Menu

4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ 4 ಮಕ್ಕಳಿಗೆ ಜನ್ಮ ನೀಡಿದ್ದು, ಮಕ್ಕಳ ತೂಕ 1.2 ಕೆಜಿ, 1.1 ಕೆಜಿ, 900 ಗ್ರಾಂ ಹಾಗೂ 800 ಗ್ರಾಂ ತೂಕ ಹೊಂದಿವೆ ಎಂದು ಆಸ್ಪತ್ರೆಯ ವೈದ್ಯರ

ಬಿಎಚ್ ಇಎಲ್ ಗೆ ಶ್ರೇಷ್ಠತಾ ಪುರಸ್ಕಾರ ಪ್ರದಾನ ಮಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

ನವದೆಹಲಿ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯ ‘ಉತ್ಕರ್ಷ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಸಾಲಿನಲ್ಲಿ ಕಂಪನಿಯ ಅಭಿವೃಧಿಗೆ

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆಜೆ ಜಾರ್ಜ್

ರಾಮನಗರ, ಜ. 7, 2024: ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ

ಫೆಬ್ರವರಿ 5 ದೆಹಲಿ ವಿಧಾನಸಭಾ ಚುನಾವಣೆ: ಫೆ.8ರಂದು ಮತ ಎಣಿಕೆ!

ಫೆಬ್ರವರಿ 5ರಂದು ಒಂದೇ ಹಂತದಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಒಂದೇ ಹಂತದಲ್ಲಿ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿದರು. ಫೆಬ್ರವರಿ 5ರಂದು

ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ

ಮಹಾರಾಷ್ಟ್ರದಲ್ಲಿ 2 ಎಚ್ ಎಂವಿಪಿ ಪ್ರಕರಣ ಪತ್ತೆ: 7ಕ್ಕೇರಿದ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್ ಎಂವಿಪಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ. ಜನವರಿ 3ರಂದು ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದ ರಾಮ್ ದಾಸ್ ಪೇಟ್ ಬಡಾವಣೆಯ

ಅಸರಾಮ್ ಬಾಪುಗೆ ಮಧ್ಯಂತರ ಜಾಮೀನು!

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಸರಾಮ್ ಬಾಪುಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 85 ವರ್ಷದ ಸ್ವಯಂ ಘೋಷಿತ ದೇವಮಾನವ ಅಸರಾಮ್ ಬಾಪು ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂಕೋರ್ಟ್ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೈಲಿನಿಂದ ಬಿಡುಗಡೆ

ಟಿಬೆಟ್ ಭೂಕಂಪನ: ಮೃತರ ಸಂಖ್ಯೆ 95ಕ್ಕೇರಿದ ಸಾವಿನ ಸಂಖ್ಯೆ

ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿಕೆಯಾಗಿದ್ದು, 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 95 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ

ಮಹಾಕುಂಭಮೇಳಕ್ಕೆ ಬೆಂಗಳೂರಿನಿಂದ ವಿಶೇಷ ರೈಲು

ಪ್ರಯಾಗ್‌ರಾಜ್‌ನಲ್ಲಿ ಜ.13ರಿಂದ ಮಹಾ ಕುಂಭಮೇಳ ನಡೆಯಲಿದ್ದು, ಅದನ್ನು ಕಣ್ತುಂಬಿಸಿಕೊಳ್ಳಲು ಬಯಸುವ ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್‌ ವಿಶೇಷ ರೈಲು ಓಡಾಟ ನಡೆಸಲಿದೆ. ಎಸ್‌ಎಂವಿಟಿ ಬೆಂಗಳೂರು

ವಿಧಾನಮಂಡಲ ಅಧಿವೇಶನದಿಂದ ಅರ್ಧಕ್ಕೆ ಹೊರಟ ರಾಜ್ಯಪಾಲ ರವಿ!

ಚೆನ್ನೈ: ರಾಜ್ಯ ಸರಕಾರದ ಜೊತೆ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ ಸೃಷ್ಟಿಸಿಕೊಳ್ಳುತ್ತಲೇ ಬಂದಿರುವ ತಮಿಳುನಾಡು ರಾಜ್ಯಪಾಲ ರವಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡದೇ ಅರ್ಧಕ್ಕೆ ಎದ್ದು ಹೋದ ಘಟನೆ ಪುನರಾವರ್ತಿಸಿದೆ. ಅಧಿವೇಶನದ ಆರಂಭದಲ್ಲಿ ರಾಷ್ಟ್ರಗೀತೆಯನ್ನು ನುಡಿಸದ ಕಾರಣ ಶಿಷ್ಟಾಚಾರದ ಉಲ್ಲಂಘನೆಯನ್ನು