ಸೆಕ್ಸ್ ವಿಕ್ಟಿಮ್ಸ್ ಗುರುತು ಬಹಿರಂಗಗೊಳ್ಳುವಂತಿಲ್ಲ: ಪೊಲೀಸ್ ಠಾಣೆಗಳಿಗೆ ಡಿಜಿಪಿ ಸಲೀಂ ಖಡಕ್ ವಾರ್ನ್
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರ ಹೆಸರು, ವಿಳಾಸ ಅಥವಾ ಅವರ ಗುರುತನ್ನು ಯಾವುದೇ ಹಂತದಲ್ಲಿ ಬಹಿರಂಗಪಡಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಇಲಾಖೆಯ ಸ್ಥಾಯಿ ಆದೇಶ ಸಂಖ್ಯೆ 1024ರ ಅಡಿ ಸಂತ್ರಸ್ತರ ಗೌಪ್ಯತೆ ಕಾಪಾಡುವುದು ಕಡ್ಡಾಯ. ಆದರೂ ಕೆಲವು ಠಾಣೆಗಳಲ್ಲಿ ಎಫ್‌ಐಆರ್ ಮತ್ತು ತನಿಖಾ ವರದಿಗಳಲ್ಲಿ
ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ಕ್ಕೆ ಚುನಾವಣೆ
ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ,
ಹಾಸನದಲ್ಲಿ ಎರಡು ಎಕರೆ ಆಸ್ತಿ ವಿವಾದ: ದಾಯಾದಿಗಳಿಂದ ವ್ಯಕ್ತಿ ಕೊಲೆ
ಹಾಸನದ ಆಲೂರು ತಾಲೂಕಿನ ರಾಜನಹಳ್ಳಿ ಸಮೀಪ ಎರಡು ಎಕರೆ ಆಸ್ತಿ ವಿವಾದ ತಾರಕಕ್ಕೆ ಏರಿ, ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿಯನ್ನು ದಾಯಾದಿಗಳು ಸೇರಿ ಹತ್ಯೆ ಮಾಡಿದ್ದಾರೆ. ಕೆಎಸ್‌ಆರ್‌ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿದ್ದ ವೀರಪ್ಪ (58) ಹತ್ಯೆಯಾದವರು. ಕೋರ್ಟ್ ಕೇಸ್ ಮುಗಿಸಿ ಬಂದ ಬಳಿಕ
ಹುಟ್ಟುಹಬ್ಬದ ಖುಷಿಯಲ್ಲಿದ್ದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ
ಬೆಂಗಳೂರಿನಲ್ಲಿ ಯುವಕನೊಬ್ಬ ಸ್ನೇಹಿತರ ಜೊತೆಗೆ ತನ್ನ ಹುಟ್ಟುಹಬ್ಬವನ್ನು ಸಂಭ್ರಮಿಸಿ ಮನೆಗೆ ತೆರಳುತ್ತಿದ್ದಾಗ ನಡೆದ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಬೈಕ್ ಹಾಗೂ ಅಶೋಕಾ ಲೈಲಾಂಡ್ ಡಿಕ್ಕಿಯಾಗಿ ಬೆಂಗಳೂರು ಉತ್ತರ ತೋಟದ ಗುಡ್ಡದಹಳ್ಳಿ ನಿವಾಸಿ ಪವನ್ (24) ಅಸು ನೀಗಿದ್ದಾನೆ. ಸಂಜೆ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ಅರ್ಜಿ ವಜಾಗೊಳಿಸಿದ ಕೋರ್ಟ್
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಅರ್ಜಿ ಸಲ್ಲಿಸಿದ್ದರು, ಆ ಅರ್ಜಿಯನ್ನು ವಜಾ
ನೌಕಾಪಡೆ ಮಾಹಿತಿ ಪಾಕ್‌ಗೆ ರವಾನೆ: ಉಡುಪಿಯಲ್ಲಿ ಮತ್ತೊಬ್ಬ ಅರೆಸ್ಟ್
ಭಾರತೀಯ ನೌಕಾ ಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮತ್ತೊಬ್ಬನನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೌಪ್ಯ ಮಾಹಿತಿಯನ್ನು
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಸೀಟ್ ಬೇಡಿಕೆ: ಬಿಜೆಪಿ ಹೈಕಮಾಂಡ್‌ಗೆ ಸವಾಲು
ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ಜೆಡಿಎಸ್ ಪಾರ್ಟಿಗೆ ಸಿಂಹಪಾಲಿನ ಸೀಟುಗಳನ್ನು ಕೇಳಿರುವುದು ದಿಲ್ಲಿ ಬಿಜೆಪಿ ಹೈಕಮಾಂಡಿಗೆ ಈಗ ಸವಾಲಾಗಿದೆ. ಜಿಬಿಎ ಮತ್ತು ಪಂಚಾಯ್ತಿ ಚುನಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಒಡ್ಡುವ ಷರತ್ತು ಮತ್ತು ಬಿಗಿಸೂತ್ರಗಳಿಗೆ ಕಟ್ಟುಬೀಳುವುದು ಬೇಡ.
ಮಹದೇವಪ್ಪ ಈಗ ನಮ್ಮ ಹೈಕಮಾಂಡ್ ಭಾಗ, ನನ್ನ- ಸಿದ್ದರಾಮಯ್ಯ ನಡುವೆ ಕದ್ದುಮುಚ್ಚಿ ವ್ಯವಹಾರ ನಡೆದಿಲ್ಲ: ಕುಟುಕಿದ ಡಿಕೆ ಶಿವಕುಮಾರ್
“ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ
ಹತ್ತು ವರ್ಷ ಕಾನೂನು ಹೋರಾಟ: ಅಪರಿಚಿತೆಗೆ ಕಿಡ್ನಿ ದಾನಗೈದು ಇತಿಹಾಸ ಸೃಷ್ಟಿಸಿದ ಡಾ. ಥಂಕಮ್ ಎಸ್
ಜೀವಂತವಾಗಿರುವಾಗಲೇ ಕಿಡ್ನಿ ದಾನ ಮಾಡುವುದಾದರೆ ಕಿಡ್ನಿ ದಾನ ಪಡೆಯುವವರು ಸಂಬಂಧಿಕರು, ಪರಿಚಿತರು ಆಗಿರಬೇಕು. ಪೋಷಕರು, ಒಡಹುಟ್ಟಿದವರು, ಮಕ್ಕಳು ಆಗಿರಬೇಕು ಎಂಬ ನಿಯಮವಿದ್ದ ಕಾರಣ ಬೆಂಗಳೂರಿನ ವೈದ್ಯೆಯೊಬ್ಬರು 10 ವರ್ಷ ಕಾನೂನು ಹೋರಾಟ ನಡೆಸಿ ಯಶಸ್ವಿಯಾಗಿ ಅಪರಿಚಿತ ಮಹಿಳೆಗೆ ತಮ್ಮ ಕಿಡ್ನಿ ದಾನ
ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ಇಸಿಗೆ ಡಿಕೆ ಶಿವಕುಮಾರ್ ನಿಯೋಗ ಮನವಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ




