Tuesday, November 10, 2026
Menu

ರಾಜ್ಯಪಾಲರು ಸುಗ್ರೀವಾಜ್ಞೆ ಪ್ರಸ್ತಾಪ ತಿರಸ್ಕರಿಸಿಲ್ಲ: ಸಚಿವ ಕೆ.ಎನ್.ರಾಜಣ್ಣ

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ರೂಪಿಸಿರುವ ಮಸೂದೆಯ ಸುಗ್ರೀವಾಜ್ಞೆ ಪ್ರಸ್ತಾಪವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ. ಒಂದಷ್ಟು ಮರು ಪರಿಶೀಲನೆ ಮಾಡುವಂತೆ ತಿಳಿಸಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಈ ಮಾಹಿತಿ ನೀಡಿದ ಅವರು, ಮೈಕ್ರೋ ಫೈನಾನ್ಸ್ ಕಂಪನಿಗಳೆಲ್ಲ ಬ್ಯಾಂಕಿಂಗ್ ನಿಯಮದಂತೆ ಕೆಲಸ ಮಾಡಬೇಕು. ಅದರಂತೆ ಅನೇಕ ಸಂಸ್ಥೆಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಹಲವರು ಖಾಸಗಿ ವಸೂಲಿ ಏಜೆಂಟ್ ಗಳನ್ನು ಇಟ್ಟು ಸಾಲಗಾರರಿಗೆ ಕಿರುಕುಳ

ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ.  ಈ ವೇಳೆ  ಗೀತಾ ಶಿವರಾಜ್ ಕುಮಾರ್  ಜೊತೆಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಟ ಶಿವರಾಜ್

ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ ತಲುಪಿದ ಡಿಕೆಶಿ ದಂಪತಿ

ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ  ಬರಮಾಡಿಕೊಂಡರು. ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ

ಸಿಎಂಗೆ ಧನ್ಯವಾದ ಸಲ್ಲಿಸಿದ KSPCB ಅಧ್ಯಕ್ಷ ,ಶಾಸಕ ನರೇಂದ್ರಸ್ವಾಮಿ

ಕರ್ನಾಟಕ ರಾಜ್ಯ  ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ  ನರೇಂದ್ರ ಸ್ವಾಮಿ

ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್‌

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ

ಕುಂಭ ಮೇಳದಿಂದ ಹೊರಟು ಕಾಶಿ ನದಿಯಲ್ಲಿ ಮುಳುಗಿ ಮೃತಪಟ್ಟ ಬಾಗಲಕೋಟೆ ವ್ಯಕ್ತಿ

ಬಾಗಲಕೋಟೆಯ ವ್ಯಕ್ತಿಯೊಬ್ಬರು ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಸತೀಶ್ ಜೋಷಿ (44) ಮೃತರು. ಸತೀಶ್‌ ಜೋಷಿ ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸು ತ್ತಿದ್ದರು. ವಾರದ ಹಿಂದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ

ರಾಜಕೀಯದಿಂದ ಮಾನವ ಸಂಬಂಧ ಹಾಳಾಗದಿರಲಿ: ಸಚಿವ ಕುಮಾರಸ್ವಾಮಿ

ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು.  ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ. ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಾಗಮಂಗಲ ತಾಲೂಕಿನ

ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಗೆ ಹೆಚ್‌ಡಿಕೆ ಚಾಲನೆ

ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ  ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾಗಿ ತಿಳಿಸಿದ್ದಾರೆ.

ಅನ್ಯಜಾತಿಯವನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದೇ ಬಿಟ್ಟ ತಂದೆ 

ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಬರ್ಗೆನ ತಾಂಡಾದಲ್ಲಿ  ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಳು ಎಂಬ  ಕಾರಣಕ್ಕೆ ಅಪ್ರಾಪ್ತ ವಯಸ್ಕ ಮಗಳನ್ನ ಕೊಲೆ ಮಾಡಿ ತಂದೆ ಪರಾರಿಯಾಗಿರುವ ಪ್ರಕರಣ ನಡೆದಿದೆ. ಬರ್ಗೆನ ತಾಂಡಾದ ನಿವಾಸಿ ಪರಶುರಾವ ಎಂಬಾತ  ತನ್ನ ಮಗಳು ಅನ್ಯಜಾತಿಯ ಯುವಕನನ್ನು