ಗುಡಿಬಂಡೆಯಲ್ಲಿ ರಸ್ತೆ ಅಪಘಾತಕ್ಕೆ ಪತ್ರಕರ್ತ ಬಲಿ
ಚಿಕ್ಕಬಳ್ಳಾಪುರದ ಗುಡಿಬಂಡೆಯ ಮಾಚನಹಳ್ಳಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಪತ್ರಕರ್ತ ಜಿ.ಎಸ್. ಭರತ್ ಬಲಿಯಾಗಿದ್ದಾರೆ. ಗುಡಿಬಂಡೆಯಿಂದ ಬಾಗೇಪಲ್ಲಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇವರು ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಚಿಕ್ಕಬಳ್ಳಾಪುರದಲ್ಲಿ ಓಡಾಡುತ್ತಿದ್ದರು. ಭರತ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿಗಂಗಮ್ಮನ ಗುಡಿ ದೇಗುಲಕ್ಕೆ ಡಿಕ್ಕಿಯಾಗಿದೆ. ಇದರಿಂದ ತಲೆಗೆ ಏಟಾಗಿ ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾರೆ. ಹೊಸದಿಗಂತ ಪತ್ರಿಕೆಯ ಬೆಂಗಳೂರು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ಪತ್ನಿ, ಮಗು, ತಂದೆತಾಯಿ
ಹಸುಗಳ ಕೆಚ್ಚಲು ಕೊಯ್ದು ಪ್ರಕರಣದ ಆರೋಪಿಯ ಬಂಧನ
ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಚಂಪರಣ್ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್,
ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ: ಹೆಚ್.ಡಿ.ದೇವೇಗೌಡ
ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಜೆಡಿಎಸ್ ವರಿಷ್ಠ,
ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ಜಮೀನು ಮಾರಿಕೊಳ್ಳಬೇಡಿ: ಡಿಕೆಶಿ
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು, ಈಗ ಎಷ್ಟು ಆಗಿದೆ, ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ಡಿಸಿಎಂ ಡಿ.ಕೆ.
ಮಾಧ್ಯಮಗಳವರು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಸಿಎಂ
ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಮರು ಭೂಮಾಪನ ಯೋಜನೆ ಇಡೀ ಕನಕಪುರ ತಾಲೂಕಿಗೆ ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನ ಕನಕಪುರದ
ಕುಮಾರಸ್ವಾಮಿಯನ್ನು ಮುಗಿಸಲು ಸಾಧ್ಯವಿಲ್ಲ: ದೇವೇಗೌಡರ ಗುಡುಗು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ,
ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ
ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ
ಅಮೆಜಾನ್‌ನಲ್ಲಿ ಸ್ಮಾರ್ಟ್‌ಫೋನ್, ಗ್ಯಾಜೆಟ್‌ಗಳಿಗೆ ಭರ್ಜರಿ ಡಿಸ್ಕೌಂಟ್
ಸ್ಮಾರ್ಟ್‌ಫೋನ್‌ಗಳು, ಗ್ಯಾಜೆಟ್‌ಗಳು ಸೇರಿದಂತೆ ಹಲವು ಪ್ರಾಡಕ್ಟ್ ಗಳ ಮೇಲೆ ಅಮೆಜಾನ್ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ. ಕೆಲವು ಪ್ರಾಡಕ್ಟ್ ಗಳ ಮೇಲೆ 90% ವರೆಗೆ ಡಿಸ್ಕೌಂಟ್ ಸಿಗಲಿದೆ. ಸ್ಯಾಮ್‌ಸಂಗ್, ಆಪಲ್, ವನ್‌ಪ್ಲಸ್ ಮತ್ತು ಇತರ ಬ್ರ್ಯಾಂಡ್ ಗಳ ಉತ್ಪನ್ನಗಳ ಬೆಲೆ ಮೇಲೆ ಬರೋಬ್ಬರಿ
ಬಿಕಾಂ ಪರೀಕ್ಷೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್ನ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ




