Wednesday, August 26, 2026
Menu

ಪ್ರಭಾಕರ್ ಕೋರೆ ಮನೆಯಲ್ಲಿ ಜೋಳದ ರೊಟ್ಟಿ ಊಟ ಸವಿದ ಡಿಸಿಎಂ

ಬೆಳಗಾವಿ: ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ ಸಹಕಾರ ನೀಡುತ್ತಾರೆ. ಗಾಂಧಿ ಭಾರತ

ಭೌತಿಕ, ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ಅರಿವು ಕೇಂದ್ರಗಳ ಸಬಲೀಕರಣ: ಪ್ರಿಯಾಂಕ್ ಖರ್ಗೆ

“ನಮ್ಮ ಗ್ರಾಮೀಣ ಸಮುದಾಯಗಳನ್ನು ಶಿಕ್ಷಣದ ಮೂಲಕ ಸಬಲೀಕರಣಗೊಳಿಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಬ್ರಿಟಿಷ್ ಕೌನ್ಸಿಲ್ನೊಂದಿಗಿನ ನಮ್ಮ ಪಾಲುದಾರಿಕೆಯೊಂದಿಗೆ, ಗ್ರಾಮೀಣ ಕರ್ನಾಟಕದ ಮಕ್ಕಳಿಗೆ ಎಲ್ಲಾ ಉತ್ತಮ ಗುಣಮಟ್ಟದ ಕಲಿಕೆಯ ಸಂಪನ್ಮೂಲಗಳಿಗೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಮೂಲಕ ಕಲಿಕೆಯನ್ನು ಪ್ರೇರೇಪಿಸುವ, ಕೌಶಲ್ಯಗಳನ್ನು ಬೆಳೆಸುವ ಮತ್ತು ದೊಡ್ಡ

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ

ಕೆಂಪೇಗೌಡ ಲೇಔಟ್ ನ 16 ಎಕರೆ ಒತ್ತುವರಿ ತೆರವುಗೊಳಿಸಿದ ಬಿಡಿಎ

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ಅತಿಕ್ರಮ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಜಾಗವನ್ನು ತೆರವುಗೊಳಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮರುವಶ ಮಾಡಿಕೊಂಡಿದೆ. ಜನವರಿ 16 ರಿಂದ 18 ರ ಮೂರು ದಿನಗಳ ಕಾರ್ಯಾಚರಣೆಯಲ್ಲಿ ಪ್ರಾಧಿಕಾರವು

ಗೋ ಹಿಂಸೆ ಪ್ರಕರಣಗಳ ಪೊಲೀಸ್ ತನಿಖೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಪೊಲೀಸರಿಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ರಾಜ್ಯದ ಹಲವು ಕಡೆ ಗೋವು ಹಿಂಸೆ ಹಾಗೂ ಹತ್ಯೆ ಮಾಡಿ ಭೋಜನ ಮಾಡಿದ

ಏರ್‌ಟೆಲ್- ಬಜಾಜ್ ಫೈನಾನ್ಸ್ ಡಿಜಿಟಲ್ ವೇದಿಕೆಗೆ ಒಪ್ಪಂದ

ಬೆಂಗಳೂರು: ಭಾರತದ ಅತಿದೊಡ್ಡ ದೂರವಾಣಿ ಸೇವೆಗಳಲ್ಲಿ ಒಂದಾದ, ಭಾರತಿ ಏರ್‌ಟೆಲ್ ಮತ್ತು ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕೇತರ ಹಣಕಾಸಿನ ಸಂಸ್ಥೆಯಾದ(NBFC) ಬಜಾಜ್ ಫೈನಾನ್ಸ್, ಇಂದು ಕೊನೆಯ ಹಂತದ ವಿತರಣೆಯನ್ನು ಮಾರ್ಪಡಿಸಲು ಮತ್ತು ಹಣಕಾಸಿನ ಸೇವೆಗಳಿಗಾಗಿ ಭಾರತದ ಅತಿದೊಡ್ಡ ಡಿಜಿಟಲ್ ವೇದಿಕೆಯೊಂದನ್ನು

ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ!

ಹೊಸದಿಲ್ಲಿ: ವಾಹನವನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ ನಂತರ ಆತನ ಸಾರಿಗೆ ನೋಂದಣಿ ಮಾಡಿಸಲು ತಪ್ಪಿದರೇ ಮೂಲ ಮಾಲೀಕರನ್ನು ಸಂಕಷ್ಟಕ್ಕೆ ದೂಡುವ ನಿಯಮವನ್ನು ಸರಕಾರ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮನಿಸಿದೆ. ವಾಹನ ಮಾರಾಟವಾಗಿ ಸುಮಾರು ದಿನಗಳೇ ಆದರೂ ಆ ವಾಹನದ ದಾಖಲೆಯು

ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರಪ್ರದೇಶ ಉಪಮುಖ್ಯಮಂತ್ರಿ?

ಹೈದರಾಬಾದ್: ನೆರೆಯ ತಮಿಳುನಾಡಿನಂತೆ ಆಂಧ್ರದಲ್ಲಿಯೂ ಸಿಎಂ ಪುತ್ರ ಡಿಸಿಎಂ ಆಗುವ ದಿನ ದೂರವಿಲ್ಲ. ಇದರಿಂದ ನಟ ಪವನ್ ಕಲ್ಯಾಣ್ ಸಮನಾದ ಸ್ಥಾನ ಗಿಟ್ಟಿಸಲಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ, ಸಚಿವ ನಾರಾ ಲೋಕೇಶ್

ಯಾವ ಬಂಡಾಯ, ಭಿನ್ನಾಭಿಪ್ರಾಯ ಯಾವೂದು ಇಲ್ಲ: ಡಿಕೆ ಶಿವಕುಮಾರ್

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ

ಒಲಿಂಪಿಕ್ಸ್ ನಲ್ಲಿ ಡಬಲ್ ಪದಕದ ಸಾಧನೆ ಮಾಡಿರುವ ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಸದ್ದು ಗದ್ದಲವಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನೀರಜ್ ಚೋಪ್ರಾ ಹಿಮಾನಿ ಅವರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ವರಿಸಿದ್ದು, ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಮದುವೆ ಫೋಟೊ ಬಿಡುಗಡೆ ಮಾಡಿದ್ದಾರೆ.