Wednesday, August 26, 2026
Menu

ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ ಮಾಡ್ಯೂಲ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನೆ

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ (ಸಿಬ್ಬಂದಿ) ಮಾಡ್ಯೂಲ್‌ ಅನ್ನು ಬೆಂಗಳೂರು ಎಲ್‌ಪಿಎಸ್‌ನಿಂದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನಿಸಲಾಗಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಇಸ್ರೋ, ಲಿಕ್ವಿಡ್‌ ಪ್ರೊಪಲ್ಷನ್ ಸಿಸ್ಟಮ್‌ ಏಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಮೊದಲ ಸಿಬ್ಬಂದಿರಹಿತ ಗಗನಯಾನ ಯೋಜನೆಯ ಭಾಗವಾಗಿ ಇದನ್ನು ಕಳಿಸಲಾಗಿದೆ ಎಂದು ಮಾಹಿತಿ ನೀಡಿದೆ. ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ವಿನ್ಯಾಸಗೊಳಿಸಲಾದ ಕ್ರ್ಯೂ ಮಾಡ್ಯೂಲ್‌ ಎಂತಹ ಪರಿಸ್ಥಿತಿಯಲ್ಲೂ ನೇರವಾಗಿ, ಸ್ಥಿರವಾಗಿರುವಂತೆ

ಇ-ಸೇವೆಯಲ್ಲಿ ಕರ್ನಾಟಕ ನಂ.1: ವರದಿ

ದೇಶಾದ್ಯಂತ ಇ-ಸೇವೆಗಳ ವಿತರಣೆಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಇ-ಆಡಳಿತ ಸೇವಾ ವಿತರಣಾ ಮೌಲ್ಯಮಾಪನ (NeSDA) ವರದಿ ಹೇಳಿದೆ. ದೇಶಾದ್ಯಂತ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಇ-ಸೇವಾ ವಿತರಣೆಯ ಸ್ಥಿತಿಗತಿಯ ಕುರಿತು ಸುದೀರ್ಘ ಸಮೀಕ್ಷೆ ನಡೆಸಿ ವರದಿ ಪ್ರಕಟಿಸಿದ್ದು, ಕರ್ನಾಟಕ ಇ-ಸೇವೆಗಳ

ತಿರುಮಲದಲ್ಲಿ ರಾಜ್ಯ ಭಕ್ತಾದಿಗಳಿಗೆ ಮೂರು ವಸತಿ ಸಂಕೀರ್ಣ

ಬೆಂಗಳೂರು:ರಾಜ್ಯ ಸರ್ಕಾರವು ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

ಅಭಿಷೇಕ ಅಬ್ಬರಕ್ಕೆ ಸೋಲುಂಡ ಇಂಗ್ಲೆಂಡ್: ಭಾರತಕ್ಕೆ 7 ವಿಕೆಟ್ ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್

ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್: ಸಿದ್ದರಾಮಯ್ಯ

ಬೆಂಗಳೂರು, ಜನವರಿ 23: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ಮುಂದಾಗಿ, ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿರುವ ಈ

ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್‌ಚಿಟ್‌ ?

ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ  ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು

ಕಪಿಲ್ ಶರ್ಮಾ, ರಾಜ್‌ಪಾಲ್ ಯಾದವ್ ಸೇರಿ ನಾಲ್ವರಿಗೆ ಪಾಕ್‌ನಿಂದ ಜೀವ ಬೆದರಿಕೆ

ಕಾಮಿಡಿ ಶೋ ನಿರೂಪಕ ಕಪಿಲ್ ಶರ್ಮಾ, ಬಾಲಿವುಡ್ ಕಾಮಿಡಿ ನಟ ರಾಜ್‌ಪಾಲ್ ಯಾದವ್ ಸೇರಿದಂತೆ ಒಟ್ಟು ನಾಲ್ವರು ಸೆಲೆಬ್ರೆಟಿಗಳಿಗೆ ಪಾಕಿಸ್ತಾನದಿಂದ ಇಮೇಲ್ ಮೂಲಕ ಜೀವ ಬೆದರಿಕೆ ಬಂದಿದ್ದು, ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಪಿಲ್ ಶರ್ಮಾ, ರಾಜ್‌ಪಾಲ್ ಯಾದವ್,

ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮವೆಂದು ಘೋಷಿಸಿದ ಇಂಧನ ಸಚಿವ ಜಾರ್ಜ್

ರಾಜ್ಯದ ರೈತರಿಗೆ ಸರ್ಕಾರದ ಕಡೆಯಿಂದ ಇದೊಂದು ಸಿಹಿ ಸುದ್ದಿ. 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮ ಎಂದು ಇಂಧನ ಇಲಾಖೆ ಘೋಷಿಸಿದೆ. ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ ಈ ಮಾಹಿತಿ ನೀಡಿದ್ದಾರೆ.

ಸಕಲೇಶಪುರದಲ್ಲಿ ಶಾಲೆಗೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆ

ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬವರ ಮಕ್ಕಳಾದ ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾದವರು.