Menu

ಫೆ. 10ರೊಳಗೆ ಖಾತಾ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಖಡಕ್‌ ಸೂಚನೆ

ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಖಡಕ್‌ ಸೂಚನೆ ನೀಡಿದ್ದಾರೆ. ಖಾತಾ ವಿಚಾರದಲ್ಲಿ  ಆಗುತ್ತಿರುವ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ  ಇಲಾಖೆಗಳು ಕಾರ್ಯ ನಿರ್ವಹಿಸಬೇಕು. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಹೇಳಿದ್ದಾರೆ. ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ

ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿಕೆ ಶಿವಕುಮಾರ್

ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ವಿದೇಶಿ

ಮಾರ್ಚ್ 1ರಿಂದ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿದ್ದರಾಮಯ್ಯ

ಬೆಂಗಳೂರು: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ

ಸೇನಾ ವಾಹನ ಸ್ಫೋಟಿಸಿದ ನಕ್ಸಲರು: 9 ಯೋಧರು ಹುತಾತ್ಮ

ಸೇನಾ ವಾಹನದ ಮೇಲೆ ನಕ್ಸಲರು ಬಾಂಬ್ ದಾಳಿ ನಡೆಸಿ ಸ್ಫೋಟಿಸಿದ ಪರಿಣಾಮ 8 ಜಿಲ್ಲಾ ಮೀಸಲು ಪಡೆಯ ಯೋಧರು ಹಾಗೂ ಚಾಲಕ ಸೇರಿದಂತೆ 9 ಯೋಧರು ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಬಿಜಾಪುರ್ ಜಿಲ್ಲೆಯ ಬಿದ್ರೆ-ಕುತ್ರು ರಸ್ತೆಯಲ್ಲಿ ನಕ್ಸಲರು ಸುಧಾರಿತ ಬಾಂಬ್

‘ಗೃಹಲಕ್ಷ್ಮಿ’ ಮಾದರಿಯಲ್ಲಿ ‘ಪ್ಯಾರಿ ದೀದಿ ಯೋಜನೆ’ ಪ್ರಕಟಿಸಿದ ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಪ್ರಕಟಿಸಿದರು. ದೆಹಲಿ ಪ್ರದೇಶ ಕಾಂಗ್ರೆಸ್

29ನೇ ಹುಟ್ಟುಹಬ್ಬದ ದಿನವೇ ಮಹಡಿ ಮೇಲಿಂದ್ದ ಬಿದ್ದು ಐಐಎಂ ವಿದ್ಯಾರ್ಥಿ ಸಾವು

29ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಐಐಎಂ ವಿದ್ಯಾರ್ಥಿಯೊಬ್ಬ ಹಾಸ್ಟೇಲ್ ನ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ನ ಸೂರತ್ ನಿವಾಸಿ ನಿಲಯ್ ಕೈಲಾಸ್ ಭಾಯ್ ಪಟೇಲ್ ಶನಿವಾರ ಹುಟ್ಟುಹಬ್ಬ ಆಚರಿಸಿಕೊಳ್ಳುವಾಗಲೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ಸ್ನೇಹಿತರ

ಗುಜರಾತ್ ನಲ್ಲಿ ಎಚ್ ಎಂಪಿ ವಿ ವೈರಸ್ ಪತ್ತೆ: ಭಾರತದಲ್ಲಿ 3ಕ್ಕೇರಿದ ಪ್ರಕರಣ

ಗುಜರಾತ್ ರಾಜಧಾನಿ ಅಹಮದಾಬಾದ್ ನಲ್ಲಿ ಎಚ್ ಎಂವಿಪಿ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಂದೇ ದಿನ 3 ಪ್ರಕರಣಗಳು ಪತ್ತೆಯಾದಂತೆ ಆಗಿದೆ. ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಎಚ್ ಎಂವಿಪಿ ವೈರಸ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ

ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನ ದೂರ ಇಲ್ಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ಅರಣ್ಯ ಅಪರಾಧಕ್ಕೆ ಆನ್ ಲೈನ್ ಎಫ್ಐಆರ್!

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಲಿದ್ದಾರೆ. ಅರಣ್ಯ ಮತ್ತು

ರಾಜ್ಯದಲ್ಲಿ HMP ವೈರಸ್ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ದೇಶದಲ್ಲಿ