Menu

ವಿದ್ಯಾರ್ಥಿನಿಯರು ಜೀವನದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಡಿಸಿಎಂ 

“ನೀವು ಸರ್ಕಾರಿ ಶಾಲೆಯಲ್ಲೇ ಓದುತ್ತಿರಲಿ, ಖಾಸಗಿ ಶಾಲೆಯಲ್ಲೇ ಓದುತ್ತಿರಲಿ. ನಿಮ್ಮ ಜೀವನದಲ್ಲಿ ಎಂದಿಗೂ ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು. ಮಲಬಾರ್ ಚಾರಿಟಬಲ್ ಟ್ರಸ್ಟಿನ ವಿದ್ಯಾರ್ಥಿ ವೇತನ ಘೋಷಣಾ ಕಾರ್ಯಕ್ರಮದಲ್ಲಿ ಶಿವಕುಮಾರ್  ಮಾತನಾಡಿ, “ಶಿಕ್ಷಣ ನನ್ನ ಅಚ್ಚುಮೆಚ್ಚಿನ ಕ್ಷೇತ್ರ. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣತಜ್ಞ, ಆಸಕ್ತಿಯಲ್ಲಿ ನಾನು ರಾಜಕಾರಣಿ. ನಾನು ನಿಮಗಿಂತ ಚಿಕ್ಕ ವಯಸ್ಸಿನಲ್ಲಿ ರಾಜಕೀಯ ಪ್ರವೇಶ ಮಾಡಿದೆ. ನಾನು

2 ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಲಹೆ ನೀಡಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದಲ್ಲಿ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ಗಲಭೆ ಪೀಡಿತ ಮಣಿಪುರದಲ್ಲಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮಣಿಪುರ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಹಿಂಸಾಚಾರವನ್ನು

ಕಾವೇರಿ-ಗೋದಾವರಿ ನದಿಗಳ ಜೋಡಣೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಲಹೆ

ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್

ಪಂಚಭೂತಗಳಲ್ಲಿ ಲೀನವಾದ ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ

ಅಂಕೋಲಾ: ಸಾವಿರಾರು ಜಾನಪದ ಹಾಡುಗಳಿಗೆ ದನಿಯಾಗಿ ಹಾಲಕ್ಕಿ ಜಾನಪದ ಕಂಪನ್ನು ದೇಶದ್ಯಂತ ಪಸರಿಸಿದ ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀ ಪುರಸ್ಕರತ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ (88) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಗುರುವಾರ ಸಂಜೆ ಸರ್ಕಾರಿ ಗೌರವಾಧರಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ

ಕ್ರಿಕೆಟಿಗ ರಿಷಭ್ ಪಂತ್ ರಕ್ಷಿಸಿದ್ದ ಯುವಕ ಆತ್ಮಹತ್ಯೆಗೆ ಯತ್ನ!

ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದ ಯುವಕ ಗೆಳತಿ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಜಾಫರ್ ನಗರದ ಬುಚ್ಚಾ ಬಸ್ತಿ ಗ್ರಾಮದಲ್ಲಿ ರಜತ್ ಕುಮಾರ್ (25) ಹಾಗೂ

ವಕ್ಫ್ ತಿದ್ದುಪಡಿ ಮಸೂದೆ: ಪ್ರತಿಪಕ್ಷಗಳ ಸಲಹೆ ಸೇರ್ಪಡೆಯ ಭರವಸೆ ನೀಡಿದ ಅಮಿತ್ ಶಾ

ವಕ್ಫ್ ತಿದ್ದುಪಡಿ ಮಸೂದೆಯನ್ನು ಗುರುವಾರ ಮಂಡಿಸಲಾಗಿದ್ದು, ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಪ್ರತಿಪಕ್ಷಗಳು ಹಾಗೂ ಆಡಳಿತಾರೂಢ ಎನ್ ಡಿಎ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಕೋಲಾಹಲ ಸೃಷ್ಟಿಯಾಯಿತು. ವಕ್ಫ್ ಆಸ್ತಿಯನ್ನು ನಿಯಮಬದ್ಧಗೊಳಿಸುವ ಕುರಿತ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಅನ್ನು ಗುರುವಾರ

ಮೆಟ್ರೋ ದರ ಸ್ಟೇಜ್ ಹಂತದಲ್ಲಿ ಪರಿಷ್ಕರಣೆ: ಬಿಎಂಆರ್ ಸಿಎಲ್ ಸ್ಪಷ್ಟನೆ

ಏರಿಕೆ ಮಾಡಲಾಗಿರುವ ಮೆಟ್ರೋ ರೈಲು ದರದಲ್ಲಿ ಇಳಿಕೆ ಮಾಡುವುದಿಲ್ಲ. ಆದರೆ ಸ್ಟೇಜ್ ಹಂತಗಳಲ್ಲಿ ಅಡ್ಜೆಸ್ಟ್ ಮೆಂಟ್ ಮೂಲಕ ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ತಿಳಿಸಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ವ್ಯಾಪಕ

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ

ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ಅಂಚೆ ಖಾಲಿ ಇರುವ 21,413 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ರಾಜ್ಯಗಳಲ್ಲಿ ಭರ್ತಿ ಪ್ರಕ್ರಿಯೆ ಆರಂಭವಾಗಲಿದ್ದು,