ಬೆಂಗಳೂರಿನ ಪರೋಪಕಾರಿ ರಾವ್ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರು
ವಿಜಯನಗರದ ಪ್ರೌಢದೇವರಾಯನ ಮಂತ್ರಿ ಲಕ್ಷ್ಮೀಧರಮಾತ್ಯನ ಶಾಸನದಲ್ಲಿ ಲಕ್ಷ್ಮೀಧರಮಾತ್ಯನ ತಾಯಿ ಹಾಲನ್ನು ಕುಡಿಸುವಾಗ ಕಿವಿಯಲ್ಲಿ ಹೇಳಿದ ಮಾತು… ಕೆರೆಯಂ ಕಟ್ಟಿಸು, ಬಾವಿಯಂ ಸೆವೆಸು, ದೇವಾಗಾರಮಂ ಮಾಡಿಸು, ಜ್ವರೆಯೊಳ್ ಸಿಲ್ಕಿದನಾಥರಂ ಬಿಡಿಸು, ಮಿತ್ರರ್ಗಿಂಬುಕೆಯ್ ನಂಬಿದರ್ಗೆರೆವಟ್ಟಾಗಿರು… ಅಂದರೆ ಇದರ ಅರ್ಥ ಹೀಗಿದೆ: ಕೆರೆಯನ್ನು ಕಟ್ಟಿಸು, ಬಾವಿಯನ್ನು ತೋಡಿಸು, ದೇವಾಲಯಗಳನ್ನು ನಿರ್ಮಿಸು, ಬಂಧನಕ್ಕೆ ಸಿಕ್ಕ ಅನಾಥರನ್ನು ಬಿಡಿಸು, ಸ್ನೇಹಿತರಿಗೆ ಸಹಾಯಕನಾಗು, ನಂಬಿದವರಿಗೆ ಆಶ್ರಯದಾತನಾಗು. ನೂರಕ್ಕೆ ನೂರು ಇದನ್ನು ಪಾಲಿಸಿದ ಎಲೆಮಲ್ಲಪ್ಪಶೆಟ್ಟರು ನಿಜಕ್ಕೂ ಬೆಂಗಳೂರಿನ ರಾವ್ ಬಹದ್ದೂರ್.
ಮಧ್ಯಮ ವರ್ಗಕ್ಕೆ ಸರ್ ಪ್ರೈಸ್ ಗಿಫ್ಟ್ : ಬಸವರಾಜ ಬೊಮ್ಮಾಯಿ
ನವದೆಹಲಿ: ಕೇಂದ್ರದ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಮಧ್ಯಮ ವರ್ಗದ ಜನರ ಬದುಕನ್ನು ಸರಳಗೊಳಿಸುವ ಬಜೆಟ್: ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ
ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ತನಿಖೆಗೆ ಎಸ್ ಐಟಿ ರಚನೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಕುಟುಂಬದವರ ವಿರುದ್ಧ ಜಮೀನು ಕಬಳಿಕೆ ಆರೋಪದ ತನಿಖೆಗೆ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಮಾರಸ್ವಾಮಿ ಹಾಗೂ ಅವರ ಮನೆಯವರು ರಾಮನಗರ ಜಿಲ್ಲೆ ಬಿಡದಿ
ರೈಲ್ವೆಗೆ 2.60 ಲಕ್ಷ ಕೋಟಿ ರೂ. ಮೀಸಲು: ಕರ್ನಾಟಕಕ್ಕೆ ಬಂಪರ್!
ಈ ಬಾರಿಯ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ನೀಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಬಜೆಟ್
ಕರ್ನಾಟಕ ವಿರೋಧಿ ಬಜೆಟ್: ಸಿಎಂ ಸಿದ್ದರಾಮಯ್ಯ ಅಸಮಾಧಾನ
ದೂರದೃಷ್ಟಿ ರಹಿತ, ನಿರಾಶಾದಾಯಕ ಬಜೆಟ್ ಆಗಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಆಗಿದೆ. ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಲ್ಲಿಸಿದ ಬೇಡಿಕೆ ಪಟ್ಟಿಯಲ್ಲಿ ಒಂದೂ ಈಡೇರಿಸಿಲ್ಲ.
ಜನತಾ ಜನರ್ದನ ಬಜೆಟ್: ಪ್ರಧಾನಿ ಮೋದಿ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಬಜೆಟ್ ಜನತಾ ಜನಾರ್ದನ ಪರ ಬಜೆಟ್ ಆಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಶನಿವಾರ ಬಜೆಟ್ ಮಂಡನೆ ನಂತರ ಮಾಧ್ಯಮ ಪ್ರತಿಕ್ರಿಯೆ ಬಿಡುಗಡೆ ಮಾಡಿದ ಅವರು, ಈ ಬಾರಿಯ ಬಜೆಟ್ ದೇಶದ
ಕೇಂದ್ರ ಬಜೆಟ್ 2025: ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ
ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ. ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯ ವೃದ್ಧಿಸುವ ಮೂಲಕ ಅಭಿವೃದ್ಧಿ
ಬಜೆಟ್‌ನಲ್ಲಿ ಯಾವುದು ಅಗ್ಗ, ಯಾವುದು ತುಟ್ಟಿ
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26 ನೇ ಕೇಂದ್ರ ಬಜೆಟ್ ಮಂಡಿಸಿದ್ದು, 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಾಣದ ಗುರಿ ಇದೆ ಎಂದು ಹೇಳಿದ್ದಾರೆ. ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ ಅವರು




