ಮೆಂಟಲ್ ಹೆಲ್ತ್ ಮ್ಯಾಟರ್ಸ್ ಇದು: ಎಲ್ ಅಂಡ್ ಟಿ ಅಧ್ಯಕ್ಷರ ವಿರುದ್ಧ ಹರಿ ಹಾಯ್ದ ದೀಪಿಕಾ ಪಡುಕೋಣೆ
ಲಾರ್ಸೆನ್ ಮತ್ತು ಟೂಬ್ರೊ ಅಧ್ಯಕ್ಷ ಎಸ್‌ಎನ್ ಸುಬ್ರಹ್ಮಣ್ಯನ್ ನೌಕರರು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕೆಂದು ನೀಡಿರುವ ಹೇಳಿಕೆಯನ್ನು ನಟಿ ದೀಪಿಕಾ ಪಡುಕೋಣೆ ಖಂಡಿಸಿದ್ದಾರೆ. ಈ ಹಿಂದೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿ ಇನ್ಫೋಸಿಸ್ ನಾರಾಯಣ ಮೂರ್ತಿ ಟೀಕೆಗೆ ಗುರಿಯಾಗಿದ್ದರು. ಇದೀಗ ಮತ್ತೋರ್ವ ಉದ್ಯಮಿ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಇದು ದೊಡ್ಡ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ವಿಚಾರ ಎಂದಿದ್ದಾರೆ ಪಡುಕೋಣೆ. ಪತ್ರಕರ್ತೆ ಫಾಯೆ ಡಿಸೋಜಾ ಅವರ
ಪರೀಕ್ಷೆ ತಪ್ಪಿಸಿಕೊಳ್ಳಲು ಶಾಲೆಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಯ ಬಂಧನ
ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಮಾಡಿದ್ದ ಕಾಲೇಜೊಂದರ 12ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿದ್ಯಾರ್ಥಿಯು ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ. ವಿದ್ಯಾರ್ಥಿಯು ಪರೀಕ್ಷೆಯಿಂದ ತಪ್ಪಿಸಿಕೊಳ್ಳುವ
ಸೈಲೆಂಟ್ ಆಗಿ ಹೈಕ್ ಆಯ್ತು ಬಿಯರ್ ರೇಟ್, ಜ.20ರಿಂದ ಜಾರಿ
ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರದಲ್ಲಿ ದುಬಾರಿ ಏರಿಕೆ ಮೂಲಕ ಮದ್ಯ ಪ್ರಿಯರಿಗೆ ಬಿಸಿ ಮುಟ್ಟಿಸಿದೆ. ಬಿಯರ್ ಒಳಗೊಂಡಿರುವ ಆಲ್ಕೋಹಾಲ್ ಅಂಶ ಆಧರಿಸಿ ಪ್ರತಿ ಬಿಯರ್ ಬಾಟಲಿಗೆ
ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು
ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ
ಮಂಗಳೂರಲ್ಲಿ ಅಕ್ರಮ ವಾಸವಿದ್ದ ಬಾಂಗ್ಲಾದೇಶಿ ಸೆರೆ
ಮಂಗಳೂರಿನ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25) ಬಂಧಿತ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ
ನಟ ಕಿಶೋರ್ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನೇಮಕ
ಬಹುಭಾಷಾ ನಟ ಕಿಶೋರ್ ಕುಮಾರ್. ಜಿ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ
ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡುವ ಪರಿಸ್ಥಿತಿ ಇಲ್ಲ: ಕೆಜೆ.ಜಾರ್ಜ್
ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ
2ನೇ ಬಾರಿ ನೋಟಿಸ್: ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!
ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್
ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ
ರಾಜ್ಯ ಸರ್ಕಾರದ ಮುಂದೆ ಶರಣಾಗಿದ್ದ ವಿವಿಧ ರಾಜ್ಯಗಳ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ
ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ




