Wednesday, August 26, 2026
Menu

ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದರಿಂದಲೇ ಸಮಸ್ಯೆ: ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸಿಎಂ ಪತ್ನಿ,

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ

ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಬಿಡುಗಡೆಗೊಳಿಸಿದರು. ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ. ಸದರಿ

ಲಂಕೆಯಿಂದ 34 ಭಾರತೀಯ ಬೆಸ್ತರ ಬಂಧನ

ರಾಮನಾಥಪುರ: ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಜಿಲ್ಲೆಯ 34 ಭಾರತೀಯ ಬೆಸ್ತರನ್ನು ಒಳಗೊಂಡ ಮೂರು ಭಾರತೀಯ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳನ್ನು ಲಂಕಾ ನೌಕಾಪಡೆಯು ನಸುಕಿನಲ್ಲಿ ವಶಪಡಿಸಿಕೊಂಡಿದೆ. ದೋಣಿಗಳು ಮತ್ತು ಬಂಽತ ಮೀನುಗಾರರನ್ನು ಶ್ರೀಲಂಕಾದ ದ್ವೀಪ ಪ್ರದೇಶ

ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಗೆ ವ್ಯಕ್ತಿ ಬಲಿ

2023ರಲ್ಲಿ ಪೆರು ಸೇರಿದಂತೆ ಆಫ್ರಿಕಾ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಗುಲ್ಲೆನ್ ಬಾರ್ ಸಿಂಡ್ರೋಮ್ ಎಂಬ ಮಾರಣಾಂತಿಕ ರೋಗ ಇದೀಗ ಭಾರತದಲ್ಲಿ ಹೆಚ್ಚಾಗುತ್ತಿದ್ದು, ಆತಂಕ ತಂದೊಡ್ಡಿದೆ. ಸೋಲಾಪುರದ ವ್ಯಕ್ತಿ ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಆರೋಗ್ಯ ಸಮಸ್ಯೆಗೆ ಬಲಿಯಾದ ಮೊದಲಿಗರು. ಪುಣೆಯಲ್ಲಿ ಗುಲ್ಲೆನ್ ಬಾರ್

ಸೈಫ್‌ ಪ್ರಕರಣದಲ್ಲಿ ಮುಂಬೈ ಪೊಲೀಸ್‌ ಎಡವಟ್ಟು: ಬದುಕೇ ನಾಶವೆಂದು ಯುವಕನ ಅಳಲು

ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಡಿದ ಎಡವಟ್ಟು ಯುವಕನೊಬ್ಬನ ಜೀವನದ ದಿಕ್ಕನ್ನೇ ತಪ್ಪಿಸಿದೆ. ಪ್ರಕರಣ ಸಂಬಂಧ ಶಂಕಿತ ಆರೋಪಿ, ಟೂರ್ಸ್ ಕಂಪನಿ ಆಕಾಶ್ ಕನೋಜಿಯಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಆಕಾಶ್ ನಿಜವಾದ

ಪಿರಿಯಾಪಟ್ಟಣದಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

ಹೃದಯಾಘಾತದಿಂದ ಯುವಕರು,ಯುವತಿಯರು, ಮಕ್ಕಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ)ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ

ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟಿಸ್‌

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ. ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​

ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್‌ ಕಿರುಕುಳ ಶಂಕೆ

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು.