ಬೆಳಗಾವಿ ಗಲಾಟೆ ಮುಂದುವರೆದರೆ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ದ : ಶಿವರಾಜ್ ತಂಗಡಗಿ
ಕೋಲಾರ: ಬೆಳಗಾವಿಯಲ್ಲಿ ಗಲಾಟೆ ಮಾಡುವವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದೇವೆ. ಹೀಗೆಯೇ ಮುಂದುವರಿದರೆ ಮುಂದಿನ ಕಠಿಣ ಕ್ರಮವಹಿಸುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಎಚ್ಚರಿಸಿದರು. ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಜತೆಯೂ ಈ ಸಂಬಂಧ ಮಾತನಾಡಿದ್ದೇವೆ. ಪುಂಡರ ಮೇಲೆ ನೇರವಾಗಿ ಕ್ರಮ ವಹಿಸಲಾಗುವುದು. ಬೆಳಗಾವಿ ನಮ್ಮ ರಾಜ್ಯದ ಪ್ರಮುಖ ಅಂಗ. ಅಲ್ಲೇ ಸುವರ್ಣಸೌಧ
ಎಂಎಸ್ಪಿಎಲ್ ಫ್ಯಾಕ್ಟರಿ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಗೆ ಅಭೂತಪೂರ್ವ ಜನ ಬೆಂಬಲ
ಕೊಪ್ಪಳ: ಸರಕಾರದಲ್ಲಿ ಅತ್ಯಂತ ಪ್ರಭಾವಿಗಳಾದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ನೀವ ಏನ್ ಮಾಡ್ತಿರೊ ಗೊತ್ತಿಲ್ಲ, ಆದೇಶ ತಗೊಂಡ ಕೊಪ್ಪಳಕ್ಕ ಬರ್ರಿ” ಎಂದು ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಶ್ರೀ
ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
2028ರ ಚುನಾವಣೆಗೆ ಸಜ್ಜಾಗುವಂತೆ ಪರಾಜಿತ ಅಭ್ಯರ್ಥಿಗಳಿಗೆ ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ
ಮಂಡ್ಯ: ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಆಗಿರುವ ಮಾಸ್ತಪ್ಪ (65), ಪತ್ನಿ ರತ್ನಮ್ಮ (45) ಮತ್ತು ಮಗಳು ಲಕ್ಷ್ಮೀ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆಟೋ ಓಡಿಸಿಕೊಂಡು
ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರ: ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೋರ್ಟ್ ಗ್ರೀನ್ ಸಿಗ್ನಲ್: ಮೈಸೂರು ಚಲೋ ಹೋರಾಟಕ್ಕೆ ಬಿಜೆಪಿ ತಯಾರಿ
ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ಷರತ್ತು ಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ. ವಿರೋಧ ಪಕ್ಷದ ನಾಯಕ ಆರ್.ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಿವೆ. ಮೂನ್ನೂರು ಮಂದಿಗೆ ಅನುಮತಿ ನೀಡಿರುವ ನ್ಯಾಯಾಲಯದ ನಿರ್ದೇಶನದಂತೆ
ಶ್ರೀಲಂಕಾ ನೌಕಾಪಡೆಯಿಂದ 32 ಭಾರತೀಯ ಮೀನುಗಾರರ ಬಂಧನ
ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ದಾಟಿದ ಆರೋಪದ ಮೇಲೆ ರಾಮೇಶ್ವರದ 32 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಭಾನುವಾರ ಮುಂಜಾನೆ ಈ ಬೆಳವಣಿಗೆ ನಡೆದಿದ್ದು, ಐದು ದುಬಾರಿ ಯಾಂತ್ರೀಕೃತ ದೋಣಿಗಳನ್ನು ಕೂಡ ಶ್ರೀಲಂಕಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಮೀನುಗಾರರನ್ನು ಹೆಚ್ಚಿನ
ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ
ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ
ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು




