ಕೆಎಸ್ಸಾರ್ಟಿಸಿ ಕಂಡಕ್ಟರ್ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು
ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ ನೀಡಿದ್ದ ಸಚಿವರು ಹಲ್ಲೆಗೊಳಗಾದ ಕಂಡಕ್ಟರ್ ಆರೋಗ್ಯ ವಿಚಾರಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಂಡಕ್ಟರ್ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳಲ್ಲಿ ಮನೆಗೆ ಕಳುಹಿಸುತ್ತಾರೆ. ಎಂಡಿ ಪ್ರತಿದಿನ ಬಂದು ಯೋಗಕ್ಷೇಮ
ಕುಂಭಮೇಳಕ್ಕೆ ಕರೆದೊಯ್ದು ಪತ್ನಿ ಕತ್ತು ಸೀಳಿ ಹತ್ಯೆಗೈದ ಪತಿ!
ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪತ್ನಿಯನ್ನು ಕರೆದೊಯ್ದ ಪತ್ನಿ ಆಕೆಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ. ದೆಹಲಿಯ ತ್ರಿಲೋಕ್ ಪುರಿ ನಿವಾಸಿ ಅಶೋಕ್ ಕುಮಾರ್ ಪತ್ನಿ ಮೀನಾಕ್ಷಿಯನ್ನು ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕುಂಭಮೇಳಕ್ಕೆ ಕರೆದೊಯ್ಯುವುದಾಗಿ ಕರೆದುಕೊಂಡು
14,000 ರನ್ ಗಡಿ ದಾಟಿ ಹೊಸ ದಾಖಲೆ ಬರೆದ ಕೊಹ್ಲಿ!
ಸ್ಪಿನ್ನರ್ ಗಳ ಎದುರು ರನ್ ಗಳಿಸಲು ಪರದಾಟ ನಡೆಸಿರುವ ನಡುವೆಯೇ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 14,000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ವಿರುದ್ಧ ಈ ದಾಖಲೆ ಬರೆಯುವ ಮೂಲಕ ಅವಿಸ್ಮರಣೀಯ
ಕುಂಭಮೇಳದಲ್ಲಿ ಕೊನೆಯ ವಾರ ಹೆಚ್ಚಿದ ಜನದಟ್ಟಣೆ: 25 ಕಿ.ಮೀ. ಟ್ರಾಫಿಕ್ ಜಾಮ್!
ಕುಂಭಮೇಳ ಕೊನೆಯ ವಾರಕ್ಕೆ ಕಾಲಿಟ್ಟಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಾನುವಾರ ಮುಂಜಾನೆ ಸುಮಾರು 25 ಕಿ.ಮೀ. ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದೆ. ಮಹಾಕುಂಭ ಮೇಳ ಫೆಬ್ರವರಿ 26ರಂದು ಅಂತ್ಯಗೊಳ್ಳಲಿದ್ದು, ಅಂದು
ಶಿಗ್ಗಾಂವಿಯಲ್ಲಿ ಈಜಲೆಂದು ಕೆರೆಗಿಳಿದ ಬಾಲಕರು ನೀರುಪಾಲು
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಮೃತ ಬಾಲಕರು. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್
ಭಾರತದ ಚುನಾವಣೆಗೆ ಅಮೆರಿಕ ಹಣ ನೀಡಿಲ್ಲ, ಯೋಜನೆಗಳಿಗೆ ಅನುದಾನ ನೀಡಿದೆ: ವಿತ್ತ ಸಚಿವಾಲಯ
ಪ್ರಧಾನಿ ನರೇಂದ್ರ ಮೋದಿ ಅವರಿಗೆ 180 ಕೋಟಿ ರೂ. ಚುನಾವಣಾ ಅನುದಾನವನ್ನು ಅಮೆರಿಕ ನೀಡಿತ್ತು, ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಅಮೆರಿಕ ʻಯುಎಸ್‌ಏಡ್ʼ ಮೂಲಕ ನೀಡಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಭಾರತದ ಹಣಕಾಸು
ಸ್ನೇಹಿತರ ಜತೆಗೂಡಿ ಮಾಜಿ ಗೆಳತಿ ಮೇಲೆ ಗ್ಯಾಂಗ್ ರೇಪ್
ಸ್ನೇಹಿತರೊಂದಿಗೆ ಸೇರಿ ವ್ಯಕ್ತಿಯೊಬ್ಬ ತನ್ನ ಮಾಜಿ ಗೆಳತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರ ಭಿವಂಡಿಯಲ್ಲಿ ನಡೆದಿದೆ. ಈಗ ಗೆಳತಿ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ಮಾಜಿ ಪ್ರಿಯಕರ ಮೃಗೀಯವಾಗಿ ವರ್ತಿಸಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ರೂರಿಗಳು ಬೆಳಗ್ಗೆ
ತಾವರೆಕೆರೆಯ ಶಿಲಾಮಠಕ್ಕೆ ರೋಬೋಟಿಕ್ ಆನೆ ನೀಡಿದ ನಟ ಸುನಿಲ್ ಶೆಟ್ಟಿ
ದಾವಣಗೆರೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ರೋಬೋಟಿಕ್ ಆನೆಯೊಂದನ್ನು ಕಳಿಸಿಕೊಟ್ಟಿದ್ದಾರೆ. ಭಾನುವಾರ ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿ ಸೇರಿದಂತೆ ಭಕ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ
ಮಹೇಶ್ ಜೋಷಿ ಕ್ಷಮೆ ಯಾಚನೆ ಜೊತೆ ಒಂದು ಲಕ್ಷ ರೂಪಾಯಿ ದಂಡ ಪಾವತಿಸಿ: ಕೋರ್ಟ್
ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.೨೪ರಷ್ಟು ಬಡ್ಡಿಯನ್ನು ಅರ್ಜಿದಾರ ಎನ್.ಕೆ.ಮೋಹನ್ ರಾಂ ಅವರಿಗೆ ತೀರ್ಪು ಪ್ರಕಟಿಸಿದ ಏಳು ದಿನಗಳೊಳಗೆ ನೀಡಬೇಕು
ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ
ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ,




