Menu

6 ದಿನದಿಂದ ಬೋರ್ ವೆಲ್ ನಲ್ಲಿ ಸಿಲುಕಿರುವ 3 ವರ್ಷದ ಬಾಲಕಿ!

6 ದಿನಗಳ ಕಳೆದರೂ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿರುವ 3 ವರ್ಷದ ಬಾಲಕಿ ರಕ್ಷಣೆಗೆ ಪ್ರಯತ್ನಗಳು ಮುಂದುವರಿಯುತ್ತಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಕಟ್ ಪುತಲಿ ಎಂಬಲ್ಲಿ ಸೋಮವಾರ 3 ವರ್ಷದ ಬಾಲಕಿ ಚೇತನಾ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ಆಕೆಯ ರಕ್ಷಣೆಗೆ ಜಿಲ್ಲಾಡಳಿತ ಹರಸಾಹಸಪಡುತ್ತಿದೆ. ಕಳೆದೆರಡು ದಿನ ಸುರಿದ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ. ೬ ದಿನಗಳಿಂದ ಕೊಳವೆ ಬಾವಿಯಲ್ಲಿ ಸಿಲುಕಿರುವ ಮಗಳನ್ನು ಹೇಗಾದರೂ ರಕ್ಷಿಸಿ

ನಿತಿಶ್ ರೆಡ್ಡಿ ಚೊಚ್ಚಲ ಶತಕ: ಮತ್ತೆ ಫಾಲೋಆನ್ ಭೀತಿಯಿಂದ ಭಾರತ ಪಾರು

ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಫಾಲೋಆನ್ ಭೀತಿಯಿಂದ ಪಾರಾಗಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನದಾಟ ಮಳೆಕಾಟದಿಂದಾಗಿ ಬೇಗನೇ ಅಂತ್ಯಗೊಂಡಿದ್ದು,

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ದೇಶಕಂಡ ಅಪರೂಪದ ರಾಜಕಾರಣಿ ಹಾಗೂ ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆದಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ

ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಒಪ್ಪಿಗೆ

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆ: ಅಂತಿಮ ನಮನ ಸಲ್ಲಿಸಿದ ಸಿಎಂ ಡಿಸಿಎಂ!

ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದೆ. ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮನಮೋಹನ್ ಸಿಂಗ್ ನಿಧನಕ್ಕೆ ಇಡೀ ದೇಶವೇ ಕಂಬನಿ

ಬಾಕ್ಸಿಂಗ್ ಡೇ ಟೆಸ್ಟ್: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!

ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ

6 ಬಾರಿ ಛಡಿಯೇಟು ಹೊಡೆದುಕೊಂಡ ಬಿಜೆಪಿ ನಾಯಕ ಅಣ್ಣಾಮಲೈ!

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ

ಮನಮೋಹನ್ ಸಿಂಗ್ ನಿಂದಿಸಿದ್ದ ಪಾಕ್ ಪ್ರಧಾನಿಗೆ ಮೋದಿ ತರಾಟೆ!

ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿಂದಿಸಿದ್ದ 2013ರಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ನರೇಂದ್ರ ಮೋದಿ ಸಾರ್ವಜನಿಕವಾಗಿಯೇ ಟೀಕಿಸಿದ್ದರು. ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಪತ್ರಕರ್ತರ ಜತೆಗೆ ನಡೆಸಿದ ಸಭೆಯಲ್ಲಿ ಷರೀಫ್ ಅವರು ಪ್ರಧಾನಿ ಸಿಂಗ್ ಅವರನ್ನು `ಹಳ್ಳಿಯ ಮಹಿಳೆ’

ದೇಶಕ್ಕೆ ಮನಮೋಹನ್ ಸಿಂಗ್ ಕೊಟ್ಟ ಕೊಡುಗೆ ಚಿರಸ್ಮರಣೀಯ: ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು. ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರು; ಮನಮೋಹನ್

ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದ ದೇಶವನ್ನು ಸರಿದಾರಿಗೆ ತಂದ ಮನಮೋಹನ್ ಸಿಂಗ್: ಹೆಚ್.ಡಿ.ದೇವೇಗೌಡ

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ