Menu

ಜನವರಿಯಲ್ಲೂ 124 ಅಡಿ ನೀರು: ಕೆಆರ್‌ಎಸ್‌ ಡ್ಯಾಂ ಹೊಸ ದಾಖಲೆ

ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಹೊಸ ಇತಿಹಾಸ ದಾಖಲಿಸಿದೆ. ಜನವರಿಯಲ್ಲಿ ಕೂಡ ಜಲಾಶಯದಲ್ಲಿ ಗರಿಷ್ಠ 124 ಅಡಿ ನೀರು ಸಂಗ್ರಹವಿರುವುದು ವಿಶೇಷ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ನೀರು ಇದೆ. ಇದು ರೈತರು ಸೇರಿದಂತೆ ಜನರಿಗೆ ಸಂತೋಷ ತರುವ ವಿಚಾರ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಬೇಸಿಗೆ ಬೆಳೆ ಬೆಳೆಯಲು ರೈತರಿಗೆ ನೀರೊದಗಿಸುವ ನಿರ್ಧಾರ ಮಾಡಿದೆ. ಕಾವೇರಿ ಕಣಿವೆಯಲ್ಲಿ

ಭಿಕ್ಷುಕನೊಂದಿಗೆ ಪ್ರೇಮಾಂಕುರ, ಪತಿ, ಮಕ್ಕಳ ತೊರೆದು ಮಹಿಳೆ ಪರಾರಿ

ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಗಂಡ ಮತ್ತು 6 ಮಕ್ಕಳೊಂದಿಗೆ ಸಂಸಾರ ಮಾಡುತ್ತಿದ್ದ ಮಹಿಳೆ ಭಿಕ್ಷುಕನ ಪ್ರೇಮಪಾಶಕ್ಕೆ ಸಿಲುಕಿ ಆತನ ಜೊತೆ ಪರಾರಿಯಾಗಿದ್ದಾಳೆ. 36 ವರ್ಷದ ರಾಜೇಶ್ವರಿ ಗಂಡ ಮತ್ತು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದಳು. ಆಗಾಗ ಮನೆ ಬಳಿ ಬರುತ್ತಿದ್ದ ಭಿಕ್ಷುಕನ

ಇಸ್ರೋಗೆ ವಿ ನಾರಾಯಣನ್ ನೂತನ ಅಧ್ಯಕ್ಷ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ನೇಮಿಸಿದೆ. ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವಿ ನಾರಾಯಣನ್ ಅವರ

ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಇಂದು (ಬುಧವಾರ) ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಎಂಟು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಹಾಗೂ ಚಿಕ್ಕಮಗಳೂರು ಕಡೂರಿನ

ಸಂಕ್ರಾಂತಿ ಸಂಭ್ರಮಕ್ಕೆ ಬೆಂಗಳೂರು ಚೆನ್ನೈ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳು

ಮಕರ ಸಂಕ್ರಾಂತಿಗೆ ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್​

ಜಿ.ಪರಮೇಶ್ವರ್ ಡಿನ್ನರ್‌ ಪಾರ್ಟಿ ರದ್ದುಗೊಳಿಸಿದ ಹೈ ಕಮಾಂಡ್‌

ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಇಂದು ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.

ಭಾರತದಲ್ಲಿ ಕ್ಲೌಡ್, ಎಐ ಮೂಲಸೌಕರ್ಯ ಅಭಿವೃದ್ಧಿಗೆ ಮೈಕ್ರೋಸಾಫ್ಟ್ 3 ಬಿಲಿಯನ್ ಡಾಲರ್ ಹೂಡಿಕೆ!

ಬೆಂಗಳೂರು: ಭಾರತ ಪ್ರವಾಸದಲ್ಲಿರುವ ಮೈಕ್ರೋಸಾಫ್ಟ್ ಅಧ್ಯಕ್ಷ ಮತ್ತು ಸಿಇಒ ಸತ್ಯ ನಾದೆಲ್ಲಾ ಅವರು, ಮುಂದಿನ ಎರಡು ವರ್ಷಗಳಲ್ಲಿ ಭಾರತದಲ್ಲಿ ಕ್ಲೌಡ್ ಮತ್ತು ಎಐ(AI) ಮೂಲಸೌಕರ್ಯ ಮತ್ತು ಕೌಶಲ್ಯ ಕ್ಷೇತ್ರದಲ್ಲಿ 3 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಇದರಲ್ಲಿ

ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಕೆ ಶಿವಕುಮಾರ್

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ

ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ

4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ