ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ
ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (85) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯು ಪೀಡಿತರಾಗಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸತ್ಯೇಂದ್ರ ದಾಸ್ ಅವರಿಗೆ ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ಪಾರ್ಶ್ವವಾಯುವುಂಟಾಗಿ ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ
ಬೆಂಗಳೂರಿನೊಂದಿಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿಸೋಣ: ಡಿ.ಕೆ.ಶಿವಕುಮಾರ್
ಕರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ಪಟ್ಟರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ
ಲೂಪ್ ಸ್ಟುಡಿಯೋದಲ್ಲಿ ಮಾತನಾಡಿದ “ಮಾರುತ”
ಎಸ್ ನಾರಾಯಣ್ ನಿರ್ದೇಶನದ ಹಾಗೂ ದುನಿಯಾ ವಿಜಯ್ – ಶ್ರೇಯಸ್ ಮಂಜು ಅಭಿನಯದ ” ಮಾರುತ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರ ”
ಜ್ಯೋತಿಷಿ ಹೇಳಿದನೆಂದು ನಿಧಿಗಾಗಿ ಕಾರ್ಮಿಕನ ಹತ್ಯೆಗೈದು ಬಲಿ
ನಿಧಿ ಪಡೆಯಬೇಕೆಂಬ ದುರಾಸೆಯಿಂದ ಜ್ಯೋತಿಷಿ ಹೇಳಿದ ಮಾತು ನಂಬಿ ವ್ಯಕ್ತಿಯೊಬ್ಬ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು
ಪಂಜಾಬ್ ಉಳಿಸಿಕೊಳ್ಳುವುದರೊಂದಿಗೆ ರಾಜ್ಯಸಭೆ ಪ್ರವೇಶಕ್ಕೂ ಕೇಜ್ರಿವಾಲ್ ಪ್ರಯತ್ನ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ
ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್
ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ,
ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ: ಬೆರಳ ತುದಿಯಲ್ಲಿ 30 ಇಲಾಖೆಗಳ 150 ಸೇವೆ
ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 3.43 ಲಕ್ಷ ಕೋಟಿ ರೂ. ಹೂಡಿಕೆ
ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ. ಮಂಗಳವಾರ ಸಮಾವೇಶದ ಉದ್ಘಾಟನೆ ಬಳಿಕ ನವೀರಿಸಬಹುದಾದ ಇಂಧನ ಕ್ಷೇತ್ರದಲ್ಲಿ
ಇನ್ವೆಸ್ಟ್ ಕರ್ನಾಟಕಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ
ರಾಜ್ಯ ಸರ್ಕಾರ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಹಮ್ಮಿಕೊಂಡಿರುವ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ ೧೯ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿಷ್ಠಿತ ಕಂಪನಿಗಳು
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ : ಸಚಿವ ಚಲುವರಾಯಸ್ವಾಮಿ
ಚಿತ್ರದುರ್ಗ: ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ರೇಣುಕಾಪುರ ಗ್ರಾಮದಲ್ಲಿ ಜಲಾನಯನ ಇಲಾಖೆ ವತಿಯಿಂದ




