Menu

ಬೆಂಗಳೂರಿನಲ್ಲಿ ಪತಿ, ಪತ್ನಿ, ಮಕ್ಕಳು ಸೇರಿ ಕುಟುಂಬವೇ ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ. ಪತಿ ಅನೂಪ್‌ ಕುಮಾರ್‌, ಪತ್ನಿ ರಾಖಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ನೀಡಬೇಕಿದೆ. ಸಾಲಬಾಧೆ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ದಂಪತಿ ಮಕ್ಕಳಿಗೆ

ಇನ್ಮುಂದೆ ಅವಿವಾಹಿತ ಜೋಡಿಗಿಲ್ಲ ಓಯೋ ರೂಂ

ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್​ ರೂಮ್​ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. ಮೊದಲಿಗೆ ಮೀರತ್​ನಿಂದ ಈ ಕ್ರಮವನ್ನು ಜಾರಿಗೊಳಿಸಿದೆ. ಓಯೋ ತನ್ನ ಪರಿಷ್ಕೃತ ನೀತಿಯಡಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್​ಲೈನ್ ಬುಕಿಂಗ್ ಮಾಡುವಾಗ

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ

ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ

ರಾಜ್ಯದಲ್ಲಿ ಮೂರು ದಿನ ಕಾಡಲಿದೆ ಅತಿ ಶೀತಗಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತೀವ್ರವಾದ ಶೀತಗಾಳಿ ವ್ಯಾಪಿಸಲಿದ್ದು, ಉಷ್ಣಾಂಶ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್,

ಸಿಂದಗಿಯಲ್ಲಿ ಚಿರತೆ ಓಡಾಟ, ಜನರಲ್ಲಿ ಆತಂಕ

ವಿಜಯಪುರ ನಗರದ ಸಿಂದಗಿ ಬೈಪಾಸ್ ಸುತ್ತಮುತ್ತ ಚಿರತೆ ಓಡಾಟ ನಡೆಸುತ್ತಿರುವುದುಉ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿನ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಸುರಕ್ಷಿತ ಕ್ರಮ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ

ಪಿಎಫ್​ಐ ಉಗ್ರರಿಗೆ ದುಬೈ ಹಣ ಹಂಚುತ್ತಿದ್ದಾತ ಎನ್‌ಐಎ ಬಲೆಗೆ

ದುಬೈನಿಂದ ಬರುತ್ತಿದ್ದ ಹಣವನ್ನು ನಿಷೇಧಿತ ಪಿಎಫ್​ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ಕರ್ನಾಟಕ ಹಾಗೂ ಕೇರಳದ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಬಂಧಿತ.

ಆರೋಪ ಮಾಡಿದರೆ ಸಾಲದು, ಸಾಬೀತು ಮಾಡಿ: ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ  ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯ ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ: ಕುಮಾರಸ್ವಾಮಿ ಕಿಡಿ

ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60

ಪ್ರಿಯಕರನೊಂದಿಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ಪ್ರಿಯಕರನ ಜೊತೆ ವಾಸವಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಇತ್ತು. ಗಂಡನ