ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡು ಪ್ರಿಯಾಂಕ್
ಸ್ಪೇಡೆಕ್ಸ್ ಯಶಸ್ವಿ ಉಡಾವಣೆ: ಇಸ್ರೋ ಸಾಧನೆಗೆ ಸಚಿವ ಭೋಸರಾಜು ಸಂತಸ
ಬೆಂಗಳೂರು: ಸ್ಪೇಸ್ ಡಾಕಿಂಗ್ ಮಾಡುವ ಪ್ರಯೋಗದಲ್ಲಿ ಆರಂಭಿಕ ಯಶಸ್ಸು ಕಂಡಿರುವ ಇಸ್ರೋ ಐತಿಹಾಸಿಕ ಸಾಧನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಾನವರಹಿತ ಅಂತರಿಕ್ಷಯಾನ, ಚಂದ್ರನ
ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವಂತಿಲ್ಲ, ಸೀಟಿ ಹೊಡೆಯುವಂತಿಲ್ಲ!
ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ,
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪೋಸ್ಟರ್ ಆಂದೋಲನ
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ
ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ, ಜಾತಿ ನಿಂದನೆ: ಮೂವರ ಮೇಲೆ ಪ್ರಕರಣ ದಾಖಲು
ಧಾರವಾಡ: ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನ ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವವರು ಕುರಿಗಳಿಗೆ
ಮಲಯಾಳಂ ಕಿರುತೆರೆ ನಟ ಹೋಟೆಲ್ ನಲ್ಲಿ ಶವವಾಗಿ ಪತ್ತೆ!
ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಶವವಾಗಿ ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ‘ಪಂಚಾಗ್ನಿ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಿರುವನಂತಪುರಂಗೆ ಆಗಮಿಸಿದ್ದ ನಟ ದಿಲೀಪ್ ಶಂಕರ್ 2 ದಿನಗಳ ಹಿಂದೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದ ಅವರು ಚಿಕಿತ್ಸೆ
ಒಂದು ಸಿಗರೇಟ್ ಸೇವನೆಯಿಂದ 20 ನಿಮಿಷ ಆಯಸ್ಸು ಕಡಿಮೆ: ಸಮೀಕ್ಷೆ ವರದಿ
ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ. ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11
ಬೈಕ್ ಮೇಲೆ ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ಮೂವರು ಸಾವು
ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ. ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ
ಮನಮೋಹನ್ ಸಿಂಗ್ ಗೆ ಭಾರತ ರತ್ನ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ
ಕಾಂಗ್ರೆಸ್ ಗೆ ಚುನಾವಣೆ ಸಮಯದಲ್ಲೇ ಸೇರುತ್ತಿದ್ದೆ: ಪ್ರತಾಪ್ ಸಿಂಹ
ಮೈಸೂರು: ಸಿದ್ದರಾಮಯ್ಯ ಹೆಸರಿಡಿ ಅಂದ ತಕ್ಷಣ ನಾನು ಸಿದ್ದರಾಮಯ್ಯ ಪರ ಅಥವಾ ಕಾಂಗ್ರೆಸ್ ಪರ ಅಂತಲ್ಲ. ಕಾಂಗ್ರೆಸ್ ಕೂಡ ಸೇರಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಾನು




