ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ ಇಂದು
ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ನಾಂಪಲ್ಲಿ ನ್ಯಾಯಾಲಯ ರೆಗ್ಯುಲರ್ ಬೇಲ್ ಅರ್ಜಿ ಸಲ್ಲಿಸಿದ್ದಾರೆ. ವಾದ ಮತ್ತು ಪ್ರತಿವಾದ ಆಲಿಸಿ ನಾಂಪಲ್ಲಿ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇಂದು ಜಾಮೀನು ಕುರಿತು ನಾಂಪಲ್ಲಿ ಕೋರ್ಟ್ ಆದೇಶ ಪ್ರಕಟಿಸಲಿದೆ. ಪ್ರಕರಣಕ್ಕೆ
ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನೊಂದ ಕುಟುಂಬದವರು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ತಹಶೀಲ್ದಾರ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.
ಸೆಲ್ಫಿ ಗೀಳಿಗೆ ಅಂಜನಾದ್ರಿ ಬೆಟ್ಟದ ಕಂದಕಕ್ಕೆ ಬಿದ್ದ ಯುವತಿ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಕೆಲವು ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಆಂಜನೇಯನ
ಇನ್ಮುಂದೆ ಹುಬ್ಬಳ್ಳಿ, ಧಾರವಾಡ ಪ್ರತ್ಯೇಕ ಪಾಲಿಕೆ
ಹುಬ್ಬಳ್ಳಿ ಧಾರವಾಡ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಧಾರವಾಡ ನಗರದ ಮಹಾನಗರ ಪಾಲಿಕೆಯಲ್ಲಿ 2,75,339 ಜನಸಂಖ್ಯೆ ಮತ್ತು ಒಟ್ಟಾರೆ
10 ವರ್ಷದ ನಂತರ ಜನತೆಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ
10 ವರ್ಷಗಳ ಬಳಿಕ ರಾಜ್ಯದಲ್ಲಿ ಬಸ್ ಪ್ರಯಾಣದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು ಜ.5 ರ ಭಾನುವಾರದಿಂದಲೇ ಹೆಚ್ಚಳವಾಗಿರುವ ಶೇ 15 ರಷ್ಟು ಟಿಕೆಟ್ ದರವು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್
ಮನು ಬಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಕೇಂದ್ರ ಘೋಷಣೆ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಹಿಳಾ
ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ
ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿಎಸ್. ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್ ಸಿಟಿ
ಗಡಿ ಭಾಗದ ಕನ್ನಡ: ಮರಾಠಿ ಜನರ ಅಡ್ಡ!
ಸದರಬಜಾರ್ ಕಾದಂಬರಿ ವಸ್ತು ಎಂಬತ್ತನೆಯ ದಶಕದಲ್ಲಿ ಕಂಡು ಬಂದಿರುವ ಸನ್ನಿವೇಶ ಒಳಗೊಂಡಿದೆ. ಅಂದಿನ ಗಡಿಯ ಈಚೆ ಮತ್ತು ಗಡಿಯ ಆಚೆಯ ಬದುಕು ಮತ್ತು ಸಮಾಜ ಭಾಷೆಯ ಎಲ್ಲೆ ಮೀರಿ ಜೀವಿಸಿದೆ. ಆ ಬದುಕಿನ ಹಲವು ಮಗ್ಗುಲಗಳ ಮಾನವೀಯ ಸಂಘರ್ಷ, ಅಸ್ಮಿತೆ, ಅಸಹಾಯಕ
ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು
ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ
ಶರಣಾಗುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ 7.50 ಲಕ್ಷ ರೂ.: ವಿಕ್ರಮ್ ಅಮ್ಟೆ
ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ




