Menu

ಒಂದು ಸಿಗರೇಟ್ ಸೇವನೆಯಿಂದ 20 ನಿಮಿಷ ಆಯಸ್ಸು ಕಡಿಮೆ: ಸಮೀಕ್ಷೆ ವರದಿ

ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ. ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11 ನಿಮಿಷಗಳಷ್ಟು ಆಯಸ್ಸು ಕಡಿಮೆ ಆಗುತ್ತದೆ ಎಂದು ಕಂಡು ಬಂದಿತ್ತು. ಆದರೆ ಜನಸಂಖ್ಯೆ ಆಧರಿಸಿ ನಡೆಸಿದ ಹೊಸ ಸಮೀಕ್ಷೆಯಲ್ಲಿ ಒಂದು ಸಿಗರೇಟು ಸೇದುವುದರಿಂದ ಪುರುಷರು ಸುಮಾರು 20 ನಿಮಿಷ

ಬೈಕ್ ಮೇಲೆ ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ಮೂವರು ಸಾವು

ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ. ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ

ಮನಮೋಹನ್ ಸಿಂಗ್ ಗೆ ಭಾರತ ರತ್ನ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ

ಕಾಂಗ್ರೆಸ್ ಗೆ ಚುನಾವಣೆ ಸಮಯದಲ್ಲೇ ಸೇರುತ್ತಿದ್ದೆ: ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ಹೆಸರಿಡಿ ಅಂದ ತಕ್ಷಣ ನಾನು ಸಿದ್ದರಾಮಯ್ಯ ಪರ ಅಥವಾ ಕಾಂಗ್ರೆಸ್ ಪರ ಅಂತಲ್ಲ. ಕಾಂಗ್ರೆಸ್ ಕೂಡ ಸೇರಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಾನು

ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿಕೆ ಸುರೇಶ್ ದೂರು

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ

ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ

ಸರ್ಕಾರದ ರಾಜಕೀಯ ಹಸ್ತಕ್ಷೇಪ, ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌.ಅಶೋಕ ಆಕ್ರೋಶ

ಬೆಂಗಳೂರು, ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಮಾರ್ಗಸೂಚಿ ಪ್ರಕಟ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ

ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ

ಸತತ ಪ್ರಯತ್ನ ಯಶಸ್ಸಿನ ಗುಟ್ಟು: ಡಾ.ಡಿ.ವೀರೇಂದ್ರ ಹೆಗ್ಗಡೆ

ಧಾರವಾಡ:  ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಗಮನಹರಿಸಬೇಕು ಮತ್ತು ಸಮಾಜದ ಸೌಕರ್ಯಕ್ಕಾಗಿ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಮೌಲ್ಯಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು. 2024-25 ನೇ ಬ್ಯಾಚ್ನ ಯುಜಿ ಮತ್ತು ಪಿಜಿ ಕಾರ್ಯಕ್ರಮಗಳಿಗೆ ಹೊಸದಾಗಿ ಪ್ರವೇಶ ಪಡೆದ