Wednesday, August 26, 2026
Menu

ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಸೈಫ್ ಅಲಿ ಖಾನ್ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಚಾಕು ಇರಿತದಿಂದ ಕಳೆದ 6 ದಿನಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಸೈಫ್ ಅಲಿ ಖಾನ್

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸುವರ್ಣಸೌಧದಲ್ಲಿ

ಒಡಿಶಾ- ಛತ್ತೀಸಗಢ ಗಡಿಯಲ್ಲಿ 16 ನಕ್ಸಲರ ಎನ್ ಕೌಂಟರ್

ಒಡಿಶಾ ಮತ್ತು ಛತ್ತೀಸಗಢ ಗಡಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದಾರೆ. ಒಡಿಶಾದ ನುಪಾಡ ಜಿಲ್ಲೆ ಮತ್ತು ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ನಡುವೆ ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರನ್ನು

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಖಡಕ್ ಎಚ್ಚರಿಕೆ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ಇಡೀ

ತೈವಾನ್ ನಲ್ಲಿ 6.4 ತೀವ್ರತೆಯಲ್ಲಿ ಭೂಕಂಪನ: 27 ಮಂದಿಗೆ ಗಾಯ

ತೈವಾನ್ ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ ಪ್ರಬಲ 6.4 ತೀವ್ರತೆಯ ಭೂಕಂಪನ ಸಂಭವಿಸಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಚಿಯಾಯಿ ನಗರದ ದಾಪು ಪಟ್ಟಣದಲ್ಲಿ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ವಿಶ್ವದ ದೊಡ್ಡಣ್ಣ ಎಂದೇ ಹೆಸರು ಪಡೆದಿರುವ ಅಮೆರಿಕದ 47ನೇ ಬಾರಿ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮಾತನಾಡಿದ ಡೊನಾಲ್ಡ್ ಟ್ರಂಪ್, ಶಿಕ್ಷಣ ವ್ಯವಸ್ಥೆ, ಉದ್ಯಮ, ವಲಸೆ ನೀತಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ

ಬೆಳಗಾವಿಯಲ್ಲಿ ಇಂದು ಮಹಾತ್ಮಾ ಗಾಂಧೀಜಿ ಕಂಚಿನ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಮಂಗಳವಾರ (ಜ.21) ಬೆಳಿಗ್ಗೆ 10.30 ಗಂಟೆಗೆ ಅನಾವರಣಗೊಳಿಸಲಾಗುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ‌ ಪ್ರವೇಶ

ತೊಗರಿ ಕ್ವಿಂಟಾಲ್ ಗೆ 450 ರೂ. ಬೆಂಬಲ ಬೆಲೆ: ರಾಜ್ಯ ಸರ್ಕಾರದಿಂದ 140 ಕೋಟಿ ರೂ. ಘೋಷಣೆ

ವಿಜಯಪುರ : ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು. ಪ್ರವಾಸಿ ಮಂದಿರದಲ್ಲಿ

 ಪವರ್ ಪಾಲಿಟಿಕ್ಸ್, ಪವರ್ ಶೇರಿಂಗ್, ಪವರ್ ಕೇರಿಂಗ್ ಯಾವುದೂ ಇಲ್ಲ: ಬೈರತಿ ಸುರೇಶ್

ಕೋಲಾರ: ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಪಾಲಿಟಿಕ್ಸ್ ನಡೆಯುತ್ತಿಲ್ಲ, ಪವರ್ ಶೇರಿಂಗ್, ಪವರ್ ಕೇರಿಂಗ್ ಯಾವುದೂ ಇಲ್ಲ. ಕೇವಲ ರಾಜ್ಯದ ಅಭಿವೃದ್ದಿಗೆ ಮಾತ್ರ ಸೀಮಿತವಾಗಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ

ತಮಿಳುನಾಡಿನಲ್ಲಿ ಮಂಗಳೂರು ಬ್ಯಾಂಕ್ ದರೋಡೆ ಮಾಡಿದ ಮೂವರು ಅರೆಸ್ಟ್

ಮಂಗಳೂರಿನ ಕೋಟೆಕಾರ್ ಬ್ಯಾಂಕ್ ನಲ್ಲಿ 12 ಕೋಟಿ ಚಿನ್ನಾಭರಣ ಮತ್ತು ನಗದು ದೋಚಿದ ದರೋಡೆಕೋರರ ಪೈಕಿ ಮೂವರನ್ನು ಬಂಧಿಸಲಾಗಿದೆ. ಬಂಧಿತ ಮೂವರು ತಮಿಳುನಾಡಿನ ತಿರುವನ್ನೆಲ್ಲಿ ನಿವಾಸಿಗಳಾಗಿದ್ದು, ತಮ್ಮದೇ ಊರಿನಲ್ಲಿ ಪ್ರಕಾಶ್ ಅಲಿಯಾಸ್ ಜೈಸ್ವಾ, ಮುರುಗನ್ ಮತ್ತು ಮಣಿವಣ್ಣನ್ ಅವರನ್ನು ಬಂಧಿಸಲಾಗಿದೆ. ಜನವರಿ