Menu

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ಕೆಲಸ ಮಾಡುತ್ತೇನೆ: ಡಿಕೆ ಶಿವಕುಮಾರ್

ಶೃಂಗೇರಿ: ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಶೃಂಗೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ ಬೇಡ. ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ

ಶರಣಾಗಿದ್ದ ನಕ್ಸಲರ ಶಸ್ತ್ರಾಸ್ತ್ರ ಅರಣ್ಯದಲ್ಲಿ ಪತ್ತೆ!

ಕೆಲವು ದಿನಗಳ ಹಿಂದೆ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಚಿಕ್ಕಮಗಳೂರಿನ ದಟ್ಟ ಅರಣ್ಯದಲ್ಲಿ ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಗುಂಡಿಯಲ್ಲಿ ಮುಚ್ಚಿಡಲಾಗಿದ್ದ 1 ಎಕೆ 56, ಮೂರು 303 ರೈಫಲ್, 12 ಕಂಟ್ರಿ

ದಿಲ್ಲಿ ವಿಮಾನ ನಿಲ್ದಾಣ: ಟರ್ಮಿನಲ್ 2 ತಾತ್ಕಾಲಿಕ ಸ್ಥಗಿತ

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-೨ ಅನ್ನು ನವೀಕರಣಕ್ಕಾಗಿ ಏಪ್ರಿಲ್‌ನಿಂದ ಆರು ತಿಂಗಳವರೆಗೆ ಮುಚ್ಚಲಾಗುವುದು ಎಂದು ದೆಹಲಿ ಇಂಟರ್ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ ತಿಳಿಸಿದೆ. ದೆಹಲಿ ವಿಮಾನ ನಿಲ್ದಾಣವು ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದ್ದು, ಮೂರು ಟರ್ಮಿನಲ್‌ಗಳನ್ನು

ಗಾಂಧಿ ಭಾರತ ಕಾರ್ಯಕ್ರಮದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಕೆ ಶಿವಕುಮಾರ್

ಬೆಂಗಳೂರು: ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಡಿಸಿಎಂ ಡಿಕೆ ಶಿವಕುಮಾರ್

ಡಿಕೆಶಿ ಬಗ್ಗೆ ಮಾತಾಡೋ ಯತ್ನಾಳ್‌ಗೆ ಉಗೀರಿ ಎಂದ ಶಾಸಕ ಸೋಮಶೇಖರ್‌

ಯತ್ನಾಳ್‌ಗೆ ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ಏನು ಸಂಬಂಧ, ಡಿಕೆಶಿ ಬಗ್ಗೆ ಮಾತನಾಡಲು ಯತ್ನಾಳ್‌ಗೆ ಯಾರು ಹೇಳಿದ್ದು, ಯತ್ನಾಳ್‌ಗೆ ಉಗೀರಿ, ಅವರದ್ದೇ ನೋಡಿಕೊಲ್ಳಲು ಅವರಿಗೆ ನೂರೆಂಟು ಇದೆ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಬಿಜೆಪಿ ಬಂಡಾಯ ಶಾಸಕ ಎಸ್‌.ಟಿ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ

ಇಸ್ಕಾನ್‌ನಲ್ಲಿ ಇಂದು ರಾತ್ರಿ 11ರವರೆಗೂ ಶ್ರೀ ವೆಂಕಟೇಶ್ವರ ದರ್ಶನ

ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರು ನಗರ ಸೇರಿದಂತೆ ರಾಜ್ಯದ ದೇಗುಲಗಳಲ್ಲಿ ಭಕ್ತರು ನಸುಕಿನ ಜಾವದಿಂದಲೇ ಶ್ರೀ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ, ಮಲ್ಲೇಶ್ವರದ ವೈಯಾಲಿಕಾವಲ್ ಟಿಟಿಡಿ ದೇವಾಲಯ, ನೆಲಮಂಗಲದಲ್ಲಿರುವ ಶ್ರೀ ವೆಂಕಟೇಶ್ವರನ ದೇವಾಲಯ

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ: ಡಿಸಿಎಂ ಶಿವಕುಮಾರ್

ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ

ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್‌ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ

ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ರೆ ಬ್ಯಾಂಕ್‍ಗಳಿಗೆ ದಿನಕ್ಕೆ 100 ರೂ. ದಂಡ

ದೇಶದ ಬ್ಯಾಂಕ್‍ ಗಳು ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ದೂರುಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸ ಬೇಕು, ಇಲ್ಲವಾದರೆ ದಿನದ ಆಧಾರದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಒಂದು ತಿಂಗಳೊಳಗೆ ಗ್ರಾಹಕರ ದೂರು ಇತ್ಯರ್ಥವಾಗದೇ ಹೋದಲ್ಲಿ ದಿನಕ್ಕೆ 100 ರೂ.ನಂತೆ

ದರ್ಶನ್‌, ಪವಿತ್ರಾ ವಿಚಾರಣೆ ಫೆ.25ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್‍ ಸೇರಿ 17 ಆರೋಪಿಗಳು ವಿಚಾರಣೆಗೆ ಕೋರ್ಟ್‍ಗೆ ಹಾಜರಾಗಿದ್ದರು. ಆದರೆ ವಿಚಾರಣೆಯನ್ನು ಕೋರ್ಟ್‍ ಫೆ.25ಕ್ಕೆ ಮುಂದೂಡಿದೆ. ವಿಚಾರಣೆಗೆ ಆಗಮಿಸಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಮುಖ