಎನ್.ನಾರಾಯಣಸ್ವಾಮಿ (ಬಂಗಾರಪೇಟೆ), ರೂಪಕಲಾ ಶಶಿಧರ್ (ಕೆಜಿಎಫ್) ಹಾಗೂ
ಮದ್ದೂರಿನಲ್ಲಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಮಂಡ್ಯದ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ
ಬೂಕರ್ ಅವಾರ್ಡ್ ಅಂತಿಮ ಪಟ್ಟಿಯಲ್ಲಿ ಕನ್ನಡದ ಬಾನು ಮುಷ್ತಾಕ್ ಕೃತಿ
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಅಂತಿಮ 13ರ ಪಟ್ಟಿಯಲ್ಲಿ ಕನ್ನಡನಾಡಿನ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರ ಕೃತಿ ಸ್ಥಾನ ಪಡೆದಿದೆ. ಕನ್ನಡದ ಲೇಖಕಿಯೊಬ್ಬರ ಅನುವಾದಿತ ಕೃತಿಯೊಂದು ಬೂಕರ್ ಪ್ರಶಸ್ತಿಯ ಇತಿಹಾಸದಲ್ಲೇ ಮೊದಲ ಬಾರಿಗೆ 13 ಕೃತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಬಾನು
ಕಲಬುರಗಿ ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಕಲಬುರಗಿ ನಗರದ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ ಲೋ ಬಿಪಿಯಿಂದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತಪಟ್ಟವರು. ಹೆರಿಗೆಗಾಗಿ ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದರು. ನಿರಂತರ ರಕ್ತ
ಔರಾದ್: ದಂಪತಿ ಜಗಳ ಗಂಡನ ಕೊಲೆಯಲ್ಲಿ ಅಂತ್ಯ
ಔರಾದ್ : ಹೆಣ್ಣಿನ ಕೈಗಳಿಗೆ ಬಳೆ ಯಷ್ಟು ಮುಖ್ಯವೋ ಹೆಣ್ಣಿಗೂ ಗಂಡ ಅಷ್ಟೆ ಮುಖ್ಯ ಎಂಬ ಮಾತಿದೆ. ಗಂಡ-ಹೆಂಡತಿ ಪ್ರೀತಿ ಬಹಳ ಅಮೂಲ್ಯ. ಅಂತದ್ರಲ್ಲಿ ಇಲ್ಲೊಬ್ಬಳು ಹೆಂಡತಿ ಗಂಡನನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಅದೂ ಗಂಡ ಹೆಂಡತಿ ಮಧ್ಯೆ ನಡೆದ ಜಗಳ
11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಡಿಕೆ ಶಿವಕುಮಾರ್
ಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್
43 ಕೋಟಿ ಕೊಟ್ಟರೆ ಅಮೆರಿಕ ಪೌರತ್ವ: ಗೋಲ್ಡನ್ ಕಾರ್ಡ್ ಆಫರ್ ನೀಡಿದ ಟ್ರಂಪ್!
ಅಕ್ರಮ ವಲಸಿಗರನ್ನು ಹೊರಹಾಕುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಅಮೆರಿಕ ಪೌರತ್ವ ಬಯಸುವವರು 5 ದಶಲಕ್ಷ ಡಾಲರ್ (ಅಂದಾಜು 45 ಕೋಟಿ ರೂ.) ನೀಡಿ ಗೋಲ್ಡನ್ ಕಾರ್ಡ್ ಪಡೆಯವಂತೆ ಶ್ರೀಮಂತರಿಗೆ ಆಹ್ವಾನ ನೀಡಿದ್ದಾರೆ. ಈಗಾಗಲೇ ಕಠಿಣ ವಲಸೆ ನೀತಿಯಿಂದ ಅಕ್ರಮ




