ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ
ಬಿಜೆಪಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದೊಯ್ಯುವ ಕಾರ್ಯಕ್ರಮ ಇಲ್ಲ: ಜಗದೀಶ್ ಹಿರೇಮನಿ
ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ
ನಾಳೆಯಿಂದ ರಾಜ್ಯದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ
ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ
ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಅಧಿಕಾರಿಗಳಿಗೆ ಸಿಎಂ ಸಲಹೆ
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್- ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಐಎಎಸ್
2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!
ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ
ದೇಶಾದ್ಯಂತ ಹೊಸವರ್ಷದ ಸಂಭ್ರಮ: ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,
ಕೊಪ್ಪಳ: ಬಾಣಂತಿಗೆ ಕುತ್ತು ತಂದೊಡ್ಡಿದ ಅಧಿಕ ರಕ್ತದೊತ್ತಡ
ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದಕ್ಕೆ ನಾನಾ ಕಾರಣಗಳಿದ್ದರೂ ಆಗುತ್ತಿರುವ ಜೀವಹಾನಿ ಅಸಹನೀಯ. ಇಂಥ ಮತ್ತೊಂದು ಘಟನೆ ಕೊಪ್ಪಳದಲ್ಲಿ ಮಂಗಳವಾರ ಬೆಳಗಿನ ವೇಳೆ ನಡೆದಿದೆ. ಗುರುವಾರವಷ್ಟೇ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ
ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ
ಸರಕಾರಿ ಶಾಲೆಗಳ ಸಬಲೀಕರಣ ಸಾಧ್ಯವೇ?
ಇತ್ತೀಚಿನ ದಿನಗಳಲ್ಲಿ ಸಾಹಿತ್ಯಸಮ್ಮೇಳನಗಳಿಗೆ ಇಷ್ಟೊಂದು ಹಣ ವ್ಯಯ ಮಾಡಬೇಕೇ? ಇಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಭವಿಷ್ಯದಲ್ಲಿ ಪ್ರಾಮುಖ್ಯತೆಯೇ ಇಲ್ಲ ಎನ್ನುವ ವಿರೋಧಭಾವವೇ ಹೆಚ್ಚು. ಕೆಲವೊಮ್ಮೆ ಇದು ನಿಜ ಎಂದು ಅನಿಸುವುದಿದೆ. ಹಾಗಾದರೆ, ಆಗಬೇಕದ್ದು ಏನೆಂದರೆ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯನ್ನು ಕನ್ನಡ ನಾಡು, ನುಡಿ,




