ಕೇರಳ ಸಿಎಂ ಆಗಿ ವಿಡಿ ಸತೀಶನ್ ಪ್ರಮಾಣವಚನ
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದು, 20 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿಡಿ ಸತೀಶನ್ ಹಾಗೂ 20 ಮಂದಿ ಸಚಿವರಿಗೆ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೇವಂತ್ ರೆಡ್ಡಿ, ಕೆಸಿ.ವೇಣುಗೋಪಾಲ್, ರಾಜೀವ್ ಚಂದ್ರಶೇಖರ್,
ಮನೆ ಮುಂದೆ ನಿಂತಿದ್ದ ಶಿಕ್ಷಕ ಗುಡುಗು ಸಿಡಿಲಿನ ಅಬ್ಬರಕ್ಕೆ ಬೆಚ್ಚಿ ಹೃದಯಾಘಾತಕ್ಕೆ ಬಲಿ
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಅಬ್ಬರಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ (56) ಮೃತಪಟ್ಟವರು. ಅವರು
ದಾವಣಗೆರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಅತ್ಯಾಚಾರಿ ಅರೆಸ್ಟ್
ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬೋಗಳೆರಹಟ್ಟಿ ಗ್ರಾಮದ ಟ್ರ್ಯಾಕ್ಟರ್ ಚಾಲಕ
ಮನೆ ಲೀಸ್ ಆಫರ್ ಮುಂದಿಟ್ಟು ಗ್ರಾಹಕರಿಗೆ 200 ಕೋಟಿ ರೂ. ವಂಚನೆ
ಬೆಂಗಳೂರಿನಲ್ಲಿ ಮನೆ ಲೀಸ್ಗೆ ನೀಡುವುದಾಗಿ ಗ್ರಾಹಕರಿಗೆ ಭರ್ಜರಿ ಆಫರ್‌ಗಳನ್ನು ನೀಡುವ ಮೂಲಕ ಕಂಪೆನಿಯೊಂದು 200 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಪ್ರಕರಣ ಬಹಿರಂಗವಾಗಿದೆ. ಜಾನ್ಸ್ ಅಸೆಟ್ ಹೆಸರಿನ ಮಿಡಿಯೇಟರ್ ಕಂಪನಿಯು 300ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದು, ಮಾಲೀಕ ಪರಾರಿಯಾಗಿದ್ದಾನೆ. ಕಂಪನಿ
ಶಿರಾದಲ್ಲಿ ಯುವಕನೊಂದಿಗೆ ಮಗಳ ಪ್ರೀತಿ ಒಪ್ಪದೆ ಕೊಲೆಗೈದ ತಂದೆ
ಮಗಳು ಯುವಕನೊಬ್ಬನನ್ನು ಪ್ರೀತಿಸಿ ಮನೆತನದ ಗೌರವಕ್ಕೆ ಕುಂದು ಮಾಡುತ್ತಿದ್ದಾಳೆಂದು ಸಿಟ್ಟಿಗೆದ್ದ ತಂದೆ ಆಕೆಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ.’ ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ಆರೋಪಿ
ತೈಲ ಸಂಕಷ್ಟ: ಜನತೆಗೆ ಕೇಂದ್ರ ನೆರವಾಗಲಿ
ತೈಲ ಸಂಕಷ್ಟದ ಈ ವೇಳೆಯಲ್ಲಿ ಯಾವ ರಾಜ್ಯದ ಸಾಮಾನ್ಯನಿಗೂ ಹೊರೆಯಾಗದ ರೀತಿಯಲ್ಲಿ ಒಂದಷ್ಟು ಪರಿಹಾರದ ಪ್ಯಾಕೇಜ್ ಅನ್ನು ಕೇಂದ್ರ ಸರ್ಕಾರ ಘೋಷಿಸುವುದು ಅನಿವಾರ್ಯ. ಈ ದಿಶೆಯಲ್ಲಿ ಜನತೆ ತ್ಯಾಗ ಮಾಡುವುದರಲ್ಲಿ ಅನುಮಾನವಿಲ್ಲ. ಆದರೆ ಈ ತ್ಯಾಗವು ಮಂತ್ರಿ, ಮಹೋದಯರು, ಅಧಿಕಾರಿಗಳು, ಮತ್ತು
ದರ್ಶನ್ ವಿರುದ್ಧ ಮಾಧ್ಯಮ ವಿಚಾರಣೆ: ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಚಿತ್ರದುರ್ಗದ ರೇಣುಕಾಸ್ವಾಮಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ‘ಮಾಧ್ಯಮ ವಿಚಾರಣೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ ನೀಡಿದೆ. ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು
ತಂದೆ, ಆತನ ಸ್ನೇಹಿತನಿಂದ ಮಗಳ ಮೇಲೆ ಅತ್ಯಾಚಾರ
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ತಂದೆಯೊಬ್ಬ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ. ತಾಯಿಗೆ ವಿಷಯ ತಿಳಿಯಬಾರದೆಂದು ಮಗಳಿಗೆ
ದೇಶದಲ್ಲಿ ಮೊದಲ ಬಾರಿಗೆ 182 ಕೋಟಿ ಮೌಲ್ಯದ ಜಿಹಾದಿ ಡ್ರಗ್ ವಶ
ಭಾರತದಲ್ಲಿ ಮೊದಲ ಬಾರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) 182 ಕೋಟಿ ಮೌಲ್ಯದ ಕ್ಯಾಪ್ಟಗನ್ ಡ್ರಗ್ ವಶಪಡಿಸಿಕೊಂಡಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಡ್ರಗ್ಸ್ ಅನ್ನು ಪಶ್ಚಿಮ ಏಷ್ಯಾಕ್ಕೆ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಮುಂದ್ರಾ
ರಾಜ್ಯದಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆ
ಮುಂದಿನ 3 ರಿಂದ 4 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಉಪಸಾಗರದಲ್ಲಿ




