ಪೊಲೀಸರಿಂದ ಒತ್ತಡದ ಆರೋಪ: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಏ.8ಕ್ಕೆ ಮುಂದೂಡಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ಏಪ್ರಿಲ್ ೮ಕ್ಕೆ ಮುಂದೂಡಿದೆ. ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಕೊಲೆ ಮಾಡಿದ್ದಾರೆ ಎಂಬ ಪೊಲೀಸರ ಆರೋಪದ ಕುರಿತು ವಿಚಾರಣೆ ಮಂಗಳವಾರ ನಡೆದಿದ್ದು, ದರ್ಶನ್ ಮತ್ತು ಪವಿತ್ರಾ ಗೌಡ ವಿಚಾರಣೆಗೆ ಖುದ್ದು ಹಾಜರಾಗಿದ್ದದ್ದರೆ, ನಿಖಿಲ್ ಮತ್ತು ಕೇಶವಮೂರ್ತಿ ಗೈರು ಹಾಜರಾಗಿದ್ದರು. ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಮಾಡಲು ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ವಿಚಾರಣೆ ವೇಳೆ
ವಿಜಯಪುರದಿಂದ ಕುಂಭಮೇಳಕ್ಕೆ ಹೊರಟಿದ್ದ ಇಬ್ಬರು ಅಪಘಾತಕ್ಕೆ ಬಲಿ
ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್ ಗೆ ಪ್ರಯಾಣಿಸುತ್ತಿದ್ದಾಗ ಗುಜರಾತ್‌ನ ಪೋರ್‌ಬಂದರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟವರು. ಚಡಚಣ ಪಟ್ಟಣದಿಂದ
ಗೆಳತಿ ಸೇರಿ ಕುಟುಂಬದ ಐವರನ್ನು ಕೊಲೆಗೈದು ವಿಷ ಸೇವಿಸಿದ ಯುವಕ
ಕೇರಳದ ತಿರುವನಂತಪುರದಲ್ಲಿ ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿ ಸೇರಿದಂತೆ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 23 ವರ್ಷದ ಆರೋಪಿ ಪೆರುಮಾಳದ ನಿವಾಸಿ ಅಫಾನ್ ಪೊಲೀಸರಿಗೆ ಶರಣಾಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಐದು ಜನರನ್ನು
ಕನ್ನಡ ಧ್ವಜ ಹಿಡಿದು ಜೈ ಕರ್ನಾಟಕವೆಂದ ಮಹಾರಾಷ್ಟ್ರ ಚಾಲಕ
ಮಹಾರಾಷ್ಟ್ರದಲ್ಲಿ ಕನ್ನಡ, ಕನ್ನಡಿಗರ ಮೇಲೆ ಮರಾಠಿಗರು ನಡೆಸುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಬಾಗಲಕೋಟೆಯಲ್ಲಿ ಕನ್ನಡಿಗರು ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗ ಹಾಗೂ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರ ಬಸ್‌ಗೆ ‘ಜೈ ಕರ್ನಾಟಕ’ ಎಂದು ಬರೆದು ಕನ್ನಡಾಭಿಮಾನ ಮೆರೆದಿದ್ದಾರೆ. ಇಳಕಲ್
ಐಎಂಎ ಹಗರಣ ಸಂತ್ರಸ್ತರಿಗೆ ನಿಗದಿತ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಭೈರೇಗೌಡ
ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವ ಎಲ್ಲ ಸಂತ್ರಸ್ತರಿಗೂ ರಂಜಾನ್ ಹಬ್ಬಕ್ಕೂ ಮೊದಲು ನಿಗದಿತ ಪರಿಹಾರ ಹಣ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧ ಕಚೇರಿಯಲ್ಲಿ ಸಭೆ
ಕೇಣಿ ಗ್ರೀನ್ ಫೀಲ್ಡ್ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ
ಕೇಣಿ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ.
ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿ.ಕೆ. ಶಿವಕುಮಾರ್
ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ
ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ. ಘಟನೆಯಿಂದ ಸಾಕರಸನಹಳ್ಳಿ
ದಲಿತ ವಿದ್ಯಾರ್ಥಿಗಳ ಊಟದ ತಟ್ಟೆ ತೊಳೆಯಲ್ಲವೆಂದ ಸಹಾಯಕಿ ಮನೆಗೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯನ್ನು ಜಿಲ್ಲಾಡಳಿತ ಮನೆಗೆ ಕಳಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ. ಅಡುಗೆ ಸಹಾಯಕಿಯ ಈ ಕಾರ್ಯವೈಖರಿಯಿಂದ ಮಧ್ಯಾಹ್ನದ
ಗೃಹಜ್ಯೋತಿ ಸಹಾಯಧನ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್




