Menu

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಡಿಕೆಶಿ ಅಭಿನಂದನೆ

ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡ 36 ರನ್ ಗಳ ಅಂತರದಲ್ಲಿ ವಿದರ್ಭ ತಂಡವನ್ನು ಮಣಿಸಿರುವುದು ಸಂತೋಷದ ಸಂಗತಿ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನದೊಂದಿಗೆ ಕರ್ನಾಟಕ ತಂಡ ಪ್ರಶಸ್ತಿ ಮುಡಿ ಗೇರಿಸಿಕೊಂಡಿದೆ ಎಂದು ಸಂತೋಷ

ಗೋವಾ ಪ್ಯಾರಾಗ್ಲೈಡಿಂಗ್: ಮಹಿಳಾ ಪ್ರವಾಸಿ, ಇನ್​ಸ್ಟ್ರಕ್ಟರ್​ ಸಾವು

ಉತ್ತರ ಗೋವಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತದಲ್ಲಿ ಪ್ಯಾರಾಗ್ಲೈಡಿಂಗ್ ಮಹಿಳಾ ಪ್ರವಾಸಿ ಹಾಗೂ ಇನ್​ಸ್ಟ್ರಕ್ಟರ್​ ಮೃತಪಟ್ಟಿದ್ದಾರೆ. ಶನಿವಾರ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ನಿವಾಸಿ ಶಿವಾನಿ ಡೇಬಲ್ ಮತ್ತು ಆಕೆಯ ಇನ್​ಸ್ಟ್ರಕ್ಟರ್ ಸುಮಲ್ ನೇಪಾಲಿ ಮೃತಪಟ್ಟವರು. ಪ್ಯಾರಾಗ್ಲೈಡಿಂಗ್‌ಗಾಗಿ ಶಿವಾನಿ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನಿಲ್‌ ಕುಮಾರ್‌ ರಾಜೀನಾಮೆ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿ, ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ

ರಾಜ್ಯಾದ್ಯಂತ ಸಮಗ್ರ ಆರೋಗ್ಯ ಸೇವೆಗೆ ರೋಟರಿ- ರಾಮಯ್ಯ ಆಸ್ಪತ್ರೆ ಒಪ್ಪಂದ

ಬೆಂಗಳೂರು: ಕರ್ನಾಟಕದಾದ್ಯಂತ ಬಿಪಿಎಲ್ ಕಾರ್ಡ್ ಹೊಂದಿರುವವರು, ಹಿಂದುಳಿದವರು, ನಿರ್ಗತಿಕರು ಮತ್ತು ಹಿರಿಯ ನಾಗರಿಕರಿಗೆ ಸಮಗ್ರ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲು 2 ವರ್ಷಗಳ ತಿಳುವಳಿಕೆ ಒಪ್ಪಂದಕ್ಕೆ (ಎಂಓಯು) ರೋಟರಿ ಬೆಂಗಳೂರು ಗುಲ್‍ಮೊಹರ್ ಮತ್ತು ಬೆಂಗಳೂರಿನ ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ

ಗೋಡ್ಸೆ ವಂಶಸ್ಥರಿಂದ ಗಾಂಧಿ ವಿಚಾರಧಾರೆಗಳ ಹತ್ಯೆ: ರಣದೀಪ್ ಸಿಂಗ್ ಸುರ್ಜೆವಾಲ

ಹುಬ್ಬಳ್ಳಿ: ಗೋಡ್ಸೆ ವಂಶಸ್ಥರು ನಿರಂತರವಾಗಿ ಗಾಂಧಿ ಅವರ ವಿಚಾರಧಾರೆಗಳನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ನಂತರ ಸುರ್ಜೆವಾಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್

ವಿಜಯೇಂದ್ರ ನಿಮ್ಮಪ್ಪನ ದುಡ್ಡಲ್ಲಿ ಮೆರೆಯುತ್ತಿದ್ದಿಯ: ರಮೇಶ್ ಜಾರಕಿಹೊಳಿ ತಿರುಗೇಟು

ನಿಮ್ಮಪ್ಪನನ್ನು ಸಿಎಂ ಮಾಡಲು ನಾನು ಶಾಸಕ ಸ್ಥಾನ ತ್ಯಾಗ ಮಾಡಿದೆ. ನೀನು ನಿಮ್ಮಪ್ಪನ ದುಡ್ಡಲ್ಲಿ ಓಡಾಡಿಕೊಂಡು ಮಜ ಮಾಡ್ತಾ ಇದ್ದಿಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ. ಬೆಳಗಾವಿಯ ಅಂಕಲಗಿ ಗ್ರಾಮದಲ್ಲಿ ಶನಿವಾರ ನಡೆದ ಸಭೆಯಲ್ಲಿ

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 57 ದಿನದಲ್ಲೇ ತೀರ್ಪು ಪ್ರಕಟಿಸಿದ ಕೋಲ್ಕತಾ ಕೋರ್ಟ್

ಕೋಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ಆಗಸ್ಟ್ 9 ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ

ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ರೆ

ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಇವಿ ವಾಹನ ಮಾರಾಟ ಹೆಚ್ಚಳ

ನವದೆಹಲಿ: ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ