ಅರಣ್ಯ ಅಪರಾಧಕ್ಕೆ ಆನ್ ಲೈನ್ ಎಫ್ಐಆರ್!
ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಲಿದ್ದಾರೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ. ಈಗಾಗಲೇ ರಾಜ್ಯ ಪೊಲೀಸ್ ಇಲಾಖೆಯಲ್ಲಿರುವಂತೆ ಅರಣ್ಯ
ರಾಜ್ಯದಲ್ಲಿ HMP ವೈರಸ್ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ದೇಶದಲ್ಲಿ
ಕೆಎಸ್ಆರ್ ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಕೆ.ಎಸ್.ಆರ್.ಟಿ.ಸಿ ಆರೋಗ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು
ಕೊಪ್ಪಳದಲ್ಲಿ ಬಾಣಂತಿ ಸಾವು: ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ
ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಉತ್ತಮ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ
ನಿಯಂತ್ರಣ ತಪ್ಪಿದ ಲಾರಿಗೆ ಇಬ್ಬರು ಬಲಿ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ. ಲಾರಿ ಕಬ್ಬಿಣದ ಸಾಮಾನುಗಳನ್ನು ತುಂಬಿಕೊಂಡು ಸಾಗರದಿಂದ ಹೊನ್ನಾವರ
ವೈದ್ಯರ ಮೇಲಿನ ಸಿಟ್ಟಿಗೆ ಎಂಎಲ್‌ಸಿ ಹೆಸರಲ್ಲಿ ವಿಷ ಸ್ವೀಟ್ ಬಾಕ್ಸ್ ಕಳಿಸಿದ್ದ ಮಾನಸಿಕ ರೋಗಿ
ಶಿವಮೊಗ್ಗ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ಗಳನ್ನು ಕೊರಿಯರ್ ಮಾಡಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ರೋಗಿ ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಭದ್ರಾವತಿ ನಿವಾಸಿಯಾಗಿರುವ ಆರೋಪಿ
ಅಕ್ರಮ ಕಸ ಡಂಪಿಂಗ್ ಹೊಗೆಯಿಂದ ವ್ಯಕ್ತಿ ಸಾವು
ಹೊಸಕೋಟೆ ತಾಲೂಕಿನ ಭುವನಹಳ್ಳಿಯಲ್ಲಿ ಅಕ್ರಮ ಕಸದ ಡಂಪಿಂಗ್‌ನಿಂದ ಹೊರಹೊಮ್ಮುವ ಹೊಗೆಯಿಂದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಐವತ್ತು ವರ್ಷದ ಮುನೇಗೌಡ ಮೃತಪಟ್ಟವರು. ಕಸದ ರಾಶಿಯಿಂದ ಬಂದ ಹೊಗೆಯ ಕಾರಣ ಮುನೇಗೌಡ ಅವರಿಗೆ ಏಕಾಏಕಿ ಉಸಿರುಗಟ್ಟಿದೆ. ಅವರನ್ನು ಆಸ್ಪತ್ರೆಗೆ
ಬೆಂಗಳೂರಿನಲ್ಲಿ ಪತಿ, ಪತ್ನಿ, ಮಕ್ಕಳು ಸೇರಿ ಕುಟುಂಬವೇ ಆತ್ಮಹತ್ಯೆ
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ. ಪತಿ ಅನೂಪ್ ಕುಮಾರ್, ಪತ್ನಿ ರಾಖಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ.
ಇನ್ಮುಂದೆ ಅವಿವಾಹಿತ ಜೋಡಿಗಿಲ್ಲ ಓಯೋ ರೂಂ
ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್ ರೂಮ್ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. ಮೊದಲಿಗೆ ಮೀರತ್ನಿಂದ ಈ ಕ್ರಮವನ್ನು ಜಾರಿಗೊಳಿಸಿದೆ. ಓಯೋ ತನ್ನ ಪರಿಷ್ಕೃತ ನೀತಿಯಡಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್ಲೈನ್ ಬುಕಿಂಗ್ ಮಾಡುವಾಗ




