Menu

ಮತ್ತೆ ಕಾಂಗ್ರೆಸ್‌ ಕೈ ಹಿಡಿದ ಎಲ್​.ಆರ್‌ ಶಿವರಾಮೇಗೌಡ

ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಗೆ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್​ ಅವರನ್ನೆಲ್ಲ ಪಕ್ಷಕ್ಕೆ ಸ್ವಾಗತಿಸಿದರು. ಎಲ್​ಆರ್​ ಶಿವರಾಮೇಗೌಡ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಮರಳಿ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್​ ತೊರೆದು ಆಮ್​ ಆದ್ಮಿ ಪಕ್ಷ

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ: ಬೊಮ್ಮಾಯಿ

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ  ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ

ಮನುಷ್ಯರೆಲ್ಲ ಕಳೆದು ಹೋಗಿ ಧರ್ಮ-ಜಾತಿಗಳು ಜೀವ ಪಡೆದಿವೆ

ನಿಸ್ವಾರ್ಥದಿಂದ ಮುಂಜಾನೆ ಎಲ್ಲರನ್ನೂ ಎಬ್ಬಿಸಿ ಅನ್ನ ಅರಸುವ ಕಾಗೆ, ಸತ್ತಾಗ ಇಡುವ ಪಿಂಡ ತಿನ್ನಲು ಬಂದಾಗ ಅದರ ತಲೆಯಲ್ಲಿ ಸುಳಿಯುವುದಿಲ್ಲ ಸತ್ತವ ಯಾವ ಜಾತಿಯವನಿರಬಹುದು ಎಂಬ ಪ್ರಶ್ನೆ. ಮಂದಿರ, ಮಸೀದಿ, ಚರ್ಚ್‌ನ ತುತ್ತ ತುದಿಯಲ್ಲಿ ಕೂರುವ ಪಾರಿವಾಳಕ್ಕೆ ಯಾವ ವ್ಯತ್ಯಾಸವೂ ಕಂಡು

ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ.  ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು

ಹದ ತಪ್ಪಿದ ಭಕ್ತಿಯ ಸೀಮೆ: ಜಲಮೂಲದ ಮೇಲೆ ವಿನಾಶಕ ಕ್ರೌರ್ಯ

ದೇವರು-ಧರ್ಮ ಆವರಣದ ಪರಿಧಿಯೊಳಗೆ ಬಂಧಿಯಾಗಿರುವ ಸಮುದಾಯದ ಮನಸ್ಥಿತಿ ಪೋಷಿಸುವ ಹಾಗೂ ನಿಯಂತ್ರಿಸುವ ಬಹುಮುಖ್ಯ ಉಪಕರಣವೆಂದರೆ ಪುರಾಣ. ವೈಜ್ಞಾನಿಕ ಆಧಾರವಿಲ್ಲದೆಯೇ ಪ್ರಭಾವ ಬೀರುವುದರಲ್ಲಿ ನಿಸ್ಸೀಮ ಕಲ್ಪಕತೆ ಸೃಷ್ಟಿಸಿ, ಆ ಮೂಲಕ ತನ್ನ ವರ್ಚಸ್ಸನ್ನು ಉಳ್ಳವರಿಂದ ದತ್ತವಾಗಿ ಪಡೆದುಕೊಂಡಿದೆ. ಪುರಾಣ ಪ್ರಪಂಚವೊಂದು ವಾಸ್ತವ ಸನ್ನಿವೇಶದಲ್ಲಿ

ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು

ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಅಸು ನೀಗಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಜನರು ಮಹಾಕುಂಭಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಜನಸಂದಣಿ ಸೇರಿದ್ದ ಕಾರಣ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಯಿತು

ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಪಡೆಯಲು ಸಿದ್ದರಾಮಯ್ಯ, ಡಿಕೆಶಿ ಜತೆ ಹೋರಾಟಕ್ಕೆ ಸಿದ್ದ: ಹೆಚ್.ಡಿ.ದೇವೇಗೌಡ

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. 25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ,

ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು: ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ಶನಿವಾರ ಕಾಂಗ್ರೆಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಆಯ್ಕೆಯಾದ ಒಂದೇ ದಿನದಲ್ಲಿ ಮೋದಿಯಿಂದ ಮೇಕೆದಾಟು ಯೋಜನೆಗೆ

ಬೆಂಗಳೂರಿನಲ್ಲಿ ಮೊಬೈಕ್ ತಯಾರಿಕಾ ಘಟಕ ಆರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್

ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್

ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ