Menu

ಬುದ್ದಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!

ಬುದ್ದಿವಾದ ಹೇಳಿದ ತಂದೆಯನ್ನೇ ಚಾಕುವಿನಿಂದ ಇರಿದು ಪಾಪಿ ಮಗ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಮಾಜಿ ಸೈನಿಕ ಚನ್ನಬಸಪ್ಪ (61) ಅವರನ್ನು ಮಗ ಅಮಿತ್ [21] ಕೊಲೆ ಮಾಡಿದ್ದಾನೆ. ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ಚನ್ನಬಸಪ್ಪ ಕೆಲಸಕ್ಕೆ ಹೋಗದೇ ಮದ್ಯ ಹಾಗೂ ಮಾದಕ ವಸ್ತುವಿನ ದಾಸನಾಗಿದ್ದ ಮಗ

ವರ್ತೂರ್‌ ಪ್ರಕಾಶ್‌ ಹೆಸರಲ್ಲಿ ಶ್ವೇತಾಗೌಡ ವಂಚಿಸಿದ ಚಿನ್ನ ಬಾಗಲಗುಂಟೆಯಲ್ಲಿ

ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ, ಶ್ವೇತಾಗೌಡ ವಂಚಿಸಿ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣ ಎಲ್ಲಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಮಾಜಿ ಸಚಿವ

ಸಚಿವ ಜಾರ್ಜ್‌ ವಿರುದ್ಧ ಹರಿ ಹಾಯ್ದ ಆರ್‌. ಅಶೋಕ್‌

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ ಎಂದು ಪ್ರತಿಪಕ್ಷ ನಾಯಕ  ಆರ್‌. ಅಶೋಕ್‌ ಅವರು ಸಚಿವ ಟಿ.ಜಾರ್ಜ್‌ ವಿರುದ್ಧ ಹರಿಹಾಯ್ದಿದ್ದಾರೆ. ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ

ನಾನಾ ಆಮಿಷವೊಡ್ಡಿ  ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಮಾಜಿ ಪಿಡಿಒ ಬೆಂಗಳೂರು ಪೊಲೀಸ್‌ ಬಲೆಗೆ

ಸರ್ಕಾರಿ ಕೆಲಸ ಕೊಡಿಸುವ ಆಮಿಷ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಎರಡು ಪಟ್ಟು ಲಾಭ ಮತ್ತಿತರ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಂಚಕನನ್ನು ಬೆಂಗಳೂರಿನ  ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಣ ಕಳವು ಪ್ರಶ್ನಿಸಿದ್ದಕ್ಕೆ ಬೆಂಕಿ ಹಚ್ಚಿ ತಂದೆಯನ್ನು ಜೀವಂತ ಸುಟ್ಟ ಮಗ

ಫರೀದಾಬಾದ್‌ನ ಅಜಯ್‌ನಗರದಲ್ಲಿ ಕಳ್ಳತನ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಗನೊಬ್ಬ ಬೆಂಕಿ ಹಚ್ಚಿ ತಂದೆಯನ್ನೇ ಜೀವಂತ ಸುಟ್ಟು ಹಾಕಿದ್ದಾನೆ. ಮುಹಮ್ಮದ್ ಅಲೀಮ್ ಮಗನಿಂದ ಬೆಂಕಿಗಾಹುತಿಯಾದವರು. ತನ್ನ ಜೇಬಿನಿಂದ ಹಣ ಕದ್ದಿರುವುದಕ್ಕೆ ಗದರಿಸಿದ್ದಕ್ಕಾಗಿ 14 ವರ್ಷದ ಮಗ ತಂದೆಯನ್ನು ಜೀವಂತವಾಗಿ ಸುಟ್ಟು ಹಾಕಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಅತ್ತೆಯ ಸಾಯಿಸಲು ಮಾತ್ರೆ ಕೇಳಿದ ಮಹಿಳೆ: ಪೊಲೀಸ್‌ಗೆ ಮಾಹಿತಿ ನೀಡಿದ ವೈದ್ಯ

ಬೆಂಗಳೂರಿನ ಸಂಜಯನಗರ ವ್ಯಾಪ್ತಿಯಲ್ಲಿ ವೈದ್ಯರೊಬ್ಬರಲ್ಲಿ ಮಹಿಳೆಯು ಅತ್ತೆಯನ್ನು ಕೊಲ್ಲಲು ಮಾತ್ರೆ ಕೇಳಿರುವುದು ವರದಿಯಾಗಿದೆ. ಮಹಿಳೆಯು, ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಬರೆದುಕೊಡಿ ಎಂದು ಕೇಳಿದ್ದಕ್ಕೆ ವೈದ್ಯರೂ ಒಂದು ಕ್ಷಣ ಶಾಕ್ ಆಗಿದ್ದಾರೆ. ಡಾಕ್ಟರ್ ಸುನೀಲ್ ಕುಮಾರ್ ಎನ್ನುವವರನ್ನು ಮಹಿಳೆಯೊಬ್ಬರು ವಾಟ್ಸಾಪ್‌ನಲ್ಲಿ ಸಂಪರ್ಕಿಸಿದ್ದಾರೆ.

ಕಪ್ ಕಾಫಿ ಬೆಲೆಯಲ್ಲಿ ಗ್ರಾಹಕರಿಗೆ 5 ರೂ. ಏರಿಕೆ ಬಿಸಿ

ಬೆಂಗಳೂರಿನಲ್ಲಿ ಇದೇ ತಿಂಗಳಿನ ಅಂತ್ಯಕ್ಕೆ ಹೋಟೆಲ್‌ಗಳಲ್ಲಿ ಕಾಫಿ ದರದಲ್ಲಿ 15% ಹೆಚ್ಚಳವಾಗಲಿದೆ. ಒಂದು ಕಪ್ ಕಾಫಿ ಬೆಲೆ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಫಿ ಪುಡಿ ಬೆಲೆ ಏರಿಕೆ ಮತ್ತು ಹಾಲಿನ ದರ ಏರಿಕೆ ಕಾರಣ ಕಾಫಿ ದರ

ಕಾನೂನು ಪದವಿ ಪ್ರಶ್ನೆಪತ್ರಿಕೆ ಲೀಕ್‌: ಉಪಪ್ರಾಂಶುಪಾಲ ಸೇರಿ ಮೂವರು ಸೆರೆ

ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರುಣ್‌ ಮತ್ತು ಜಗದೀಶ್ ಎಂಬವರನ್ನು ಬಂಧಿಸಿದ್ದಾರೆ. ಜನವರಿ 22ರಂದು ನಡೆಯಬೇಕಿದ್ದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು.

ಹಕ್ಕಿ ಜ್ವರದ ಆತಂಕ: ರಾಜ್ಯದ ಗಡಿ ಭಾಗಗಳಲ್ಲಿ ಹೈ ಅಲರ್ಟ್‌

ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟಿದ್ದರೆ, ಆಂಧ್ರ, ತೆಲಂಗಾಣದಲ್ಲಿ ಎಚ್‌೫ಎನ್‌೧ ವೈರಸ್ ಸೋಂಕಿನಿಂದ ಕೋಳಿಗಳು ಸಾಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿ

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ: ಡಿಕೆ ಸುರೇಶ್‌ 

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು  ಡಿ.ಕೆ ಸುರೇಶ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ  ಮಾಧ್ಯಮಗಳ ಪ್ರಶ್ನೆಗೆ ಹೀಗೆ  ಪ್ರತಿಕ್ರಿಯೆ ನೀಡಿದರು. ನಾಲ್ಕೈದು ಸಚಿವರು ಡಿ.ಕೆ.