ಮನುಷ್ಯರೆಲ್ಲ ಕಳೆದು ಹೋಗಿ ಧರ್ಮ-ಜಾತಿಗಳು ಜೀವ ಪಡೆದಿವೆ
ನಿಸ್ವಾರ್ಥದಿಂದ ಮುಂಜಾನೆ ಎಲ್ಲರನ್ನೂ ಎಬ್ಬಿಸಿ ಅನ್ನ ಅರಸುವ ಕಾಗೆ, ಸತ್ತಾಗ ಇಡುವ ಪಿಂಡ ತಿನ್ನಲು ಬಂದಾಗ ಅದರ ತಲೆಯಲ್ಲಿ ಸುಳಿಯುವುದಿಲ್ಲ ಸತ್ತವ ಯಾವ ಜಾತಿಯವನಿರಬಹುದು ಎಂಬ ಪ್ರಶ್ನೆ. ಮಂದಿರ, ಮಸೀದಿ, ಚರ್ಚ್ನ ತುತ್ತ ತುದಿಯಲ್ಲಿ ಕೂರುವ ಪಾರಿವಾಳಕ್ಕೆ ಯಾವ ವ್ಯತ್ಯಾಸವೂ ಕಂಡು ಬರುವುದಿಲ್ಲ. ಕಾರಣ, ಧರ್ಮಗಳ ಹಂಗಿಗೆ ಅದೆಂದಿಗೂ ಒಳಗಾಗಿಲ್ಲ. ಎರಡು ದೇಶಗಳ ನಡುವೆ ಎಳೆದ ಗಡಿರೇಖೆಯ ಮೇಲೆ ಹಾರಾಡುವ ಹದ್ದು ಎಂದಾದರೂ ಯೋಚನೆ ಮಾಡಿದ್ದಿದೆಯೇ, ಕೇಳಿ ಬರುತ್ತಿರುವ ಮದ್ದು
ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು
ಹದ ತಪ್ಪಿದ ಭಕ್ತಿಯ ಸೀಮೆ: ಜಲಮೂಲದ ಮೇಲೆ ವಿನಾಶಕ ಕ್ರೌರ್ಯ
ದೇವರು-ಧರ್ಮ ಆವರಣದ ಪರಿಧಿಯೊಳಗೆ ಬಂಧಿಯಾಗಿರುವ ಸಮುದಾಯದ ಮನಸ್ಥಿತಿ ಪೋಷಿಸುವ ಹಾಗೂ ನಿಯಂತ್ರಿಸುವ ಬಹುಮುಖ್ಯ ಉಪಕರಣವೆಂದರೆ ಪುರಾಣ. ವೈಜ್ಞಾನಿಕ ಆಧಾರವಿಲ್ಲದೆಯೇ ಪ್ರಭಾವ ಬೀರುವುದರಲ್ಲಿ ನಿಸ್ಸೀಮ ಕಲ್ಪಕತೆ ಸೃಷ್ಟಿಸಿ, ಆ ಮೂಲಕ ತನ್ನ ವರ್ಚಸ್ಸನ್ನು ಉಳ್ಳವರಿಂದ ದತ್ತವಾಗಿ ಪಡೆದುಕೊಂಡಿದೆ. ಪುರಾಣ ಪ್ರಪಂಚವೊಂದು ವಾಸ್ತವ ಸನ್ನಿವೇಶದಲ್ಲಿ
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಅಸು ನೀಗಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಜನರು ಮಹಾಕುಂಭಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಜನಸಂದಣಿ ಸೇರಿದ್ದ ಕಾರಣ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಯಿತು
ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಪಡೆಯಲು ಸಿದ್ದರಾಮಯ್ಯ, ಡಿಕೆಶಿ ಜತೆ ಹೋರಾಟಕ್ಕೆ ಸಿದ್ದ: ಹೆಚ್.ಡಿ.ದೇವೇಗೌಡ
ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. 25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ,
ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು: ಡಿಕೆ ಶಿವಕುಮಾರ್ ಕಿಡಿ
ಬೆಂಗಳೂರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ಶನಿವಾರ ಕಾಂಗ್ರೆಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಆಯ್ಕೆಯಾದ ಒಂದೇ ದಿನದಲ್ಲಿ ಮೋದಿಯಿಂದ ಮೇಕೆದಾಟು ಯೋಜನೆಗೆ
ಬೆಂಗಳೂರಿನಲ್ಲಿ ಮೊಬೈಕ್ ತಯಾರಿಕಾ ಘಟಕ ಆರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್
ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್
ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ
ನಾವು ಕಾಂಗ್ರೆಸ್ ಪಕ್ಷದ ಆರ್ಮಿಗಳು ಹೊರತು ವ್ಯಕ್ತಿಗಳ ಆರ್ಮಿಯಲ್ಲ: ಸತೀಶ್ ಜಾರಕಿಹೊಳಿ
ಕೋಲಾರ: ನಾವು ಕಾಂಗ್ರೆಸ್ ಪಕ್ಷದ ಪರ ಆರ್ಮಿ ರೀತಿ ಕೆಲಸ ಮಾಡುವವರೇ ಹೊರತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆರ್ಮಿ ರೀತಿ ಕೆಲಸ ಮಾಡುವವರಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ
ವಿಶ್ವವಿದ್ಯಾಲಯಗಳಿಗೆ 342 ಕೋಟಿ ರೂ. ನೀಡಲು ಸರ್ಕಾರಕ್ಕೆ ಶಕ್ತಿ ಇಲ್ಲ: ಆರ್.ಅಶೋಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ




