Menu

ಸಾಮಾಜಿಕ ಬದ್ಧತೆಯ ಧೀಮಂತ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್

ಮಾಜಿ ಸಭಾಪತಿಗಳು ಮತ್ತು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ  ಅವರಿಗೆ ಶಿವಮೊಗ್ಗ  ಕೆಳದಿ ಶಿವಪ್ಪ ನಾಯಕನ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ  ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಇದು ಅತ್ಯಂತ ಅರ್ಹ, ಸೂಕ್ತ ಹಾಗೂ ಯೋಗ್ಯ ಆಯ್ಕೆ, ಇದರಿಂದ  ಡಾಕ್ಟರೇಟ್ ನ ಮೌಲ್ಯ ವೃದ್ಧಿಸುತ್ತದೆ. ಸಾಮಾಜಿಕ ಬದ್ಧತೆಯ ಧೀಮಂತ, ಅವರು ಸದನ ನಡೆಸುತ್ತಿದ್ದ ವೈಖರಿಯೇ ಅಪೂರ್ವ ಎಂಬ ಮೆಚ್ಚುಗೆಯ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಕಾಗೋಡು ತಿಮ್ಮಪ್ಪ 10

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್: ಸಚಿವ ಜೈಶಂಕರ್ ಗೆ ಹೆಚ್‌ಡಿಕೆ ಧನ್ಯವಾದ

ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಆರಂಭ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ  ನವದೆಹಲಿಯಲ್ಲಿ  ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಬೆಂಗಳೂರಿನಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ  ಇಂದು (ಶುಕ್ರವಾರ) ಉದ್ಘಾಟನೆ ಆಗುತ್ತಿದ್ದು,  ವಿದೇಶಾಂಗ ಸಚಿವರನ್ನು ಸೌತ್ ಬ್ಲಾಕ್

ಸಚಿವಾಲಯ ಸಿಬ್ಬಂದಿಗಾಗಿ ಇವಿ ಮೇಳ ಇಂದಿನಿಂದ

ಜನವರಿ 17 (ಇಂದು)  ಹಾಗೂ 18 ರಂದು ವಿಧಾನಸೌಧದ ಆವರಣದಲ್ಲಿ ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಬೆಸ್ಕಾಂ ಹಾಗೂ ಸಚಿವಾಲಯ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ  ವಿಶೇಷ ಇವಿ ಮೇಳ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದಲ್ಲಿ

14,300 ಕೋಟಿ ರೂ. ಮೌಲ್ಯದ ಎಚ್ಎಂಟಿ ಅರಣ್ಯ ಭೂಮಿ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಧಾರ

ಎಚ್‌ಎಂಟಿ ಲಿಮಿಟೆಡ್‌ನ ಸ್ವಾಧಿನದಲ್ಲಿರುವ ರೂ.14,300 ಕೋಟಿ ಮೌಲ್ಯದ ಅರಣ್ಯ ಭೂಮಿ ರಾಜ್ಯ ಸರ್ಕಾರಕ್ಕೆ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಎಚ್‌ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರ್ಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ

ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳದಲ್ಲಿ ಸಂಶೋಧನೆ, ಸಿಎಸ್.ಆರ್ ನಿಧಿ ಬಳಕೆ ಆಗಲಿ; ಜಗದೀಪ ಧನಕರ್

ಧಾರವಾಡ : ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ  ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು. ಅವರು

ಅರಮನೆ ಟಿಡಿಆರ್ ಪ್ರಕರಣ:1996ರ ಕಾನೂನಿನ ಸಿಂಧುತ್ವದ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅಸ್ತು

೮ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ನೌಕರರ ವೇತನ

ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ

ನಟ ಸೈಫ್ ಅಲಿ ಖಾನ್ ಗೆ 6 ಬಾರಿ ಇರಿತ: 10 ಪೊಲೀಸ್ ತಂಡದಿಂದ ತನಿಖೆ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ದುಷ್ಕರ್ಮಿ ಚಾಕು ಇರಿದ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ದಾಳಿಕೋರನ ಪತ್ತೆಗೆ 10 ಪೊಲೀಸರ ತಂಡ ಹಾಗೂ ಶ್ವಾನದಳ ನಿಯೋಜಿಸಲಾಗಿದೆ. ಗುರುವಾರ ಮುಂಜಾನೆ ಮನೆಗೆ ನುಗ್ಗಿದ ದುಷ್ಕರ್ಮಿ ಸೈಫ್ ಅಲಿ ಖಾನ್

ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ: ಆರ್.ಅಶೋಕ

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಜಾರಕಿಹೊಳಿ