ಸೈಲೆಂಟ್ ಆಗಿ ಹೈಕ್ ಆಯ್ತು ಬಿಯರ್ ರೇಟ್, ಜ.20ರಿಂದ ಜಾರಿ
ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರದಲ್ಲಿ ದುಬಾರಿ ಏರಿಕೆ ಮೂಲಕ ಮದ್ಯ ಪ್ರಿಯರಿಗೆ ಬಿಸಿ ಮುಟ್ಟಿಸಿದೆ. ಬಿಯರ್ ಒಳಗೊಂಡಿರುವ ಆಲ್ಕೋಹಾಲ್ ಅಂಶ ಆಧರಿಸಿ ಪ್ರತಿ ಬಿಯರ್ ಬಾಟಲಿಗೆ ಕನಿಷ್ಠ 10 ರಿಂದ 50 ರೂ.ಗಳವರೆಗೆ ದರ ಹೆಚ್ಚಾಗಲಿದೆ. ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್‌ಗಳ ದರ ಅಷ್ಟೇನೂ ಹೆಚ್ಚಾಗುವುದಿಲ್ಲ. ಸ್ಟ್ರಾಂಗ್ ಬಿಯರ್‌ಗಳ ಬೆಲೆ ಭಾರಿ ಏರಿಕೆಯಾಗಲಿದೆ. ಸಾಮಾನ್ಯ
ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು
ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ
ಮಂಗಳೂರಲ್ಲಿ ಅಕ್ರಮ ವಾಸವಿದ್ದ ಬಾಂಗ್ಲಾದೇಶಿ ಸೆರೆ
ಮಂಗಳೂರಿನ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25) ಬಂಧಿತ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ
ನಟ ಕಿಶೋರ್ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನೇಮಕ
ಬಹುಭಾಷಾ ನಟ ಕಿಶೋರ್ ಕುಮಾರ್. ಜಿ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ
ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡುವ ಪರಿಸ್ಥಿತಿ ಇಲ್ಲ: ಕೆಜೆ.ಜಾರ್ಜ್
ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ
2ನೇ ಬಾರಿ ನೋಟಿಸ್: ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!
ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್
ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ
ರಾಜ್ಯ ಸರ್ಕಾರದ ಮುಂದೆ ಶರಣಾಗಿದ್ದ ವಿವಿಧ ರಾಜ್ಯಗಳ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ
ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ
ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿ ನೇಮಕಾತಿಗೆ ಸಿಎಂ ಸೂಚನೆ
ಬೆಂಗಳೂರು ಜ9: ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ
ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ: ಕೇಂದ್ರ ಸಮ್ಮತಿ
ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್




