ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ಚುನಾವಣೆ ದಿನಾಂಕ ಘೋಷಿಸಲಿರುವ ಆಯೋಗ!
ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಘೋಷಿಸಲಿದೆ. ಫೆಬ್ರವರಿ 15ರಂದು ದಹಲಿ 7ನೇ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಇದಕ್ಕೂ ಮುನ್ನ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಚುನಾವಣಾ ದಿನಾಂಕ ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸತತ ಮೂರನೇ ಬಾರಿ ಅಧಿಕಾರ ಹಿಡಿಯುವ ಉಮೇದಿನಲ್ಲಿದ್ದರೆ, ಕೇಂದ್ರದಲ್ಲಿರುವ
ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ
ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್ ಆಸೀಫ್ (12), ಮಮ್ತಾಜ್ (38), ಶಾಖಿರ್ ಹುಸೇನ್ (18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಅಂಬೇಡ್ಕರ್‌ಗೆ ಶಾ ಅವಮಾನ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವಂತೆ ಹೇಳಿಕೆ ನೀಡಿರುವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್ ಕಚೇರಿಗೆ ಮುತ್ತಿಗೆ ಹಾಕಲಯ ಯತ್ನಿಸಿದಾಗ ಪ್ರತಿಭಟನಾಕಾ
ಟಿಬೆಟ್‌ನಲ್ಲಿ ಪ್ರಬಲ ಭೂಕಂಪಕ್ಕೆ 32 ಮಂದಿ ಬಲಿ
ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಇಂದು ಮುಂಜಾನೆ 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, 32 ಮಂದಿ ಮೃತಪಟ್ಟರೆ 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪ ಟಿಬೆಟ್‌ನಲ್ಲಿ ಸಂಭವಿಸಿದ್ದು, ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪವು
ದರ್ಶನ್ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅನಿಲ್
2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಅಂದ್ರು ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರಲ್ಲ. ಈ ಅವಧಿಗೆ ನಾನು ಸಿಎಂ ಆಗುವುದಿಲ್ಲ, 2028 ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ
HMPV ಎದುರಿಸಲು ಸರ್ಕಾರ ಸನ್ನದ್ಧವಾಗಲಿ : ಆರ್. ಅಶೋಕ್
ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು
ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ: ಸಚಿವ ಕೆ.ಜೆ.ಜಾರ್ಜ್
ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ
ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಸಚಿವ ಹೆಚ್‌ಡಿಕೆ
2030ರ ವೇಳೆಗೆ ಭಾರತ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿಗದಿ ಮಾಡಿರುವ ಗುರಿ ಮುಟ್ಟುವ ದೃಷ್ಟಿಯಿಂದ ಮತ್ತೊಂದು ಸುತ್ತಿನ ‘ಉತ್ಪಾದನೆ ಆಧಾರಿತ ಉತ್ತೇಜನ ಸೌಲಭ್ಯ ಯೋಜನೆಗೆ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ
ಫೆ. 10ರೊಳಗೆ ಖಾತಾ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಖಡಕ್ ಸೂಚನೆ
ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಖಾತಾ ವಿಚಾರದಲ್ಲಿ ಆಗುತ್ತಿರುವ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ




