Menu

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ  ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಆಗ್ರಹ 

ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ.  ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ

27 ಸಾವಿರ ಕೋಟಿ ರೂ. ವಂಚನೆ ಕೇಸ್‌: ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ದಾಳಿ

ಸಾರ್ವಜನಿಕ ವಲಯದ ಬ್ಯಾಂಕ್​ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಅನಿಲ್ ಅಂಬಾನಿಯ ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ಸಿಬಿಐ ಕಾರ್ಯಾಚರಣೆ ತೀವ್ರಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತಾಯಿಯ ನೋಡಿಕೊಳ್ಳಲಾಗದ ಮಗಳು ಆಸ್ತಿ ವಾಪಸ್‌ ನೀಡಬೇಕು: ಹೈಕೋರ್ಟ್‌ ಚಾಟಿ

ತಾಯಿಯನ್ನು ನೋಡಿಕೊಳ್ಳಲಾಗದ ಮಗಳು ತಾಯಿಯ ಆಸ್ತಿಯನ್ನು ಅವರಿಗೆ ವಾಪಸ್‌ ನೀಡುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿ ಮತ್ತು ಉಪವಿಭಾಗಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಪುರಸ್ಕರಿಸಿದೆ. ತಾಯಿಯಯನ್ನು ನೋಡಿಕೊಳ್ಳುವ ಕಾನೂನು, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ

ನಟ ದರ್ಶನ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ದರ್ಶನ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತಿರಸ್ಕರಿಸಿದೆ. “ಜಾಮೀನು ನೀಡಲು ತೀರಾ ಆತುರವಾಗುತ್ತಿದೆಯಲ್ಲವೇ?” ಎಂದು

ನಮ್ಮನ್ನು ಟೀಕಿಸದಿದ್ದರೆ ಕುಮಾರಸ್ವಾಮಿಗೆ ರಾಜಕೀಯ ಬದುಕು ಇಲ್ಲ: ಡಿಕೆ ಶಿವಕುಮಾರ್

“ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರು ಬಿಡದಿ

ಪೆಟ್ರೋಲ್ ಡೀಸೆಲ್ ಜೊತೆ ಸಿಎನ್‌ಜಿ ಬೆಲೆ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ದೇಶಾದ್ಯಂತ ಸಿಎನ್‌ಜಿ (CNG) ದರ ಪ್ರತಿ ಕೆಜಿಗೆ ಎರಡು ರೂ. ಹೆಚ್ಚಳವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ದರ ಏರಿಕೆಯಾಗಿದೆ. ಜಾಗತಿಕ ಇಂಧನ

ನೀಟ್-ಯುಜಿ ಪರೀಕ್ಷೆ ಜೂನ್ 21ಕ್ಕೆ

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಜೂನ್ 21 ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ತಡರಾತ್ರಿ ಉನ್ನತ ಮಟ್ಟದ ತುರ್ತು ಸಭೆ

ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣ ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ, ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ.  ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ

ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು

ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ

ವಸ್ತ್ರಸಂಹಿತೆಗೆ ಯಾಕಿಷ್ಟು ಪ್ರಾಮುಖ್ಯತೆ

ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಯೂನಿಫಾರಂ ಹೇಗಿರಬೇಕು.. ? ಇದು ಇಂದು- ನಿನ್ನೆಯ ಪ್ರಶ್ನೆಯಲ್ಲ. ದೇಶಕ್ಕೆ ಸ್ವರಾಜ್ಯ ಲಭಿಸಿದ ಆದಿಯಿಂದಲೂ ವಸ್ತ್ರ ಸಂಹಿತೆ ಎಂಬುದು ಈ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಂಗತಿ. ಶಾಲೆಯ ಯೂನಿಫಾರಂ ಎಂಬುದು ಏಕರೂಪದ ಸಂಕೇತ. ಇದು